Amit Shah: ಕರ್ನಾಟಕದ ಹೊನ್ನಾಳಿಯಲ್ಲಿನ ಸಮಾರಂಭ ಮುಂದೂಡಿಕೆ, ಕಾರಣ ಏನು?

ಕರ್ನಾಟಕದಲ್ಲಿ ಮಾರ್ಚ್ 12 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮಗಳು ಮುಂದೂಡಲ್ಪಟ್ಟಿವೆ.

ಬೆಂಗಳೂರು, ಮಾರ್ಚ್ 05: ಕರ್ನಾಟಕದಲ್ಲಿ ಮಾರ್ಚ್ 12 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮಗಳು ಮುಂದೂಡಲ್ಪಟ್ಟಿವೆ.

ಕರ್ನಾಟಕಕ್ಕೆ ಮಾರ್ಚ್ 12 ರಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಆಗಮಿಸಬೇಕಿತ್ತು. ಅಂದು ಅವರು ಶಿವಮೊಗ್ಗ ಜಿಲ್ಲೆಯ ಹೊನ್ನಾಳಿಯಲ್ಲಿ ಶಾಸಕ ಎಂ.ಪಿ .ರೇಣುಕಾಚಾರ್ಯ ಅವರು ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅವರು ಪಾಲ್ಗೊಳ್ಳಬೇಕಿತ್ತು. ಆದರೆ ಕರ್ನಾಟಕ ರಾಜ್ಯ ಲೋಕಾಯಕ್ತ ದಾಳಿಯ ಕಾರಣದಿಂದಾಗಿ ಅಮಿತ್ ಶಾ ಸಮಾರಂಭ ಮುಂಡೂಡಲಾಗಿದೆ.

Amit Shah Program in Honnali of Shivamogga district Sudden Cancel, Reason inside

ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರು ಲಂಚ ಸ್ವೀಕರಿಸುತ್ತಿರುವಾಗ ರೆಡ್ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು. ಬಳಿಕ ಶಾಸಕ ಮನೆ ಮೇಲೂ ರಾಜ್ಯ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣ ಹಣ, ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರಿದೆ.

ಈ ಸಂಬಂಧ ಚನ್ನಗಿರಿ ಕ್ಷೇತ್ರದ ಸುತ್ತಮುತ್ತಾ ಸ್ಥಳಗಳೆಲ್ಲವೂ ಲೋಕಾಯುಕ್ತ ಅಧಿಕಾರಿಗಳ ತನಿಖೆಯಲ್ಲಿದೆ. ಹೀಗಿರುವಾಗ ಮಾರ್ಚ್ 12 ರಂದು ಹೊನ್ನಾಳಿಗೆ ಆಗಮಿಸುವುದು ಸರಿಯಲ್ಲ ಎಂಬ ಕಾರಣಕ್ಕೆ ಅಮಿತ್ ಶಾ ಕಾರ್ಯಕ್ರಮ ಮುಂದೂಡಲಾಗಿದೆ. ಆದರೆ ಮುಂದೆ ಯಾವಾಗ ನಡೆಯಲಿದೆ ಎಂಬ ಮಾಹಿತಿ ಸಿಗಬೇಕಿದೆ.

Amit Shah Program in Honnali of Shivamogga district Sudden Cancel, Reason inside

ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಈ ಅಮಿತ್ ಶಾ ಅವರಿಗಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಾಂಡಗಳು, ಕುರುಬರಹಟ್ಟಿ, ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ 12 ಜಿಲ್ಲೆಗಳ ಸುಮಾರು 53 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಬೇಕಿತ್ತು. ಕೇಂದ್ರ ಸಚಿವರ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ, ಶಾಸಕ ರೇಣುಕಾಚಾರ್ಯ ಸೇರಿದಂತೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯ ಕಾರ್ಯ ನಿರ್ವಣಾಧಿಕಾರಿಗಳು ಸಮಾರಂಭದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಇದೀಗ ಮಾಡಾಳ ವಿರುಪಾಕ್ಷಪ್ಪ ಪ್ರಕರಣದಿಂದ ಏಕಾಏಕಿ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+