ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜನವರಿ 18ರಂದು ಬೆಂಗಳೂರಿಗೆ ಅಮಿತ್ ಶಾ ಭೇಟಿ

|
Google Oneindia Kannada News

Recommended Video

Amith Shah to visit Bengaluru Today, but Why ? | AMIT SHAH | BENGALURU | TEJASVI SURYA | BJP

ಬೆಂಗಳೂರು, ಜನವರಿ 17 : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 18ರ ಶನಿವಾರ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಹುಬ್ಬಳ್ಳಿ, ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳುತ್ತಿದ್ದಾರೆ.

ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಮಿತ್ ಶಾ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಅರಮನೆ ಮೈದಾನ ಮತ್ತು ಜಯನಗರ 4ನೇ ಬ್ಲಾಕ್‌ನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹುಬ್ಬಳ್ಳಿಗೆ ತೆರಳಲಿದ್ದಾರೆ.

ಅಮಿತ್ ಶಾ ಕರ್ನಾಟಕ ಭೇಟಿ; ಎಚ್‌ಡಿಕೆ ಸರಣಿ ಟ್ವೀಟ್‌ಅಮಿತ್ ಶಾ ಕರ್ನಾಟಕ ಭೇಟಿ; ಎಚ್‌ಡಿಕೆ ಸರಣಿ ಟ್ವೀಟ್‌

ಅಮಿತ್ ಶಾ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ. ಅರಮನೆ ಮೈದಾನದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಬಳಿಕ ರಸ್ತೆ ಮಾರ್ಗದ ಮೂಲಕ ಜಯನಗರ 4ನೇ ಬ್ಲಾಕ್‌ಗೆ ಆಗಮಿಸಲಿದ್ದಾರೆ.

ಅಮಿತ್ ಶಾ ಕಾರ್ಯಕ್ರಮಕ್ಕಾಗಿ ಮರಗಳಿಗೆ ಕೊಡಲಿ: ಆಕ್ರೋಶಅಮಿತ್ ಶಾ ಕಾರ್ಯಕ್ರಮಕ್ಕಾಗಿ ಮರಗಳಿಗೆ ಕೊಡಲಿ: ಆಕ್ರೋಶ

Amit Shah To Visit Bengaluru On January 18

ಮಧ್ಯಾಹ್ನ 3 ಗಂಟೆಗೆ ಅಮಿತ್ ಶಾ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಕಚೇರಿಯನ್ನು ಜಯನಗರ 4ನೇ ಬ್ಲಾಕ್‌ನಲ್ಲಿ ಉದ್ಘಾಟಿಸಲಿದ್ದಾರೆ. ಬಳಿಕ ಅವರು ಹುಬ್ಬಳ್ಳಿ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳಿದ್ದಾರೆ.

ಅಮಿತ್ ಶಾ ರಾಜ್ಯಕ್ಕೆ ಬಂದೋದ ಮೇಲೆಯೇ ಸಂಪುಟ ವಿಸ್ತರಣೆ: ಬಿಎಸ್ವೈ ಅಮಿತ್ ಶಾ ರಾಜ್ಯಕ್ಕೆ ಬಂದೋದ ಮೇಲೆಯೇ ಸಂಪುಟ ವಿಸ್ತರಣೆ: ಬಿಎಸ್ವೈ

ಶನಿವಾರ ಸಂಜೆ 4 ಗಂಟೆಗೆ ಹುಬ್ಬಳ್ಳಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಅರಿವು ಮೂಡಿಸಲು ಸಮಾವೇಶ ಆಯೋಜನೆ ಮಾಡಲಾಗಿದೆ. ಈ ಸಮಾವೇಶದಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದು, ಬಳಿಕ ದೆಹಲಿಗೆ ವಾಪಸ್ ಆಗಲಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ರಾಜ್ಯದ ಬಿಜೆಪಿ ನಾಯಕರು ಸಂಪುಟ ವಿಸ್ತರಣೆ ಬಗ್ಗೆ ಅಮಿತ್ ಶಾ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ.

ಅಮಿತ್ ಶಾ ಆಗಮನಕ್ಕೂ ಒಂದು ದಿನ ಮೊದಲು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ. ಕರ್ನಾಟಕದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿ ಬಗ್ಗೆ ಕುಮಾರಸ್ವಾಮಿ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರದ ಬಗ್ಗೆ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಈ ಮೂಲಕ ಅಮಿತ್ ಶಾ ಆಗಮನಕ್ಕೂ ಮುನ್ನ ಚರ್ಚೆ ಹುಟ್ಟು ಹಾಕಿದ್ದಾರೆ. ಪ್ರವಾಹದ ಪರಿಹಾರದ ಬಗ್ಗೆ ಅಮಿತ್ ಶಾ ಮಾತನಾಡಲಿದ್ದಾರೆಯೇ? ಕಾದು ನೋಡಬೇಕಿದೆ.

English summary
Bharatiya Janata Party (BJP) President and Union home minister Amit Shah will visit Bengaluru on January 18, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X