ಉತ್ತರ ಕರ್ನಾಟಕ ಮೇಲೆ ಅಮಿತ್ ಶಾ ಕಣ್ಣು; ಗೆಲ್ಲಲು ತಂತ್ರವೇನು?
ಬೆಂಗಳೂರು, ಏಪ್ರಿಲ್ 22: ಕರ್ನಾಟಕದಲ್ಲಿ ಬಿಸಿಲಿನ ಝಳದ ಜೊತೆ ಲೋಕಸಭೆ ಚುನಾವಣೆ ಪ್ರಚಾರವೂ ಜೋರಾಗಿದೆ. ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ರಾಜ್ಯದಲ್ಲಿ ಮತದಾನ ನಡೆಯಲಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರು ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ.
ಬಿಜೆಪಿಯ ಹಿರಿಯ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ ಈಗಾಗಲೇ ಪ್ರಚಾರ ನಡೆಸಿದ್ದಾರೆ. ಎರಡನೇ ಹಂತದ ಪ್ರಚಾರಕ್ಕಾಗಿ ಅವರು ಮಂಗಳವಾರ ರಾಜ್ಯಕ್ಕೆ ಮತ್ತೆ ಆಗಮಿಸುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿಯೂ ಅವರು ಪ್ರಚಾರವನ್ನು ನಡೆಸಲಿದ್ದಾರೆ.

ಹಳೆ ಮೈಸೂರು ಮತ್ತು ಉತ್ತರ ಕರ್ನಾಟಕ ಭಾಗವನ್ನು ಟಾರ್ಗೆಟ್ ಮಾಡಿಕೊಂಡು ಅಮಿತ್ ಶಾ ಪ್ರಚಾರವನ್ನು ನಡೆಸಲಿದ್ದಾರೆ. ಬೆಂಗಳೂರು ನಗರದಲ್ಲಿ 4 ರೋಡ್ ಶೋಗಳನ್ನು ಮಾಡಲಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಯಾವ-ಯಾವ ಕ್ಷೇತ್ರದಲ್ಲಿ ಪ್ರಚಾರ ನಡೆಸಬೇಕು ಎಂದು ಅವರು ಈಗಾಗಲೇ ವರದಿ ಪಡೆದಿದ್ದಾರೆ.
2ನೇ ಹಂತದಲ್ಲಿ ಮತದಾನ: ಕರ್ನಾಟಕದ 28 ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಏಪ್ರಿಲ್ 26ರಂದು 14 ಮತ್ತು 2ನೇ ಹಂತದಲ್ಲಿ ಮೇ 7ರಂದು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 2ನೇ ಹಂತದಲ್ಲಿ ದಾವಣಗೆರೆ, ಶಿವಮೊಗ್ಗ ಹೊರತುಪಡಿಸಿದರೆ ಉತ್ತರ ಕರ್ನಾಟಕ ಭಾಗದ ಕ್ಷೇತ್ರಗಳಲ್ಲಿ ಮತದಾನ ನಿಗದಿಯಾಗಿದೆ.
ಬೆಂಗಳೂರು, ಉಡುಪಿ-ಚಿಕ್ಕಮಗಳೂರು ಮತ್ತು ತುಮಕೂರು ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರವಾಗಿ ಅಮಿತ್ ಶಾ ಪ್ರಚಾರವನ್ನು ನಡೆಸಲಿದ್ದಾರೆ. ಬಳಿಕ ಉತ್ತರ ಕರ್ನಾಟಕದ ಕಡೆ ಪ್ರಯಾಣ ಬೆಳೆಸಲಿದ್ದಾರೆ. ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಿ ಉತ್ತರ ಕರ್ನಾಟಕದ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಪ್ರಚಾರವನ್ನು ಅವರು ಮಾಡಲಿದ್ದಾರೆ.
ಈಗಾಗಲೇ ಕರ್ನಾಟಕ ಬಿಜೆಪಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಧಕ್ಕೆಯಾಗಿದೆ ಎಂದು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪವನ್ನು ಮಾಡುತ್ತಿದೆ. ಆದ್ದರಿಂದ ಹುಬ್ಬಳ್ಳಿಯಿಂದಲೇ ಅಮಿತ್ ಶಾ ಪ್ರಚಾರವನ್ನು ನಡೆಸಲಿದ್ದಾರೆ.
ಕಳೆದ ಚುನಾವಣೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಪಾರುಪತ್ಯ ಸಾಧಿಸಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಯಾವುದೇ ಸೀಟು ಗೆದ್ದಿಲ್ಲ. ಆದರೆ ಈಗ ಸಲ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಅಲ್ಲದೇ ಉತ್ತರ ಕರ್ನಾಟಕದ ಭಾಗದಲ್ಲಿ ಕಾಂಗ್ರೆಸ್‌ನ ಹಲವು ಸಚಿವರು ಪ್ರಭಾವಿಗಳಾಗಿದ್ದಾರೆ. ಆದ್ದರಿಂದ ಚುನಾವಣೆಯನ್ನು ಲಘುವಾಗಿ ಪರಿಗಣಿಸುವಂತಿಲ್ಲ.
ರೋಡ್ ಶೋ, ಸಮಾವೇಶಗಳ ಮೂಲಕ ಅಮಿತ್ ಶಾ ಉತ್ತರ ಕರ್ನಾಟಕದಲ್ಲಿ ಮತ ಬೇಟೆ ನಡೆಸಲಿದ್ದಾರೆ. ಎಂ. ಬಿ. ಪಾಟೀಲ್, ಶಿವಾನಂದ ಪಾಟೀಲ್, ಸತೀಶ್ ಜಾರಕಿಹೊಳಿ, ಸಂತೋಷ್ ಲಾಡ್, ಲಕ್ಷ್ಮೀ ಹೆಬ್ಬಾಳ್ಕರ್ ಹೀಗೆ ಸಾಲು ಸಾಲು ಕಾಂಗ್ರೆಸ್ ಸಚಿವರು ಉತ್ತರ ಕರ್ನಾಟಕ ಭಾಗದಲ್ಲಿ ಪ್ರಭಾವಿಗಳು. ಆದ್ದರಿಂದ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ತಂತ್ರವನ್ನು ರೂಪಿಸಿದೆ.
ಹುಬ್ಬಳ್ಳಿಯಿಂದ ಬೆಳಗಾವಿ ತನಕ ವಿವಿಧ ಕ್ಷೇತ್ರಗಳಲ್ಲಿ ಅಮಿತ್ ಶಾ ಪ್ರಚಾರವನ್ನು ನಡೆಸಿ ಮತಯಾಚನೆ ಮಾಡಲಿದ್ದಾರೆ. ಬೆಳಗಾವಿಯಲ್ಲಿ ರೋಡ್ ಶೋ ನಡೆಸುವ ಮೂಲಕ ಜಗದೀಶ್ ಶೆಟ್ಟರ್ ಪರವಾಗಿಯೂ ಅವರು ಪ್ರಚಾರವನ್ನು ನಡೆಸುವ ನಿರೀಕ್ಷೆ ಇದೆ.
ಮೇ 7ರಂದು ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ನಾಮಪತ್ರಗಳು ಈಗಾಗಲೇ ಸಲ್ಲಿಕೆಯಾಗಿದ್ದು, ವಾಪಸ್ ಪಡೆಯಲು ಏಪ್ರಿಲ್ 22ರ ಮಂಗಳವಾರ ಕೊನೆಯ ದಿನವಾಗಿದೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications