ಕರ್ನಾಟಕದ ಬಿ.ಜೆ.ಪಿ. ಮುಖ್ಯಮಂತ್ರಿ ಅಭ್ಯರ್ಥಿ ಯಾರು?

ಬೆಂಗಳೂರು, ಜನವರಿ 18:ಕರ್ನಾಟಕದ ಬಿ.ಜೆ.ಪಿ. ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಎಂದರೆ ಬಹುತೇಕ ಮಂದಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಎಂದೇ ಹೇಳುತ್ತಾರೆ. ಆದರೆ, ಈ ನಡುವೆ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿದೆ. ಈ ಬಗ್ಗೆ ಮುರಳೀಧರರಾವ್ ಸ್ಪಷ್ಟನೆ ನೀಡಿದ್ದಾರೆ.

ಬಿ.ಜೆ.ಪಿ. ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪರಿವರ್ತನಾ ಯಾತ್ರೆ ಕೈಗೊಂಡಿದ್ದಾರೆ. ವರ್ಷದ ಹಿಂದೆಯೇ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಗಿದೆ ಎಂದರು.

Ananth Kumar Hegde is not Karnataka CM candidate : Muralidhar Rao

ಬಿ.ಜೆ.ಪಿ. ಮುಖ್ಯಮಂತ್ರಿ ಅಭ್ಯರ್ಥಿ ಪರಿವರ್ತನಾ ಯಾತ್ರೆ ಕೈಗೊಂಡಿದ್ದು, 10,000 ಕಿಲೋ ಮೀಟರ್ ಪ್ರವಾಸ ನಡೆಸಿದ್ದಾರೆ. ಅನಂತ್ ಕುಮಾರ್ ಹೆಗ್ಡೆ ಅವರನ್ನು ಏಕೆ ಫೋಕಸ್ ಮಾಡ್ತೀರಾ? ಎಂದು ಪ್ರಶ್ನಿಸಿದ್ದಾರೆ.

ಅನಂತ್ ಕುಮಾರ್ ಹೆಗ್ಡೆ ಮುಖ್ಯಮಂತ್ರಿ ಅಭ್ಯರ್ಥಿ ಎನ್ನುವ ಚರ್ಚೆಯನ್ನು ಬಿಟ್ಟು ಬಿಡಿ. ಅವರು ಮುಖ್ಯಮಂತ್ರಿ ಅಭ್ಯರ್ಥಿ ಅಲ್ಲ. ಆ ಬಗ್ಗೆ ಚರ್ಚೆಯೂ ಬೇಡ ಎಂದು ಹೇಳಿದ್ದಾರೆ.

ಅನಂತ್ ಕುಮಾರ್ ಹೆಗ್ಡೆ ಅವರು ಇತ್ತೀಚೆಗೆ ನೀಡಿದ ಹೇಳಿಕೆಗಳಿಂದಾಗಿ ಭಾರೀ ಸುದ್ದಿಯಾಗಿದ್ದರು. ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎನ್ನುವಂತೆ ಬಿಂಬಿಸಲಾಗಿತ್ತು. ಸ್ವತಃ ಅನಂತ್ ಕುಮಾರ್ ಹೆಗ್ಡೆಯವರೇ ಸ್ಪಷ್ಟನೆ ನೀಡಿ, ಯಡಿಯೂರಪ್ಪನವರು ಮುಖ್ಯಮಂತ್ರಿ ಅಭ್ಯರ್ಥಿ ಎಂದು ತಿಳಿಸಿದ್ದರು. ಮುರಳೀಧರರಾವ್ ಅವರೂ, ಅನಂತ್ ಕುಮಾರ್ ಹೆಗ್ಡೆ ಮುಖ್ಯಮಂತ್ರಿ ಅಭ್ಯರ್ಥಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+