Amit Shah: ಬಿಜೆಪಿ ಕಲಿಗಳಿಗೆ ಅಮಿತ್ ಶಾ ಹೊಸ ಟಾಸ್ಕ್! ಈ ಐವರು ಸೋಲಲೇ ಬೇಕು: ಚಾಣಕ್ಯ ಕಣ್ಣೀಟ್ಟಿರುವ ಆ ಐವರು ಯಾರು?
ಬೆಂಗಳೂರು,ಏಪ್ರಿಲ್24: ರಾಜ್ಯ ವಿಧಾನಸಭಾ ಚುನಾವಣಾ ಕಾವು ಜೋರಾಗಿದೆ. ಅಧಿಕಾರಕ್ಕೆ ಬರಲು ಮೂರು ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಬಿಜೆಪಿ ಹೈಕಮಾಂಡ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತರಲು ರಾಜ್ಯ ಬಿಜೆಪಿ ನಾಯಕರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಚುನಾವಣೆ ಘೋಷಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಹೈಕಮಾಂಡ್ ನಾಯಕರ ರಾಜ್ಯ ಪ್ರವಾಸ ಜೋರಾಗಿದ್ದು, ರಾಜ್ಯ ಬಿಜೆಪಿ ಪ್ರಮುಖ ನಾಯಕರ ಜೊತೆಗೆ ಅಮಿತ್ ಶಾ ಸಭೆ ನಡೆಸಿದ್ದು, ಚುನಾವಣಾ ತಂತ್ರಗಾರಿಕೆ, ತಯಾರಿ ಹಾಗೂ ಪಕ್ಷದ ಮೇಲೆ ಸಾಕಷ್ಟು ಆರೋಪಗಳನ್ನ ಮಾಡುವ ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರಮುಖ ನಾಯಕರ ಮೇಲೆ ಕಣ್ಣೀಡುವಂತೆ ಸೂಚನೆ ನೀಡಿದ್ದು, ಕೆಲ ಕ್ಷೇತ್ರಗಳ ಬಗ್ಗೆ ರಾಜ್ಯ ನಾಯಕರ ಜೊತೆಗೆ ಅಮಿತ್ ಶಾ ಚರ್ಚೆ ನಡೆಸಿದ್ದು, ಕೆಲ ನಾಯಕನ್ನ ಸೋಲಿಸಿ ಆ ಕ್ಷೇತ್ರಗಳನ್ನ ಕೇಸರಿ ಬಾವುಟವನ್ನು ಹಾರಿಸಲು ರಾಜ್ಯ ನಾಯಕರಿಗೆ ಹೊಸ ಟಾಸ್ಕ್ ನೀಡಿದ್ದಾರೆ.

ಸಿಎಂ ಸ್ಥಾನ ಕೊಟ್ಟರು ಪಕ್ಷಕ್ಕೆ ದ್ರೋಹ: ಜಗದೀಶ್ ಶೆಟ್ಟರ್ ಮೇಲೆ ಅಮಿತ್ ಶಾ ಕಣ್ಣು
ರಾಜ್ಯ ಬಿಜೆಪಿಯಲ್ಲಿ ಟಿಕೆಟ್ ಸಿಗದೇ ಹಿನ್ನಲೆ ಕಮಲ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿಯ ಹಿರಿಯ ನಾಯಕರ ಬಿ ಎಲ್ ಸಂತೋಷ್ ಹಾಗೂ ಬಿಜೆಪಿ ಕೆಲ ನಾಯಕರ ಮೇಲೆ ಆರೋಪಗಳನ್ನ ಮಾಡಿದ್ದು, ಚುನಾವಣೆ ಹೊತ್ತಲಿ ಅವರ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗುವುದನ್ನ ತಪ್ಪಿಸಲು ಸೂಚನೆ ನೀಡಿದ್ದಾರೆ.
ಬಿಜೆಪಿ ಪಕ್ಷ ಮುಖ್ಯಮಂತ್ರಿ ಸ್ಥಾನ ಸೇರಿದಂತೆ ಎಲ್ಲಾ ಸ್ಥಾನಗಳನ್ನ ನೀಡಿದರು ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಇದೆಲ್ಲದಕ್ಕೂ ಒಂದೇ ಉತ್ತರ ಎಂದರೇ 6 ಬಾರೀ ಗೆಲ್ಲುವು ಸಾಧಿಸಿರುವ ಕ್ಷೇತ್ರದಲ್ಲೇ ಶೆಟ್ಟರ್ ಗೆ ಸೋಲಿನ ರುಚಿ ತೋರಿಸಲು ಅಮಿತ್ ಶಾ ಸೂಚನೆ ನೀಡಿದ್ದಾರೆ. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಶೆಟ್ಟರ್ ಅವರನ್ನ ಸೋಲಿಸಲು ಅಮಿತ್ ಶಾ ಹೊಸ ಟಾಸ್ಕ್ ನೀಡಿದ್ದಾರೆ.
ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಹೈಕಮಾಂಡ್ ಮಹೇಶ್ ಟೆಂಗಿನಕಾಯಿ ಅವರನ್ನ ಕಣಕ್ಕಿಳಿಸಿದ್ದು, ಜಗದೀಶ್ ಶೆಟ್ಟರ್ ಎಫೆಕ್ಟ್ ನಿಂದ ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಮೇಲೆ ಯಾವುದೇ ಪರಿಣಾಯ ಆಗದಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದು, ಬಿಜೆಪಿ ಬಿಟ್ಟು ಹೋದವರಿಗೆ ತಕ್ಕ ಪಾಠ ಕಲಿಸುವುಸು ಅಮಿತ್ ಶಾ ಲೆಕ್ಕಾಚಾರವಾಗಿದೆ.
ಪಕ್ಷ ಬಿಟ್ಟ ಸವದಿಗೆ ಸೋಲೆ ಉತ್ತರವಾಗಬೇಕು: ಅಮಿತ್ ಶಾ ಖಡಕ್ ಸೂಚನೆ
ವಿಧಾನ ಪರಿಷತ್ ಸದಸ್ಯ ಸ್ಥಾನವನ್ನ ನೀಡಿ. ಉಪಮುಖ್ಯಮಂತ್ರಿಯಾಗಿ ಮಾಡಿದ್ದು, ಟಿಕೆಟ್ ಸಿಗಲಲ್ಲಿ ಎಂಬ ಕಾರಣಕ್ಕೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿರುವ ಲಕ್ಷ್ಮಣ್ ಸವದಿ ಕ್ಷೇತ್ರದ ಮೇಲೆ ಬಿಜೆಪಿ ಹೈಕಮಾಂಡ್ ಕಣ್ಣೀಟ್ಟಿದೆ.
ಕಾಂಗ್ರೆಸ್ ಪಕ್ಷವನ್ನ ಬಿಟ್ಟು ಬಿಜೆಪಿ ಪಕ್ಷವನ್ನ ಸೇರ್ಪಡೆಯಾಗಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿದ್ದ ಮಹೇಶ್ ಕುಮಟಳ್ಳಿ ಅವರಿಗೆ ಅಥಣಿಯಿಂದ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಲಕ್ಷ್ಮಣ್ ಸವದಿ ಅವರನ್ನ ಸೋಲಿಸಲು ಅಮಿತ್ ಶಾ ಸೂಚನೆ ನೀಡಿದ್ದಾರೆ. ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಲಿಂಗಾಯತ ಮತಗಳು ವಿಭಜನೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಸವದಿಯನ್ನ ಕ್ಷೇತ್ರದಲ್ಲಿ ಸೋಲಿಸಲು ಅಮಿತ್ ಶಾ ಕೆಲ ತಂತ್ರಗಾರಿಕೆಯನ್ನ ರೂಪಿಸಿದ್ದಾರೆ.
ತವರು ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲಿಸಲು ಅಮಿತ್ ಶಾ ಸೂಚನೆ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 2023 ರ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದು, ರಾಜ್ಯ ಬಿಜೆಪಿ ಸೇರಿದಂತೆ ಕೇಂದ್ರ ಸರ್ಕಾರದ ವಿರುದ್ದ ಪದೇ ಪದೇ ಚಾಟಿ ಬಿಸುವ ಸಿದ್ದರಾಮಯ್ಯ ಅವರನ್ನ ತವರು ಕ್ಷೇತ್ರದಲ್ಲೇ ಸೋಲಿಸಲು ಅಮಿತ್ ಶಾ ಹೊಸ ಟಾಸ್ಕ್ ನೀಡಿದ್ದಾರೆ. ಹೀಗಾಗಿ ಲಿಂಗಾಯತ ಸಮುದಾಯದ ಹಿರಿಯ ನಾಯಕರಾದ ಸಚಿವ ವಿ ಸೋಮಣ್ಣ ಅವರನ್ನ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿ ಕಣಕ್ಕಿಳಿಸಿದೆ.
ಒಂದು ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಅಭ್ಯರ್ಥಿ. ಹಾಗಾಗಿ ಸಿದ್ದರಾಮಯ್ಯ ಸೋಲಿಸಲಿದೇ ಕಾಂಗ್ರೆಸ್ ದೊಡ್ಡ ನಷ್ಟವಾಗಲಿದೆ ಎಂಬುದು ಬಿಜೆಪಿ ಹೈಕಮಾಂಡ್ ನಾಯಕರ ಲೆಕ್ಕಾಚಾರವಾಗಿದೆ. ಈ ಕಾರಣಕ್ಕಾಗಿಯೇ ವರುಣಾದಲ್ಲಿ ಲಿಂಗಾಯತರ ಪ್ರಾಬಲ್ಯ ಹೆಚ್ಚಾಗಿರುವ ಕಾರಣ ವಿ ಸೋಮಣ್ಣ ಅವರನ್ನ ಕಣಕ್ಕಿಳಿಸಿ ಹಲವು ತಂತ್ರಗಾರಿಕೆಯನ್ನ ನಡೆಸುತ್ತಿದೆ.
ಟ್ರಬಲ್ ಶೂಟರ್ ಡಿಕೆಶಿ ಕ್ಷೇತ್ರದ ಮೇಲೆ ಅಮಿತ್ ಶಾ ಕಣ್ಣು
ಸೋಲಿಲ್ಲದ ಸರದಾರ, ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸ್ಪರ್ಧಿಸುವ ಕನಕಪುರ ಕ್ಷೇತ್ರದ ಮೇಲು ಅಮಿತ್ ಶಾ ಕಣ್ಣೀಟ್ಟಿದ್ದು, ಒಕ್ಕಲಿಗರ ನಾಯಕರಾದ ಡಿ ಕೆ ಶಿವಕುಮಾರ್ ಅವರನ್ನ ಸೋಲಿಸಲು ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಖಡಕ್ ಸೂಚನೆ ನೀಡಿದ್ದಾರೆ.
ಒಕ್ಕಲಿಗರು ಹೆಚ್ಚಿರುವ ಕನಕಪುರ ಕ್ಷೇತ್ರದಲ್ಲಿ ಡಿ ಕೆ ಶಿವಕುಮಾರ್ ಅವರನ್ನ ಸೋಲಿಸಲು ಬಿಜೆಪಿ ಹೈಕಮಾಂಡ್ ಪ್ಲಾನ್ ನಡೆಸಿದ್ದು, ಅದರಂತೆ ಡಿಕೆಶಿಯವರಿಗೆ ಎದುರಾಳಿಯಾಗಿರುವ ಆರ್. ಅಶೋಕ್ ಅವರನ್ನ ಬಿಜೆಪಿ ಹೈಕಮಾಂಡ್ ಕಣಕ್ಕಿಳಿಸಿದೆ.
ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ: ಎಚ್ಡಿಕೆ ಸೋಲಿಸಲು ಬಿಜೆಪಿ ಪ್ಲಾನ್
ಜೆಡಿಎಸ್ ನ ಏಕೈಕ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಹೆಚ್ ಡಿ ಕುಮಾರಸ್ವಾಮಿ ಅವರನ್ನ ಸೋಲಿಸಲು ಬಿಜೆಪಿ ಚಾಣಕ್ಯ ನಿರ್ಧಾರಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಹಲವು ಸಮೀಕ್ಷೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಯಾವ ಪಕ್ಷಕ್ಕೂ ಸರ್ಕಾರ ರಚಿಸಲು ಸ್ಪಷ್ಟ ಬಹುಮತ ಬರೋದಿಲ್ಲ ಎಂದು ಹೇಳಲಾಗಿದೆ. ಅದು ನಿಜವಾಗಿಬಿಟ್ಟರೆ, ಜೆಡಿಎಸ್ ಕಿಂಗ್ ಮೇಕರ್ ಆಗುವುದರಲ್ಲಿ ಸಂಶಯವೇ ಇಲ್ಲ. ಹೀಗಾಗಿ ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಸೋಲಿಸಲು ವಿಶೇಷ ಷಡ್ಯಂತ್ರ ರೂಪಿಸಲು ನಿರ್ಧರಿಸಿದ್ದಾರೆ.
ಇತ್ತ ಒಕ್ಕಲಿಗರ ಕೋಟೆಯಲ್ಲಿ ಬಿಜೆಪ ಬಾವುಟ ಹಾರಿಸಲು ಸಜ್ಜಾಗಿದ್ದು, ಏ. 30ರಂದು ಚನ್ನಪಟ್ಟಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ಕಾರ್ಯಕ್ರಮವನ್ನ ಆಯೋಜಿಸಲು ನಿರ್ಧರಿಸಲಾಗಿದೆ. ಆ ಮೂಲಕ, ಅಲ್ಲಿ ಬಿಜೆಪಿಯತ್ತ ಜನರನ್ನು ಸೆಳೆಯಲು ಪ್ರಯತ್ನಿಸುವುದು ಅಮಿತ್ ಶಾ ಉದ್ದೇಶವಾಗಿದೆ ಎನ್ನಲಾಗಿದೆ.












Click it and Unblock the Notifications