ಬಿಜೆಪಿ ನಾಯಕರ ತುರ್ತು ಸಭೆ ಕರೆದ ಅಮಿತ್ ಶಾ!
Recommended Video

ಬೆಂಗಳೂರು, ಜನವರಿ 29 : ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕರ್ನಾಟಕ ಬಿಜೆಪಿ ನಾಯಕರ ತುರ್ತು ಸಭೆ ಕರೆದಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ಸಭೆ ನಡೆಯಲಿದೆ.
ಸೋಮವಾರ ಬೆಳಗ್ಗೆ ತುರ್ತಾಗಿ ಅಮಿತ್ ಶಾ ಸಭೆ ಕರೆದಿದ್ದಾರೆ. ಇಂದು ಸಂಜೆ 8 ಗಂಟೆಗೆ ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಸಭೆ ನಡೆಯಲಿದೆ. ರಾಜ್ಯ ಬಿಜೆಪಿಯ ಪ್ರಮುಖ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ದೆಹಲಿಯಲ್ಲಿಯೇ ಇದ್ದಾರೆ. ಸಂಸತ್ ಅಧಿವೇಶನ ನಡೆಯುತ್ತಿದೆ. ಅನಂತ್ ಕುಮಾರ್, ಪ್ರಹ್ಲಾದ್ ಜೋಶಿ ಅವರು ದೆಹಲಿಯಲ್ಲಿ ಇದ್ದಾರೆ. ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಮುಂತಾದ ನಾಯಕರು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಸಮಾವೇಶದ ಬಗ್ಗೆ ಚರ್ಚೆ : ಬಿಜೆಪಿಯ ಪರಿವರ್ತನಾ ಯಾತ್ರೆ ಮುಕ್ತಾಯಗೊಂಡಿದ್ದು ಫೆ.4ರಂದು ಸಮಾರೋಪ ಸಮಾರಂಭ ನಡೆಯಲಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ.
ಅರಮನೆ ಮೈದಾನಲ್ಲಿ ನಡೆಯುವ ಸಮಾವೇಶದ ಸಿದ್ಧತೆ, ಚುನಾವಣಾ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಲು ಅಮಿತ್ ಶಾ ಸಭೆ ಕರೆದಿದ್ದಾರೆ. ಬಿಜೆಪಿ ಈ ಸಮಾವೇಶವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ.












Click it and Unblock the Notifications