ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜು.28ಕ್ಕೆ ಅಮಿತ್ ಶಾ ಆಗಮನ, ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ?

By Gururaj
|
Google Oneindia Kannada News

Recommended Video

ಜುಲೈ 28ರಂದು ಕರ್ನಾಟಕಕ್ಕೆ ಬರಲಿದ್ದಾರೆ ಅಮಿತ್ ಶಾ | Oneindia Kannada

ಬೆಂಗಳೂರು, ಜುಲೈ 12 : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜುಲೈ ಅಂತ್ಯದಲ್ಲಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಬಿ.ಎಸ್.ಯಡಿಯೂರಪ್ಪ ಮುಂದುವರೆಯಲಿದ್ದಾರೆಯೇ? ಎಂಬ ಬಗ್ಗೆ ಈಗ ಚರ್ಚೆಗಳು ಆರಂಭವಾಗಿವೆ.

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಮೊದಲ ಬಾರಿಗೆ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಜುಲೈ 28ರಂದು ಅಮಿತ್ ಶಾ ಬೆಂಗಳೂರಿಗೆ ಭೇಟಿ ನೀಡಲಿದ್ದು, ಪಕ್ಷದ ನಾಯಕರ ಜೊತೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ಯಡಿಯೂರಪ್ಪ-ಅಮಿತ್ ಶಾ ಭೇಟಿಯ ರಹಸ್ಯ ಬಹಿರಂಗ!ಯಡಿಯೂರಪ್ಪ-ಅಮಿತ್ ಶಾ ಭೇಟಿಯ ರಹಸ್ಯ ಬಹಿರಂಗ!

2019ರ ಲೋಕಸಭೆ ಚುನಾವಣೆಗೆ ಕರ್ನಾಟಕ ಬಿಜೆಪಿ ಸಿದ್ಧತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲು ಅಮಿತ್ ಶಾ ಆಗಮಿಸುತ್ತಿದ್ದಾರೆ. ಅಮಿತ್ ಶಾ ಆಗಮನದ ಸುದ್ದಿಯಿಂದ ಬಿಜೆಪಿಪಾಳಯದಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ.

ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿಯ ಹೊಸ ಸೂತ್ರಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿಯ ಹೊಸ ಸೂತ್ರ

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿತ್ತು. ಬಹುಮತ ಕಳೆದುಕೊಂಡು ಸರ್ಕಾರ ಪತನವಾಯಿತು. ಬಳಿಕ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಬಳಿಕ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ?

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ?

ಅಮಿತ್ ಶಾ ಕರ್ನಾಟಕ ಭೇಟಿ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಸ್ಪಷ್ಟನೆ ಸಿಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗಲಿದೆ ಎಂಬ ಬಗ್ಗೆ ಬಿಜೆಪಿ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.

ಬಿ.ಎಸ್.ಯಡಿಯೂರಪ್ಪ ಕರ್ನಾಟಕ ಬಿಜೆಪಿ ಅಧ್ಯಕ್ಷರು ಮತ್ತು ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕರು. ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮವನ್ನು ಪಕ್ಷ ಪಾಲನೆ ಮಾಡುವುದಾದದರೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗಬೇಕು ಎಂಬುದು ಈಗ ಹಬ್ಬಿರುವ ಸುದ್ದಿ.

ಒದೊಂದು ಬಣದಿಂದ ಒದೊಂದು ವಾದ

ಒದೊಂದು ಬಣದಿಂದ ಒದೊಂದು ವಾದ

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಬಿಜೆಪಿಯಲ್ಲಿಯೇ 2 ಬಣವಾಗಿದೆ. ಒಂದು ಬಣ ಲೋಕಸಭೆ ಚುನಾವಣೆ ಮುಗಿಯುವ ತನಕ ಕರ್ನಾಟಕ ಬಿಜೆಪಿ ಅಧ್ಯಕ್ಷರ ಬದಲಾವಣೆ ಆಗುವುದಿಲ್ಲ ಎಂದು ಹೇಳುತ್ತಿದೆ.

ಮತ್ತೊಂದು ಬಣ ಒಬ್ಬರಿಗೆ ಒಂದೇ ಹುದ್ದೆ ಎಂಬ ವಾದವನ್ನು ಮುಂದಿಟ್ಟಿದೆ. ಮಾಜಿ ಸಚಿವ ಸಿ.ಟಿ.ರವಿ, ಅರವಿಂದ ಲಿಂಬಾವಳಿ ಅವರ ಹೆಸರು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಕೇಳಿಬರುತ್ತಿದೆ. ಆದರೆ, ಪಕ್ಷದ ಯಾವ ನಾಯಕರು ಈ ಬಗ್ಗೆ ಹೇಳಿಕೆ ನೀಡಿಲ್ಲ.

ಲಿಂಗಾಯತ ಸಮುದಾಯದ ನಾಯಕರು

ಲಿಂಗಾಯತ ಸಮುದಾಯದ ನಾಯಕರು

ಬಿ.ಎಸ್.ಯಡಿಯೂರಪ್ಪ ಲಿಂಗಾಯತ ಸಮುದಾಯಕ್ಕೆ ಸೇರಿದ ಪ್ರಬಲ ನಾಯಕರು. ಆದ್ದರಿಂದ, ಲೋಕಸಭೆ ಚುನಾವಣೆ ತನಕ ಅವರನ್ನು ಬದಲಾವಣೆ ಮಾಡುವುದಿಲ್ಲ ಎಂಬುದು ಕೆಲವು ಬಿಜೆಪಿ ನಾಯಕರ ವಾದ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಲಿಂಗಾಯತ ಸಮುದಾಯಕ್ಕೆ ಸೇರಿದ ಈಶ್ವರ ಖಂಡ್ರೆ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಿದೆ. ಆದ್ದರಿಂದ, ಲಿಂಗಾಯತ ಸಮುದಾಯಕ್ಕೆ ಸೇರಿದ ನಾಯಕರನ್ನು ಬದಲಾವಣೆ ಮಾಡಲು ಬಿಜೆಪಿ ಮುಂದಾಗುವುದಿಲ್ಲ ಎಂಬುದು ನಾಯಕರ ವಿಶ್ಲೇಷಣೆ.

ಲೋಕಸಭೆ ಚುನಾವಣೆ ಬಗ್ಗೆ ಮಾತ್ರ ಚರ್ಚೆ

ಲೋಕಸಭೆ ಚುನಾವಣೆ ಬಗ್ಗೆ ಮಾತ್ರ ಚರ್ಚೆ

ಅಮಿತ್ ಶಾ ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಚರ್ಚೆ ನಡೆಸಲು ಮಾತ್ರ ಆಗಮಿಸುತ್ತಾರೆ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ನಡೆಯುವುದಿಲ್ಲ ಎಂದು ಕೆಲವು ಬಿಜೆಪಿ ನಾಯಕರು ಹೇಳಿದ್ದಾರೆ.

ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮೊದಲ ಬಾರಿಗೆ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಸರ್ಕಾರದ ವಿರುದ್ಧ ಹೇಗೆ ಹೋರಾಟ ಮಾಡಬೇಕು? ಎಂದು ಅವರು ಪಕ್ಷದ ನಾಯಕರಿಗೆ ಸೂಚನೆ ನೀಡುವ ಸಾಧ್ಯತೆ ಇದೆ.

English summary
Bharatiya Janata Party national president Amit Shah will visit Karnataka on July 28, 2018. Amit Shah will hold meeting with party leaders to review the preparations for the Lok Sabha elections 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X