ಕಲ್ಯಾಣ ಕರ್ನಾಟಕದಲ್ಲಿ ಅಮಿತ್ ಶಾ ಕಲರವ
ಬೀದರ್, ಸೆ.17: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡ ಮೇಲೆ ಪ್ರಥಮ ಬಾರಿಗೆ ಅಮಿತ್ ಶಾ ಅವರು ಕರ್ನಾಟಕ್ಕೆ ಬುಧವಾರ ಭೇಟಿ ನೀಡಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೋರಟಾ ಗ್ರಾಮದಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಹೈದರಾಬಾದ್ ಕರ್ನಾಟಕ ವಿಮೋಚನೆಗೆ ಅಂದಿನ ಕೇಂದ್ರ ಗೃಹಸಚಿವ ಸರ್ದಾರ್ ವಲ್ಲಭಬಾಯಿ ಪಟೇಲರು ಕಾರಣರಾಗಿದ್ದರು. ಈ ಸ್ಮರಣಾರ್ಥ ಪಟೇಲರ ಪುತ್ಥಳಿಯನ್ನು ಗೋರಟಾ ಗ್ರಾಮದಲ್ಲಿ ಸ್ಥಾಪಿಸಲಾಗುತ್ತಿದೆ. ಬಿಜೆಪಿ ಯುವ ಮೋರ್ಚಾ ಕೈಗೊಂಡಿರುವ ಸರ್ದಾರ್ ವಲ್ಲಭಭಾಯ್ ಪಟೇಲ್ ಪ್ರತಿಮೆ ನಿರ್ಮಾಣಕ್ಕೆ ಅಮಿತ್ ಶಾ ಬುಧವಾರ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿಭಾಗವಹಿಸುವ ಸುಮಾರು 50 ಸಾವಿರಕ್ಕೂ ಅಧಿಕ ಕಾರ್ಯಕರ್ತರಿಗೆ ಬಸವಕಲ್ಯಾಣ ಮತ್ತು ಗೋರಟಾ ಗ್ರಾಮದ ಹೊರವಲಯದಲ್ಲಿ ಊಟ ಮತ್ತು ವಸತಿಯ ವ್ಯವಸ್ಥೆ ಮಾಡಲಾಗಿದೆ. ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ವರ್ಷ ಕಳೆಯುವುದರೊಳಗೆ ಸರ್ದಾರ್ ಸರ್ದಾರ್ ವಲ್ಲಭಬಾಯಿ ಪಟೇಲರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಬಿಜೆಪಿ ಮುಖಂಡ ಬಿ.ಎಲ್ ಸಂತೋಷ್ ಆಶಯ ವ್ಯಕ್ತಪಡಿಸಿದ್ದಾರೆ.
1948, ಮೇ5ರಂದು ಹೈದರಾಬಾದಿನ ನಿಜಾಮರ ಅನುಯಾಯಿಗಳಾದ ರಜಕಾರರು ಈ ಭಾಗದ ಜನರ ಮಾರಣಹೋಮ ಮಾಡಿದ್ದರು. ಅಂದು ಮೃತರಾದವರ ಸ್ಮರಣಾರ್ಥ ಸ್ಮಾರಕ ನಿರ್ಮಾಣಕ್ಕೆ ಕಲ್ಯಾಣ ಕರ್ನಾಟಕ ಭಾಗದ ಜನರು ಮುಂದಾಗಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications