ಪುತ್ತೂರು: ಅಂತರ್‌ಧರ್ಮೀಯ ಜೋಡಿಯಿಂದ ವಿವಾಹಕ್ಕೆ ಅರ್ಜಿ, ಆಕ್ಷೇಪ
ಮಂಗಳೂರು, ನ. 22: ದಕ್ಷಿಣ ಕನ್ನಡದ ಪುತ್ತೂರಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಂತರ್‌ಧರ್ಮೀಯ ಜೋಡಿ ವಿವಾಹಕ್ಕೆ ಅರ್ಜಿ ಸಲ್ಲಿಸಿದೆ. ಇದೊಂದು ಲವ್ ಜಿಹಾದ್ ಪ್ರಕರಣ ಎಂದು ಹಿಂದೂ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.
ರಿಜಿಸ್ಟ್ರಾರ್ ಕಚೇರಿಗಳಲ್ಲಿ ಸಾಮಾನ್ಯ ಪ್ರಕ್ರಿಯೆಯ ಭಾಗವಾಗಿ ಮದುವೆಯಾಗಲು ನೊಂದಣಿ ಮಾಡಿಸಿದ ಬಳಿಕ ವಿವಾಹಕ್ಕೆ ಯಾವುದೇ ಆಕ್ಷೇಪಣೆಗಳಿದ್ದರೇ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಈ ಅರ್ಜಿಯನ್ನು ಆಕ್ಷೇಪಣೆಗಾಗಿ ನೋಟಿಸ್ ಬೋರ್ಡಿನಲ್ಲಿ ಅಂಟಿಸಲಾಗಿತ್ತು. ಈ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಪೋಟೋವೈರಲ್ ಆದ ಬೆನ್ನಲ್ಲೆ ಹಿಂದೂ ಪರ ಸಂಘಟನೆಗಳು ಇದೊಂದು ಲವ್ ಜಿಹಾದ್ ಪ್ರಕರಣ ಎಂದು ಆಕ್ಷೇಪ ವ್ಯಕ್ತಪಡಿಸಿವೆ.

ಮೂಲಗಳ ಪ್ರಕಾರ, ಯುವತಿಯು ದಕ್ಷಿಣ ಕನ್ನಡದ ಪುತ್ತೂರು ಸಮೀಪದ ದರ್ಬೆ ನಿವಾಸಿಯಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಬೆಂಗಳೂರಿನ ನ್ಯಾಪನಹಳ್ಳಿ ನಿವಾಸಿ 44 ವರ್ಷದ ಶೇಕ್ ಮೊಹಮ್ಮದ್ ಸಲೀಂ ಎಂಬುವವರನ್ನು ವಿವಾಹವಾಗುತ್ತಿದ್ದಾರೆ. ಇಬ್ಬರೂ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಈ ಬೆಳವಣಿಗೆಗಳ ಬಗ್ಗೆ ಪೊಲೀಸರು ಹಾಗೂ ಯುವತಿಯ ಪೋಷಕರಿಂದ ಯಾವುದೇ ಹೇಳಿಕೆ ಬಂದಿಲ್ಲ.












Click it and Unblock the Notifications