Breaking; ಕೋರ್ ಕಮಿಟಿ ಸಭೆ ನಡೆಸದೇ ಅಮಿತ್ ಶಾ ವಾಪಸ್
ಬೆಂಗಳೂರು, ಮೇ 03; ಒಂದು ದಿನದ ಕರ್ನಾಟಕ ಪ್ರವಾಸ ಮುಗಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಗೆ ಮರಳಿದರು. ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಮಿತ್ ಶಾರಿಗೆ ಬೀಳ್ಕೊಡುಗೆ ನೀಡಿದರು.
ಮಂಗಳವಾರ ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಮಿತ್ ಶಾ ಸೋಮವಾರ ರಾತ್ರಿಯೇ ಬೆಂಗಳೂರಿಗೆ ಆಗಮಿಸಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರ ಜೊತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೆಹಲಿಗೆ ವಾಪಸ್ ಆದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದಲ್ಲಿ ಅಮಿತ್ ಶಾ ಮಂಗಳವಾರ ಮಧ್ಯಾಹ್ನ ಭೋಜನ ಸವಿದರು. ಮುಖ್ಯಮಂತ್ರಿಗಳು ಆಯೋಜನೆ ಮಾಡಿದ್ದ ಔತಣಕೂಟದಲ್ಲಿ ಸಚಿವರು, ಸಂಸದರು, ಶಾಸಕರು ಪಾಲ್ಗೊಂಡಿದ್ದರು.

ಅಮಿತ್ ಶಾ, ಯಡಿಯೂರಪ್ಪ, ಪ್ರಹ್ಲಾದ್ ಜೋಶಿ ಮತ್ತು ನಳಿನ್ ಕುಮಾರ್ ಕಟೀಲ್ ಒಟ್ಟಿಗೆ ಕುಳಿತು ಬೆಳ್ಳಿತಟ್ಟೆಯಲ್ಲಿ ಊಟ ಮಾಡಿದ ಫೋಟೋ ವೈರಲ್ ಆಗಿದೆ. ಅಮಿತ್ ಶಾ ಕರ್ನಾಟಕ ಬಿಜೆಪಿ ಕೋರ ಕಮಿಟಿ ಸಭೆ ನಡೆಸಬೇಕಾಗಿತ್ತು.

ಆದರೆ ಸಭೆ ಕೊನೆ ಕ್ಷಣದಲ್ಲಿ ರದ್ದಾಯಿತು. ಸಂಪುಟ ವಿಸ್ತರಣೆ, ನಾಯಕತ್ವ ಬದಲಾವಣೆ ಚರ್ಚೆಯ ಹಿನ್ನಲೆಯಲ್ಲಿ ಕೋರ್ ಕಮಿಟಿ ಸಭೆ ಮಹತ್ವ ಪಡೆದಿತ್ತು. ಅಮಿತ್ ಶಾ ಸಭೆ ನಡೆಸದೇ ವಾಪಸ್ ತೆರಳಿರುವುದು ಹಲವು ಕುತೂಹಲಗಳಿಗೆ ಕಾರಣವಾಗಿದೆ.
ಮೇ 8 ಅಥವ 9ರಂದು ಸಂಪುಟ ವಿಸ್ತರಣೆ ನಡೆಯಬಹುದು ಎಂಬ ಸುದ್ದಿಗಳು ಹಬ್ಬಿವೆ. ಆದರೆ ಪಕ್ಷದ ಯಾವುದೇ ನಾಯಕರು ಈ ಕುರಿತು ಅಧಿಕೃತ ಹೇಳಿಕೆ ನೀಡಿಲ್ಲ.












Click it and Unblock the Notifications