ಮಾ.26, 27ರಂದು ಅಮಿತ್ ಶಾ ರಾಜ್ಯ ಪ್ರವಾಸ
ಬೆಂಗಳೂರು, ಮಾರ್ಚ್ 21 : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತೆ ಕರ್ನಾಟಕ ಭೇಟಿ ಕೈಗೊಂಡಿದ್ದಾರೆ. ಈ ಬಾರಿ ಅವರು ಮಲೆನಾಡು ಭಾಗದಲ್ಲಿ ರೋಡ್ ಶೋ ನಡೆಸಲಿದ್ದು, ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮಾ.26 ಮತ್ತು ಮಾ.27ರಂದು ಅಮಿತ್ ಶಾ ರಾಜ್ಯ ಪ್ರವಾಸ ಮಾಡಲಿದ್ದಾರೆ. ತುಮಕೂರು, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಗಳಲ್ಲಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಚುನಾವಣಾ ಪ್ರಚಾರ ಚಿತ್ರಸಂಪುಟ : ಬಿಜೆಪಿ | ಕಾಂಗ್ರೆಸ್ | ಜೆಡಿಎಸ್
ಈ ಬಾರಿ ಅಮಿತ್ ಶಾ ಅಡಿಕೆ ಮತ್ತು ತೆಂಗು ಬೆಳೆಗಾರರ ಜೊತೆ ಮಾತುಕತೆ ನಡೆಸಲಿದ್ದಾರೆ. ಚಿತ್ರದುರ್ಗದಲ್ಲಿ ಎಸ್ಟಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಶಿವಮೊಗ್ಗದಲ್ಲಿ ರೋಡ್ ಶೋ ನಡೆಸಿ, ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಚುನಾವಣೆ : ಬಿಜೆಪಿ ಟಿಕೆಟ್ ಹಂಚಿಕೆಗೆ ಎ, ಬಿ, ಸಿ ಸೂತ್ರ!
ಅಮಿತ್ ಶಾ ಕಾರ್ಯಕ್ರಮಗಳು
* ಮಾರ್ಚ್ 26ರಂದು ತಿಪಟೂರಿನಲ್ಲಿ ತೆಂಗು ಬೆಳೆಗಾರರ ಜೊತೆ ಸಂವಾದ
* ಮಾರ್ಚ್ 26ರಂದು ತೀರ್ಥಹಳ್ಳಿಗೆ ಭೇಟಿ, ಅಡಿಕೆ ಬೆಳೆಗಾರರ ಜೊತೆ ಸಂವಾದ
* ಮಾರ್ಚ್ 26ರಂದು ಶಿವಮೊಗ್ಗದಲ್ಲಿ ರೋಡ್ ಶೋ, ಸಮಾವೇಶದಲ್ಲಿ ಭಾಗಿ
* ಮಾರ್ಚ್ 27ಕ್ಕೆ ಚಿತ್ರದುರ್ಗಕ್ಕೆ ಭೇಟಿ
* ಎಸ್ಟಿ ಸಮಾವೇಶದಲ್ಲಿ ಭಾಗಿ
ಮಾರ್ಚ್ 30 ಮತ್ತು 31ರಂದು ಅಮಿತ್ ಶಾ ಪುನಃ ಕರ್ನಾಟಕ ಪ್ರವಾಸ ಮಾಡಲಿದ್ದಾರೆ. ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ.