ಮಾರ್ಚ್ 3ಕ್ಕೆ ರಾಜ್ಯಕ್ಕೆ ಅಮಿತ್ ಶಾ ಆಗಮನ
ಈ ವರ್ಷ ಮೇ ತಿಂಗಳಲ್ಲಿ ರಾಜ್ಯದ 224 ಸ್ಥಾನಗಳಿಗೆ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇರುವುದರಿಂದ ಶಾ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವುದು ಮಹತ್ವ ಪಡೆದುಕೊಂಡಿದೆ.
ಬೆಂಗಳೂರು, ಮಾರ್ಚ್ 1: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮಾರ್ಚ್ 3 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಎರಡು 'ವಿಜಯ್ ಸಂಕಲ್ಪ ರಥ ಯಾತ್ರೆ' ಮತ್ತು ವಿವಿಧ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.
ಈ ವರ್ಷ ಮೇ ತಿಂಗಳಲ್ಲಿ ರಾಜ್ಯದ 224 ಸ್ಥಾನಗಳಿಗೆ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇರುವುದರಿಂದ ಶಾ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವುದು ಮಹತ್ವ ಪಡೆದುಕೊಂಡಿದೆ. ಕರ್ನಾಟಕ ಚುನಾವಣೆ 2023ರ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷವು ಕರ್ನಾಟಕದಲ್ಲಿ ಬೃಹತ್ 'ವಿಜಯ್ ಸಂಕಲ್ಪ ಯಾತ್ರೆ'ಯನ್ನು ಕೈಗೊಳ್ಳಲಿದೆ. ಮಾರ್ಚ್ 1ರಂದು ಚಾಮರಾಜನಗರದಲ್ಲಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಯಾತ್ರೆಗೆ ಚಾಲನೆ ನೀಡುವ ಮೂಲಕ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ.

ಮಾರ್ಚ್ 3ರಂದು ಒಂದು ದಿನದ ಭೇಟಿಯ ಸಂದರ್ಭದಲ್ಲಿ ಅಮಿತ್ ಶಾ ಬೀದರ್‌ನ ಬಸವಕಲ್ಯಾಣ ಪ್ರದೇಶದ ಅನುಭವ ಮಂಟಪದಿಂದ ಮೊದಲ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ನಂತರ ಬೀದರ್‌ನ ತೇರ್ ಮೈದಾನದಲ್ಲಿ ಮಧ್ಯಾಹ್ನ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಆವತಿಯಲ್ಲಿರುವ ಚೆನ್ನಕೇಶವ ಮಂದಿರದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಪ್ರಾರ್ಥನೆ ಸಲ್ಲಿಸಲಿದ್ದಾರೆ.
ನಂತರ ಅವರು ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಪ್ರದೇಶದಲ್ಲಿ ಕಾಲೇಜು ಮೈದಾನದಲ್ಲಿ ಮತ್ತೊಂದು 'ವಿಜಯ್ ಸಂಕಲ್ಪ ರಥ ಯಾತ್ರೆ' ಮತ್ತು ಸಾರ್ವಜನಿಕ ಸಭೆಗೆ ಚಾಲನೆ ನೀಡಲಿದ್ದಾರೆ. ಸಂಜೆ 7 ಗಂಟೆ ಸುಮಾರಿಗೆ ಬೆಂಗಳೂರಿನಲ್ಲಿರುವ ಸೇಫ್ ಸಿಟಿ ಕಮಾಂಡ್ ಸೆಂಟರ್‌ಗೆ ಭೇಟಿ ನೀಡಲಿರುವ ಅಮಿತ್ ಶಾ ನಗರದ ಟೌನ್ ಹಾಲ್‌ನಿಂದ ಬೆಂಗಳೂರು ಸೇಫ್ ಸಿಟಿ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಕರ್ನಾಟಕದಲ್ಲಿ ಚುನಾವಣೆಯ ವರ್ಷವಾಗಿರುವ 2033 ವಿಧಾನಸಭಾ ಚುನಾವಣೆಗೆ ದಿನಗಳು ಸಮೀಪಿಸಿದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಮಾವೇಶಗಳು, ರ್‍ಯಾಲಿಗಳು ಒಂದಾದ ಮೇಲೊಂದು ಭರ್ಜರಿಯಾಗಿ ನಡೆಯುತ್ತಿದೆ. ಇದರ ಭಾಗವಾಗಿ ಬಿಜೆಪಿ ಕೂಡ ವಿಜಯ ಸಂಕಲ್ಪ ಯಾತ್ರೆ ಹಮ್ಮಿಕೊಂಡಿದೆ. ವಿಧಾನಸಭಾ ಚುನಾವಣಾ ಸಮೀಪದಲ್ಲಿ ಬಿಜೆಪಿ ಆರಂಭಿಸಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಬುಧವಾರ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಚಾಲನೆ ನೀಡಿದ್ದಾರೆ. ಹೆಲಿಕಾಪ್ಟರ್ ಮೂಲಕ ಮಲೆಮಹದೇಶ್ವರ ಬೆಟ್ಟಕ್ಕೆ ಬಂದಿಳಿದ ಜೆ.ಪಿ. ನಡ್ಡಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನೀಲ್ ಕುಮಾರ್, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬರಮಾಡಿಕೊಂಡರು.












Click it and Unblock the Notifications