Muda Case: ಸಿಎಂ ಸಿದ್ದರಾಮಯ್ಯ ವಿರುದ್ಧ ಇಂದೇ ಎಫ್‌ಐಆರ್‌ ಸಾಧ್ಯತೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪ್ರಕರಣವು ಸಿಎಂ ಸಿದ್ದರಾಮಯ್ಯ ಅವರಿಗೆ ಸುರುಳಿಯಂತೆ ಸುತ್ತಿಕೊಂಡಿದೆ. ಹೈಕೋರ್ಟ್‌ನಲ್ಲಿ ಕೂಡ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಕೇಸ್‌ನಲ್ಲಿ ಹಿನ್ನಡೆಯಾಗಿತ್ತು. ಮತ್ತೊಂದೆಡೆ ಕೋರ್ಟ್‌ ಆದೇಶದ ಹಿನ್ನೆಲೆ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲು ಲೋಕಾಯುಕ್ತ ಪೊಲೀಸರು ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಈಗಾಗಲೇ ಲೋಕಾಯುಕ್ತ ಐಜಿಪಿ, ಎಡಿಜಿಪಿ, ಮೈಸೂರು ಲೋಕಾಯುಕ್ತ ಎಸ್​​​​ಪಿ ನಿನ್ನೆಯೇ ಸಿದ್ದರಾಮಯ್ಯ ವಿರುದ್ಧ ಮುಂದಿನ ತನಿಖೆ ಸಂಬಂಧ ಸಭೆ ನಡೆಸಿದ್ದಾರೆ. ಬಳಿಕ ಮೈಸೂರು ಎಸ್‌ಪಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಆದೇಶದ ಪ್ರತಿ ಕೂಡ ಪಡೆದಿದ್ದಾರೆ. ಬಹುತೇಕ ಇಂದು ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

An FIR Is Likely To Be Filed Against CM Siddaramaiah Today In The Muda Case

ಇನ್ನು ಒಂದು ವೇಳೆ ಎಫ್‌ಐಆರ್‌ ದಾಖಲಾದರೆ, ಅದರಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನೇ ಮೊದಲ ಆರೋಪಿ A1 ಮಾಡುವ ಸಾಧ್ಯತೆ ಇದೆ. ಸಿಎಂ ವಿರುದ್ಧ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿದ್ದು, ಮೈಸೂರು ಲೋಕಾಯುಕ್ತದಲ್ಲಿ ಇಂದು ಎಫ್‌ಐಆರ್ ದಾಖಲಾಗುವ ಸಾಧ್ಯತೆ ಇದೆ.

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಅವರ ಆಪ್ತರಾದ ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ಸೇರಿದಂತೆ ಹಲವರ ಮೇಲೆ ದೂರು ದಾಖಲಾಗಿದ್ದು, ಇಂದು ಬೆಳಿಗ್ಗೆ 10.30ರ ನಂತರ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ನೀಡಿದೆ. ಮೈಸೂರು ಲೋಕಾಯುಕ್ತ ವಿಭಾಗದ ಪೊಲೀಸರು ತನಿಖೆ ನಡೆಸಬೇಕು ಎಂದು ಕೋರ್ಟ್ ಸೂಚಿಸಿದೆ. ಇದರ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ದಿನಗಳ ಮೈಸೂರು ಪ್ರವಾಸ ಕೈಗೊಂಡಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

An FIR Is Likely To Be Filed Against CM Siddaramaiah Today In The Muda Case

ಇಂದು ಸಿದ್ದರಾಮಯ್ಯ ಅವರು ವಿಶೇಷ ವಿಮಾನದಲ್ಲಿ ಅವರು ಬೆಂಗಳೂರಿನಿಂದ ಹೊರಡಲಿದ್ದು, 10.20ರ ವೇಳೆ ಮೈಸೂರು ನಗರಕ್ಕೆ ಆಗಮಿಸಲಿದ್ದಾರೆ. ಬಳಿಕ ಮೈಸೂರಿನಲ್ಲಿ ನಡೆಯಲಿರುವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಇನ್ನೂ ಮುಂತಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ನಾಳೆ ಕೂಡ ಸಿದ್ದರಾಮಯ್ಯ ಮೈಸೂರು ನಗರದಲ್ಲಿ ಖಾಸಗಿ ಆಸ್ಪತ್ರೆ ಉದ್ಘಾಟನೆ, ಸರ್ಕಾರದ ಗ್ಯಾರಂಟಿ ಯೋಜನೆಗಳ ಪುಸ್ತಕ ಬಿಡುಗಡೆ ಸಮಾರಂಭ, ಮೈಸೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಭಾನುವಾರವೂ ಹಿಂದುಳಿದ ವರ್ಗಗಳ ವಸತಿ ನಿಲಯಗಳ ಹಳೆಯ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಶೋಕಪುರಂ ಸರ್ಕಾರಿ ಪ್ರೌಢಶಾಲೆಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಬಳಿಕ ಸಂಜೆ 6 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್‌ ಆಗಲಿದ್ದಾರೆ.

ಆದರೆ, ಸಿದ್ದರಾಮಯ್ಯ ಅವರ ವಿರುದ್ಧ ಮೈಸೂರಿನಲ್ಲೇ ಎಫ್‌ಐಆರ್‌ ದಾಖಲಾಗುವ ಸಾಧ್ಯತೆ ಇರುವಾಗ ಅವರು ಮೈಸೂರಿನಲ್ಲೇ ಪ್ರವಾಸ ಕೈಗೊಂಡಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+