ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಾಪಸ್ ಪಡೆದ ಅಮೂಲ್ಯ

|
Google Oneindia Kannada News

ಬೆಂಗಳೂರು, ಮೇ 25 : ಕರ್ನಾಟಕ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಅಮೂಲ್ಯ ಲಿಯೋನ್ ಪರ ವಕೀಲರು ವಾಪಸ್ ಪಡೆದಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಅಮೂಲ್ಯ ಬಂಧನದಲ್ಲಿದ್ದಾರೆ.

Recommended Video

ಲಾಕ್‌ಡೌನ್ ನಂತರ ಹಾರಿದ ಮೊದಲ ವಿಮಾನದಲ್ಲಿನ ಕನ್ನಡದ ಗಗನಸಖಿ| Kannadati Air Hostess Explain Current situation

ಅಮೂಲ್ಯ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಬಂದಿತ್ತು. ಅರ್ಜಿದಾರರ ಪರ ವಕೀಲರು ಅರ್ಜಿ ವಾಪಸ್ ಪಡೆಯಲು ಅನುಮತಿ ನೀಡುವಂತೆ ಕೋರಿದರು.

'ಪಾಕ್' ಘೋಷಣೆ; ವಿಚಾರಣೆ ವೇಳೆ ಬಿಕ್ಕಳಿಸಿ ಅತ್ತ ಅಮೂಲ್ಯ ಲಿಯೋನಾ'ಪಾಕ್' ಘೋಷಣೆ; ವಿಚಾರಣೆ ವೇಳೆ ಬಿಕ್ಕಳಿಸಿ ಅತ್ತ ಅಮೂಲ್ಯ ಲಿಯೋನಾ

ಅರ್ಜಿ ವಾಪಸ್ ಪಡೆಯಲು ಒಪ್ಪಿಗೆ ನೀಡಿದ ನ್ಯಾಯಪೀಠ, ಸೆಷನ್ಸ್ ನ್ಯಾಯಾಲಯದಲ್ಲಿ ಪರಿಹಾರ ಸಿಗದಿದ್ದರೆ ನಂತರ ಅರ್ಜಿದಾರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿತು.

ಪಾಕಿಸ್ತಾನ ಪರ ಘೋಷಣೆ; ಅಮೂಲ್ಯ 4 ದಿನ ಪೊಲೀಸ್ ವಶಕ್ಕೆ ಪಾಕಿಸ್ತಾನ ಪರ ಘೋಷಣೆ; ಅಮೂಲ್ಯ 4 ದಿನ ಪೊಲೀಸ್ ವಶಕ್ಕೆ

Amulya Leona Withdraws Bail Petition In High Court

ಉಪ್ಪಾರಪೇಟೆ ಠಾಣೆ ಪೊಲೀಸರ ಪರವಾಗಿ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ ಸರ್ಕಾರಿ ಅಭಿಯೋಜಕರು ಪ್ರಕರಣ ಅತ್ಯಂತ ಗಂಭೀರವಾದದ್ದು.ದೇಶದ್ರೋಹದ ಆರೋಪದಡಿ ತನಿಖೆ ನಡೆಯುತ್ತಿದೆ. ಆದ್ದರಿಂದ, ಆರೋಪಿಗೆ ಜಾಮೀನು ನೀಡಬಾರದು ಎಂದು ಮನವಿ ಮಾಡಿದರು.

ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯ ಹುಟ್ಟೂರಿಗೆ ಎಸ್‌ಐಟಿ ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯ ಹುಟ್ಟೂರಿಗೆ ಎಸ್‌ಐಟಿ

ಈ ವರ್ಷದ ಫೆಬ್ರವರಿಯಲ್ಲಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆದಿತ್ತು. ಆಗ ವೇದಿಕೆ ಮೇಲೆ ಅಮೂಲ್ಯ ಲಿಯೋನ್ ಪಾಕಿಸ್ತಾನ ಪರವಾದ ಘೋಷಣೆ ಕೂಗಿದ್ದಳು.

ಉಪ್ಪಾರಪೇಟೆ ಪೊಲೀಸರು ಆಕೆಯನ್ನು ಬಂಧಿಸಿದ್ದು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾಳೆ. ಅಮೂಲ್ಯ ಘೋಷಣೆ ಕೂಗಿದ ಪ್ರಕರಣ ಕರ್ನಾಟಕದಲ್ಲಿ ಭಾರಿ ಸಂಚಲನ ಉಂಟು ಮಾಡಿತ್ತು.

English summary
Amulya Leona has withdrawn his bail application before the Karnataka high court. Amulya Leona arrested in the month of February for raising pro-Pakistan slogans in Bengaluru during anti CAA protest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X