Amit Shah: ಹುಬ್ಬಳ್ಳಿ ಪ್ರವಾಸದಲ್ಲಿದ್ದ ಅಮಿತ್ ಶಾಗೆ ಆರೋಗ್ಯದಲ್ಲಿ ಏರುಪೇರು

ಹುಬ್ಬಳ್ಳಿ: ಕರ್ನಾಟಕ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆರೋಗ್ಯದಲ್ಲಿ ಶನಿವಾರ ದಿಢೀರ್ ಏರುಪೇರು ಉಂಟಾದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ಅವರು ಗೈರಾಗಿದ್ದಾರೆ. ವೈದ್ಯರ ಸಲಹೆಯ ಮೇರೆಗೆ ಅಮಿತ್‌ ಶಾ ಅವರು ತಂಗಿದ್ದ ಖಾಸಗಿ ಹೋಟೆಲ್‌ನಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ಶನಿವಾರ ಹುಬ್ಬಳ್ಳಿಯ ಗಬ್ಬೂರಿನಲ್ಲಿ ಕೆಎಲ್‌ಇ ಜಗದ್ಗುರು ಗಂಗಾಧರ ಮಹಾಸ್ವಾಮಿಗಳು ಮೂರುಸಾವಿರಮಠ ವೈದ್ಯಕೀಯ ಕಾಲೇಜಿನ ಹೊಸ ಶೈಕ್ಷಣಿಕ ಕಟ್ಟಡ ಹಾಗೂ 1,200 ಹಾಸಿಗೆಗಳ ಸಾಮರ್ಥ್ಯದ ಕೆಎಲ್‌ಇ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರವನ್ನು ಉದ್ಘಾಟಿಸುವ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗವಹಿಸಬೇಕಿತ್ತು. ಆದರೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಅವರು ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ.

Amit Shah Home Minister Falls Ill During Hubballi Visit Skips Scheduled Event Receives Treatment at Hotel

Amit Shah: ಹೋಟೆಲ್‌ನಲ್ಲೇ ವೈದ್ಯರಿಂದ ಚಿಕಿತ್ಸೆ

ಕಾರ್ಯಕ್ರಮದಲ್ಲಿ ಮಾತನಾಡಿದ ಕೆಎಲ್‌ಇ ಸೊಸೈಟಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ಮಾಜಿ ಸದಸ್ಯ ಪ್ರಭಾಕರ್ ಕೋರೆ, ಅಮಿತ್ ಶಾ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಗಿದ್ದು, ವೈದ್ಯರ ಸಲಹೆಯ ಮೇರೆಗೆ ಅವರು ಹೋಟೆಲ್‌ನಲ್ಲೇ ಉಳಿದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಅಮಿತ್‌ ಶಾ ಅವರೊಂದಿಗೆ ಆಗಮಿಸಿದ್ದ ವೈದ್ಯಕೀಯ ತಂಡವೇ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ ಎಂದು ಮೂಲಗಳು ತಿಳಿಸಿವೆ. ವೈದ್ಯಕೀಯ ತಂಡದಲ್ಲಿರುವ ಡಾ. ಅರುಣ್ ಪ್ರತಾಪ್ ಅವರು ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಆರೈಕೆ ಒದಗಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Amit Shah: ಅಧಿಕಾರಿಗಳ ಭೇಟಿ, ಭದ್ರತಾ ವ್ಯವಸ್ಥೆ ಪರಿಶೀಲನೆ

ಕೇಂದ್ರ ಗೃಹ ಸಚಿವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿದೆ ಎಂಬ ಮಾಹಿತಿ ಲಭ್ಯವಾದ ಬಳಿಕ ಹಿರಿಯ ಅಧಿಕಾರಿಗಳು ಅವರು ತಂಗಿದ್ದ ಹೋಟೆಲ್‌ಗೆ ಭೇಟಿ ನೀಡಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ್ ಹಾಗೂ ಐಜಿಪಿ ಲಾಬುರಾಮ್ ಅವರು ಸ್ಥಳಕ್ಕೆ ತೆರಳಿ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸಿದ್ದಾರೆ.
ಇದರೊಂದಿಗೆ ಹೋಟೆಲ್ ಸುತ್ತಮುತ್ತಲಿನ ಭದ್ರತಾ ವ್ಯವಸ್ಥೆಯನ್ನೂ ಅಧಿಕಾರಿಗಳು ಪರಿಶೀಲಿಸಿದ್ದಾರೆ.

ಎರಡು ಗಂಟೆ ವಿಶ್ರಾಂತಿಗೆ ವೈದ್ಯರ ಸಲಹೆ

ಪ್ರಸ್ತುತ ಸುಮಾರು ಎರಡು ಗಂಟೆಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ವೈದ್ಯರು ಅಮಿತ್ ಶಾ ಅವರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೋಟೆಲ್‌ನಲ್ಲಿಯೇ ಚಿಕಿತ್ಸೆ ಹಾಗೂ ವಿಶ್ರಾಂತಿ ಪಡೆದ ಬಳಿಕ ಅವರ ಮುಂದಿನ ಕಾರ್ಯಕ್ರಮಗಳ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಆರೋಗ್ಯದ ಕಾರಣದಿಂದ ಹುಬ್ಬಳ್ಳಿಯ ಕಾರ್ಯಕ್ರಮಕ್ಕೆ ಅಮಿತ್ ಶಾ ಗೈರಾದ ಹಿನ್ನೆಲೆಯಲ್ಲಿ, ಅವರ ಬದಲಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕರ್ನಾಟಕದ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಹಾಗೂ ಶ್ರೀ ಜಗದ್ಗುರು ಮೂರುಸಾವಿರಮಠದ ಶ್ರೀ ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ಅವರು ಸಂಸ್ಥೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಶುಕ್ರವಾರ ತಡರಾತ್ರಿ ಹುಬ್ಬಳ್ಳಿಗೆ ಆಗಮಿಸಿದ್ದ ಶಾ

ಕೆಎಲ್‌ಇ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಅಮಿತ್ ಶಾ ಅವರು ಶುಕ್ರವಾರ ತಡರಾತ್ರಿ ಹುಬ್ಬಳ್ಳಿಗೆ ಆಗಮಿಸಿದ್ದರು. ಅವರ ಶನಿವಾರದ ಪ್ರವಾಸದಲ್ಲಿ ಬೆಳಗಾವಿ ಜಿಲ್ಲೆಯ ಎಕ್ಸಾಂಬಾದಲ್ಲಿ 'ಶ್ರೀ ಬೀರೇಶ್ವರ ಸಹಕಾರಿ ಪತ್ತಿನ ಸಂಘ'ದ ನೂತನ ಪ್ರಧಾನ ಕಚೇರಿ ಕಟ್ಟಡ ಉದ್ಘಾಟನೆ ಹಾಗೂ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವ ಕಾರ್ಯಕ್ರಮವೂ ನಿಗದಿಯಾಗಿತ್ತು. ಈ ಕಾರ್ಯಕ್ರಮದ ಕುರಿತು ಮುಂಚಿತವಾಗಿ ವೇಳಾಪಟ್ಟಿ ಪ್ರಕಟಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+