ಜೆಡಿಎಸ್ ಸೇರಿದ ಬಳಿಕ ಆನಂದ್ ಅಸ್ನೋಟಿಕರ್ ಹೇಳಿದ್ದೇನು?
ಬೆಂಗಳೂರು, ಜನವರಿ 15 : 'ಉತ್ತರ ಕನ್ನಡ ಜಿಲ್ಲೆ ಅಭಿವೃದ್ಧಿಯಾಗಬೇಕು ಎಂಬ ಕಾರಣಕ್ಕೆ ಜೆಡಿಎಸ್ ಸೇರಿದ್ದೇನೆ. ಕ್ಷೇತ್ರದ ಯುವಕರಿಗೆ ಉದ್ಯೋಗ ಕೊಡಬೇಕಿತ್ತು. ಆದರೆ, ಅವರ ಕೈಗೆ ತಲ್ವರ್ ಮತ್ತು ಕತ್ತಿ ಕೊಟ್ಟಿದ್ದಾರೆ' ಎಂದು ಆನಂದ್ ಅಸ್ನೋಟಿಕರ್ ಹೇಳಿದರು.
ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಸೋಮವಾರ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರಿದರು. ಈ ಮೂಲಕ ಐದು ವರ್ಷಗಳ ಬಳಿಕ ಹೊಸ ರಾಜಕೀಯ ಇನ್ನಿಂಗ್ಸ್ ಆರಂಭಿಸಿದರು.
ಆನಂದ್ ಅಸ್ನೋಟಿಕರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಎಚ್.ಡಿ.ದೇವೇಗೌಡರು. 'ಸಂಕ್ರಾಂತಿ ಶುಭದಿನ ಅಸ್ನೋಟಿಕರ್ ಪಕ್ಷ ಸೇರ್ಪಡೆಗೊಂಡಿದ್ದಾರೆ. ಹಲವು ಕಾರ್ಯಕರ್ತರನ್ನು ಪಕ್ಷಕ್ಕೆ ಕರೆ ತಂದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 4-5 ಸ್ಥಾನ ಗೆಲ್ಲುವ ಅವಕಾಶವಿದೆ' ಎಂದರು.
ಬಿಜೆಪಿ ಸರ್ಕಾರದಲ್ಲಿ ಮೀನುಗಾರಿಕೆ ಸಚಿವರಾಗಿದ್ದ ಆನಂದ್ ಅಸ್ನೋಟಿಕರ್ 2013ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾರವಾರ ಕ್ಷೇತ್ರದಲ್ಲಿ ಸೋತಿದ್ದರು. ಬಳಿಕ ರಾಜಕೀಯದಿಂದ ದೂರವಾಗಿದ್ದರು. ಈಗ ಚುನಾವಣೆ ಕಾಲದಲ್ಲಿ ಜೆಡಿಎಸ್ ಸೇರಿದ್ದಾರೆ. 2018ರ ಚುನಾವಣೆಗೆ ಅವರು ಕಾರವಾರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

ಶಾಂತಿಪ್ರಿಯ ಜಿಲ್ಲೆಯಲ್ಲಿ ಕೊಲೆಗಳಾಗುತ್ತಿವೆ
ಪಕ್ಷ ಸೇರಿದ ಬಳಿಕ ಮಾತನಾಡಿದ ಆನಂದ್ ಅಸ್ನೋಟಿಕರ್, ಉತ್ತರ ಕನ್ನಡ ಜಿಲ್ಲೆಯಲ್ಲಿ ಅಭಿವೃದ್ಧಿ ಕುಂಟಿತವಾಗಿದೆ. ಜಿಲ್ಲೆಯಲ್ಲಿ ಆಗಿರುವ ಘಟನೆ ಬೇಸರ ತರಿಸಿದೆ. ಶಾಂತಿಪ್ರಿಯ ಜಿಲ್ಲೆಯಲ್ಲಿ ಕೊಲೆಗಳು ಆಗುತ್ತಿವೆ. ಗುಜರಾತ್ ಮಾದರಿಯಲ್ಲಿ ಅಭಿವೃದ್ಧಿ ಆಗಬೇಕಿತ್ತು ಆದರೆ ಆಗಿಲ್ಲ ಎಂದರು.

ತತ್ವ, ಸಿದ್ದಾಂತ ಒಪ್ಪಿ ಬಂದದ್ದಾರೆ
ಮಾಧ್ಯಮಗಳ ಜೊತೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, 'ನಮ್ಮ ತತ್ವ ಸಿದ್ದಾಂತ ಒಪ್ಪಿ ಪಕ್ಷ ಸೇರ್ಪಡೆ ಆಗಿದ್ದಾರೆ. ಪಕ್ಷೇತರರಾಗಿ ಆಯ್ಕೆ ಆಗಿ ಬಿಜೆಪಿಗೆ ಬೆಂಬಲ ಕೊಟ್ಟರು. ಐದು ವರ್ಷ ಆಡಳಿತ ಅವರಿಗೆ ಆದ ಅನುಭವ ಬಹಳ ನೋವು ತರಿಸಿದೆ. ಹೀಗಾಗಿ ಜನತಾದಳ ಬೆಂಬಲಿಸುವ ಕೆಲಸ ಮಾಡಿದ್ದಾರೆ' ಎಂದರು.

ಲಘುವಾಗಿ ಮಾತನಾಡಲ್ಲ
'ಈಗಿನ ಸರ್ಕಾರದಿಂದ ಬಹಳಷ್ಟು ಜನರಿಗೆ ಭ್ರಮನಿರಸನವಾಗಿದೆ. ಹಲವು ಬದಲಾವಣೆಗಳ ನೀರಿಕ್ಷೆ ಇಟ್ಟುಕೊಂಡಿದ್ದಾರೆ. ಸರ್ವೇ ರಿಪೋರ್ಟ್ ಆಧರಿಸಿ ಪಕ್ಷಕ್ಕೆ ಬರುತ್ತಿದ್ದಾರೆ ಅನ್ನೋದು ಸರಿಯಲ್ಲ. ಸಮೀಕ್ಷೆಗಳ ಬಗ್ಗೆ ನಾನು ಲಘುವಾಗಿ ಮಾತನಾಡುವುದಿಲ್ಲ' ಎಂದು ಕುಮಾರಸ್ವಾಮಿ ಹೇಳಿದರು.

ಪಕ್ಷೇತರರಾಗಿ ಸ್ಪರ್ಧಿಸಿ
'ಸಿದ್ದರಾಯ್ಯ ಅವರು ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ನಿಮ್ಮಿಂದ ಕಾಂಗ್ರೆಸ್ ಪಕ್ಷ ಗೆಲ್ಲುತ್ತೆ ಅನ್ನೋ ಭ್ರಮೆಯಲ್ಲಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಗೆಲುವು ಸಾಧಿಸಿ' ಎಂದು ಎಚ್.ಡಿ.ಕುಮಾರ ಸ್ವಾಮಿ ಸವಾಲು ಹಾಕಿದರು.

ಮಗನಿಗೆ ಟಿಕೆಟ್ ಕೊಡಿಸಲು ಹೋರಾಟ ಏಕೆ?
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, 'ನಮ್ಮದು ಅಪ್ಪ-ಮಕ್ಕಳ ಪಕ್ಷ ಅಂತ ಹೇಳಿದ್ದಾರೆ. ವರುಣದಲ್ಲಿ ಮಗನಿಗೆ ಯಾಕೆ ಟಿಕೆಟ್ ಕೊಡಿಸಕ್ಕೆ ಹೋರಾಟ ಮಾಡುತ್ತಿದ್ದಾರೆ?' ಎಂದು ಪ್ರಶ್ನಿಸಿದರು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications