ದೆಹಲಿ ಏರ್ಪೋರ್ಟಲ್ಲಿ ಶಾ-ಕುಮಾರಸ್ವಾಮಿ ಭೇಟಿ: ಸಿದ್ದರಾಮಯ್ಯ ಹೊಸ ಬಾಂಬ್
ಬೆಳಗಾವಿ, ಏಪ್ರಿಲ್ 29: ಜೆಡಿಎಸ್ ಪಕ್ಷ ಬಿಜೆಪಿಯ ಬಿ-ಟೀಂ, ಬಿಜೆಪಿ ಮತ್ತು ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳು ಎನ್ನುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಮತ್ತೊಂದು ಸ್ಫೋಟಕ ವಿಚಾರವನ್ನು ಬಾಯಿ ಬಿಟ್ಟಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಭೇಟಿಯಾಗಿದ್ದಾರೆ, ಅವರ ನಡುವೆ ಒಳ ಒಪ್ಪಂದ ನಡೆದಿದೆ ಎಂದು ಹೇಳಿದ್ದ ಸಿದ್ದರಾಮಯ್ಯ ಇವತ್ತು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮತ್ತೊಂದು ಹೇಳಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ, 'ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಕುಮಾರಸ್ವಾಮಿ ಹೇಳುತ್ತಿದ್ದಾರೆ' ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, "ಇವರಿಬ್ಬರೂ ವಿಮಾನದಲ್ಲಿ ಹೋಗಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದ್ದಾರೆ. ದಾಖಲೆಗಾಗಿ ಫೋಟೋ ತೆಗೆಸಿಕೊಡಬಹುದು," ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಈ ಬಗ್ಗೆ ದಾಖಲೆ ಬಿಡುಗಡೆ ಮಾಡಬಹುದಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, "ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುತ್ತೇನೆ," ಎಂದು ಬಾಂಬ್ ಸಿಡಿಸಿದ್ದಾರೆ.












Click it and Unblock the Notifications