ಹಾಸನದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕ
ಹಾಸನ, ನವೆಂಬರ್, 19: ಬೆಂಗಳೂರಿನ ಖಾಸಗಿ ಶಾಲಾ ಶಿಕ್ಷಕ ವಿದ್ಯಾರ್ಥಿನಿ ಮೇಲೆಯೇ ಅತ್ಯಾಚಾರ ನಡೆಸಿದ ಘಟನೆ ಇನ್ನೂ ಹಸಿಯಾಗಿಯೇ ಇದೆ. ಅಷ್ಟರಲ್ಲೇ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ಇಂತಹದ್ದೇ ಒಂದು ಘಟನೆ ನಡೆದಿದೆ.
ಸರ್ಕಾರಿ ಶಾಲೆಯ ಬಾಲಕಿ ಮೇಲೆ ಶಾಲಾ ಶಿಕ್ಷಕನೇ ಅತ್ಯಾಚಾರ ಎಸಗಿದ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ಮಂಗಳವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.[ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಮಾಡಿದ 'ರೋಮಿಯೊ']

ಶಾಲಾ ಶಿಕ್ಷಕ ಶ್ರೀನಿವಾಸ (50) ಅತ್ಯಾಚಾರ ಎಸಗಿದ ಆರೋಪಿ. ಅತ್ಯಾಚಾರಕ್ಕೆ ಒಳಗಾದ ಬಾಲಕಿ (11) ಬುಧವಾರ ಶಾಲೆಗೆ ಹೋಗುವುದಿಲ್ಲ ಎಂದು ಹೇಳಿದಾಗ ಅನುಮಾನಗೊಂಡ ಪೋಷಕರು ಆಕೆಯನ್ನು ವಿಚಾರಿಸಿದಾಗ ಸತ್ಯಾಂಶ ತಿಳಿದು ಬಂದಿದೆ.
ಮಂಗಳವಾರ ಬಾಲಕಿ ಎಂದಿನಂತೆ ಶಾಲೆಗೆ ತೆರಳಿದ್ದಾಳೆ. ಎಲ್ಲಾ ತರಗತಿಗಳು ಮುಗಿದ ಮೇಲೆ ಆಕೆಯ ಸ್ನೇಹಿತರೆಲ್ಲಾ ಕ್ರೀಡಾಂಗಣದಲ್ಲಿ ಆಟ ಆಡುತ್ತಿದ್ದರು. ಈ ಸಮಯವನ್ನು ಉಪಯೋಗಿಸಿಕೊಂಡ ಶಿಕ್ಷಕ ಬಾಲಕಿಯನ್ನು ಶಾಲೆಯ ತರಗತಿ ಒಳಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.[ಕರ್ನಾಟಕದಲ್ಲಿ ಇತ್ತೀಚೆಗೆ ನಡೆದಿರುವ ಅತ್ಯಾಚಾರಗಳ ಪಟ್ಟಿ]
ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ಪೋಷಕರು ಶ್ರೀನಿವಾಸ್ ಮೇಲೆ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನಿಖೆ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.












Click it and Unblock the Notifications