Anant Nag: ಕನ್ನಡದ ಹೆಮ್ಮೆಗೆ ಮತ್ತೊಂದು ಗರಿ; ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ಸಹಜ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ಅನಂತ್‌ ನಾಗ್‌ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ಭಾರತೀಯ ಚಿತ್ರರಂಗಕ್ಕೆ ನೀಡಿರುವ ಅಪಾರ ಕೊಡುಗೆ ಹಾಗೂ ಸುದೀರ್ಘ ಸಿನಿ ಪಯಣವನ್ನು ಪರಿಗಣಿಸಿ, 2024ನೇ ಸಾಲಿನ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿಗೆ ಅನಂತ್‌ ನಾಗ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಮೂಲಕ ಅನಂತ್‌ ನಾಗ್‌ ಅವರು ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪಡೆದ ಕನ್ನಡದ ಮೂರನೇ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಕನ್ನಡದ ವರನಟ ಡಾ. ರಾಜ್‌ಕುಮಾರ್‌ ಅವರಿಗೆ 1995ರ ಸಾಲಿನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ವಿ ಕೆ ಮೂರ್ತಿ ಅವರಿಗೂ ಫಾಲ್ಕೆ ಪ್ರಶಸ್ತಿ ನೀಡಲಾಗಿತ್ತು. ಇದೀಗ ಹಲವು ವರ್ಷಗಳ ಬಳಿಕ ಮತ್ತೊಬ್ಬ ಕನ್ನಡದ ಹಿರಿಯ ನಟನಿಗೆ ಈ ಪ್ರತಿಷ್ಠಿತ ಗೌರವ ಲಭಿಸಿರುವುದು ಕನ್ನಡ ಚಿತ್ರರಂಗಕ್ಕೆ ಹೆಮ್ಮೆಯ ಸಂಗತಿಯಾಗಿದೆ.

Anant Nag Veteran Kannada actor has been selected for the prestigious Dadasaheb Phalke Award for 2024

ಸೆಪ್ಟೆಂಬರ್‌ 22ರಂದು ಪ್ರಶಸ್ತಿ ಪ್ರದಾನ

ಸೆಪ್ಟೆಂಬರ್‌ 22ರಂದು ಗುಜರಾತ್‌ನ ಕೆವಾಡಿಯಾದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಂತ್‌ ನಾಗ್‌ ಅವರಿಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ ಅನಂತ್‌ ನಾಗ್‌ ಅವರನ್ನು 2024ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡ ಸೇರಿದಂತೆ ಭಾರತೀಯ ಚಿತ್ರರಂಗದಲ್ಲಿ ಹಲವು ದಶಕಗಳ ಕಾಲ ಅವರು ನೀಡಿರುವ ಕೊಡುಗೆ, ವಿಭಿನ್ನ ಪಾತ್ರಗಳ ನಿರ್ವಹಣೆ ಹಾಗೂ ತಮ್ಮದೇ ಆದ ಸಹಜ ಅಭಿನಯ ಶೈಲಿಗೆ ಈ ಗೌರವ ಸಂದಿದೆ.

ಡಾ. ರಾಜ್‌ಕುಮಾರ್‌, ವಿಕೆ ಮೂರ್ತಿ ಬಳಿಕ ಅನಂತ್‌ ನಾಗ್‌

ಕನ್ನಡ ಚಿತ್ರರಂಗಕ್ಕೆ ನೀಡಿದ ಅದ್ಭುತ ಕೊಡುಗೆಗಾಗಿ 1995ರ ಸಾಲಿನ, ಅಂದರೆ 43ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ಸಂದರ್ಭದಲ್ಲಿ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ವರನಟ ಡಾ. ರಾಜ್‌ಕುಮಾರ್‌ ಅವರಿಗೆ ನೀಡಲಾಗಿತ್ತು. ಈ ಮೂಲಕ ಈ ಪ್ರತಿಷ್ಠಿತ ಗೌರವ ಪಡೆದ ಮೊದಲ ಕನ್ನಡಿಗ ನಟ ಎಂಬ ಹೆಗ್ಗಳಿಕೆಗೆ ಡಾ. ರಾಜ್‌ಕುಮಾರ್‌ ಪಾತ್ರರಾಗಿದ್ದರು.

ಮೈಸೂರಿನವರಾದ ವಿಕೆ ಮೂರ್ತಿ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಹೆಚ್ಚು ಪರಿಚಿತರಾಗದಿದ್ದರೂ, ಹಿಂದಿ ಚಿತ್ರರಂಗದ ಸಿನಿಮಾಟೊಗ್ರಫಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ದಿಗ್ಗಜರು. ಗುರುದತ್ ಅವರೊಂದಿಗೆ ಕೈಜೋಡಿಸಿ 'ಪ್ಯಾಸಾ', 'ಕಾಗಜ್ ಕೆ ಫೂಲ್' ಸೇರಿದಂತೆ ಹಲವು ಚಿತ್ರಗಳಲ್ಲಿ ಬೆಳಕು, ನೆರಳು ಮತ್ತು ಕ್ಯಾಮೆರಾ ಚಲನೆಯ ಮೂಲಕ ಹೊಸ ದೃಶ್ಯಭಾಷೆಯನ್ನೇ ರೂಪಿಸಿದ ಅವರು, ಭಾರತೀಯ ಸಿನಿಮಾಟೊಗ್ರಫಿಯ ಪ್ರಮುಖ ಪಯೋನಿಯರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ಅವರ ಪ್ರಯೋಗಗಳು ಇಂದಿಗೂ ಸಿನಿಮಾ ಶಿಕ್ಷಣದಲ್ಲಿ ಅಧ್ಯಯನದ ವಿಷಯವಾಗಿವೆ.

ಕನ್ನಡಿಗರಾದ ವಿಕೆ ಮೂರ್ತಿ ತಮ್ಮ ವೃತ್ತಿಜೀವನದಲ್ಲಿ ಕೇವಲ 'ಹೂವು ಹಣ್ಣು' (1993) ಚಿತ್ರಕ್ಕೆ ಕೆಲಸ ಮಾಡಿದ್ದು, ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆಗಾಗಿ 2008ರಲ್ಲಿ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾದರು. ಇದೀಗ ಅನಂತ್‌ ನಾಗ್‌ ಅವರ ಆಯ್ಕೆಯೊಂದಿಗೆ ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯ ಪ್ರತಿಭೆಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಒಲಿದಂತಾಗಿದೆ.

ಅನಂತ್‌ ನಾಗ್‌ ಅಭಿನಯಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

ಅನಂತ್‌ ನಾಗ್‌ ಅವರಿಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ದೊರೆತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಹಲವು ದಶಕಗಳಿಂದ ತಮ್ಮ ಸಹಜ ಅಭಿನಯ, ವೈವಿಧ್ಯಮಯ ಪಾತ್ರಗಳು ಹಾಗೂ ಅದ್ಭುತ ಪ್ರತಿಭೆಯ ಮೂಲಕ ಅನಂತ್‌ ನಾಗ್‌ ಅವರು ಭಾರತೀಯ ಚಿತ್ರರಂಗ, ಅದರಲ್ಲೂ ವಿಶೇಷವಾಗಿ ಕನ್ನಡ ಚಿತ್ರರಂಗದ ಮೇಲೆ ಅಚ್ಚಳಿಯದ ಛಾಪು ಮೂಡಿಸಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.

ಅವರು ನಿರ್ವಹಿಸಿದ ಪ್ರತಿಯೊಂದು ಪಾತ್ರಕ್ಕೂ ಅಪರೂಪದ ಆಳ ಮತ್ತು ನೈಜತೆಯನ್ನು ತುಂಬಿದ್ದಾರೆ. ಶ್ರೇಷ್ಠ ಕಲಾವಿದರೊಬ್ಬರಿಗೆ ಸಂದಿರುವ ಈ ಗೌರವ ಸಂಪೂರ್ಣವಾಗಿ ಅರ್ಹವಾದದ್ದು ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಅನಂತ್‌ ನಾಗ್‌ ಅವರಿಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಘೋಷಣೆಯಾಗಿರುವುದು ಕನ್ನಡ ಚಿತ್ರರಂಗದ ಕಲಾವಿದರು, ತಂತ್ರಜ್ಞರು ಹಾಗೂ ಸಿನಿಪ್ರಿಯರಲ್ಲಿ ಸಂತಸ ಮೂಡಿಸಿದೆ. ದಶಕಗಳ ಕಾಲ ತಮ್ಮ ಅಭಿನಯದ ಮೂಲಕ ಪ್ರೇಕ್ಷಕರ ಮನಸ್ಸಿನಲ್ಲಿ ವಿಶೇಷ ಸ್ಥಾನ ಪಡೆದಿರುವ ಅನಂತ್‌ ನಾಗ್‌ ಅವರ ಸಿನಿ ಪಯಣಕ್ಕೆ ಈ ಪ್ರಶಸ್ತಿ ಮತ್ತೊಂದು ಮಹತ್ವದ ಗರಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+