ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಫೆ. 18 ರಿಂದ ಅಮಿತ್ ಶಾ ಪ್ರವಾಸ

|
Google Oneindia Kannada News

ಮಂಗಳೂರು, ಫೆಬ್ರವರಿ 8: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆ ರಾಜಕೀಯ ಪಕ್ಷಗಳು ಚುನಾವಣಾ ತಂತ್ರ, ಪ್ರತಿತಂತ್ರ ರೂಪಿಸಲು ಆರಂಭಿಸಿವೆ. ಈ ನಡುವೆ ಬಿಜೆಪಿಯ ಚಾಣಕ್ಯ ಎಂದೇ ಗುರುತಿಸಲಾಗುವ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯದ ಕರಾವಳಿಯಲ್ಲಿ ಮತ್ತೆ ಕಮಲ ಅರಳಿಸಲು ರಣತಂತ್ರ ರೂಪಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಅಮಿತ್ ಶಾ ಫೆ. 18ರಿಂದ 20ರವರೆಗೆ ದಕ್ಷಿಣ ಕನ್ನಡ, ಉಡುಪಿ ಹಾಗು ಉತ್ತರ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಪಕ್ಷದ ಮುಖಂಡರೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ಫೆ. 18ರಂದು ರಾತ್ರಿ 8.30ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅಮಿತ್ ಶಾ ಮಂಗಳೂರಿನಿಂದ ನೇರವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಫೆ. 19ರಂದು ಬೆಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Amit Shah to start his Coastal Karnataka tour from Feb 19

ನಂತರ ಪುತ್ತೂರು ವಿವೇಕಾನಂದ ಕಾಲೇಜಿಗೆ ಭೇಟಿ ನೀಡಲಿರುವ ಅಮಿತ್ ಶಾ ಅಲ್ಲಿ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ12.30ಕ್ಕೆ ಬಂಟ್ವಾಳಕ್ಕೆ ತೆರಳಿ ಅಲ್ಲಿ ಬಿಜೆಪಿ ನವಶಕ್ತಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲಿದ್ದಾರೆ.

ಅಲ್ಲಿಂದ ಉಡುಪಿಗೆ ತೆರಳಿ ಸಾಯಂಕಾಲ ಮಲ್ಪೆಯಲ್ಲಿ ಬಿಜೆಪಿ ಮೀನುಗಾರರ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಅಮಿತ್ ಷಾ, ಅಂದೇ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ದೇವರ ದರ್ಶನ ಪಡೆದು, ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ಸ್ವಾಮೀಜಿಯವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇದೇ ವೇಳೆ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಲಿದ್ದಾರೆ.

ಫೆ. 20ರಂದು ಬೆಳಗ್ಗೆ 10 ಗಂಟೆಗೆ ಉಡುಪಿಯಲ್ಲಿ ಕಾರ್ಯಕರ್ತರ ಸಭೆ ನಡೆಸಲಿರುವ ಅಮಿತ್ ಶಾ, ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರಕ್ಕೆ ತೆರಳಲಿದ್ದಾರೆ. ಅಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು, 2 ಗಂಟೆಗೆ ಕುಮಟಾ, 4.30ಕ್ಕೆ ಶಿರಸಿ, ಬಳಿಕ ಹುಬ್ಬಳ್ಳಿಗೆ ಪ್ರಯಾಣ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

English summary
President of the BJP Amit Shah to visit Mangaluru on Feb 19 , Udupi on Feb 20 and Uttar Kannada districts on Feb 21 to make congress free government in India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X