Breaking; ಚುನಾವಣೆ ಹತ್ತಿರ, ಮತ್ತೆ ಕರ್ನಾಟಕಕ್ಕೆ ಅಮಿತ್ ಶಾ ಆಗಮನ

ಬೆಂಗಳೂರು, ಏಪ್ರಿಲ್ 26; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದೆ. ಈ ಹಿನ್ನಲೆಯಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ಚಟುವಟಿಕೆಗಳು ಗರಿಗೆದರಿವೆ. ರಾಷ್ಟ್ರೀಯ ನಾಯಕರು ಸಹ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಬಿಜೆಪಿಯ ಹಿರಿಯ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಏಪ್ರಿಲ್‌ ತಿಂಗಳ ಬಳಿಕ ಮೇನಲ್ಲೂ ಸಹ ಅವರು ಕರ್ನಾಟಕ ಭೇಟಿ ಕೈಗೊಂಡಿದ್ದಾರೆ. ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

ಮೇ 3ರಂದು ಖೇಲೋ ಇಂಡಿಯಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಅಮಿತ್ ಶಾ ಬೆಂಗಳೂರಿಗೆ ಬರುತ್ತಿದ್ದಾರೆ. ಈ ವೇಳೆ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಅವರು, ಪಕ್ಷದ ನಾಯಕರ ಜೊತೆ ಸಹ ಸಭೆ ನಡೆಸಲಿದ್ದಾರೆ.

Amit Shah Visit To Bengaluru On May 3

ಏಪ್ರಿಲ್ 1ರಂದು ರಾಜ್ಯಕ್ಕೆ ಆಗಮಿಸಿದ್ದ ಅಮಿತ್ ಶಾ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದರು. ಬಳಿಕ ಪಕ್ಷದ ನಾಯಕರ ಜೊತೆ ಸಭೆ ನಡೆಸಿದ್ದರು. ಈಗ ಮೇ ತಿಂಗಳಿನಲ್ಲಿ ಮತ್ತೆ ರಾಜ್ಯ ಪ್ರವಾಸವನ್ನು ಅವರು ಕೈಗೊಂಡಿದ್ದಾರೆ.

ಮೇ 3ರಂದು ಆಗಮಿಸುವ ಅಮಿತ್ ಶಾ ಬೆಂಗಳೂರಿನಲ್ಲಿ ನಡೆಯುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಹ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮುಂದಿನ ವರ್ಷದ ಏಪ್ರಿಲ್ ಅಥವ ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಸಹ ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊಳ್ಳಲು ಈ ತಿಂಗಳಿನಲ್ಲಿ ರಾಜ್ಯ ಪ್ರವಾಸ ಕೈಗೊಂಡಿದ್ದರು. ಪ್ರಧಾನಿ ಮೋದಿ ಭೇಟಿ ನಿಗದಿಯಾಗಿತ್ತು, ಆದರೆ ಕೊನೆ ಕ್ಷಣದಲ್ಲಿ ಭೇಟಿ ರದ್ಧಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+