Channapatna Candidate: ಚನ್ನಪಟ್ಟಣ ಕ್ಷೇತ್ರದಿಂದ ಮಹಿಳಾ ಅಭ್ಯರ್ಥಿ ಕಣಕ್ಕೆ; ಬಿಜೆಪಿ-ಜೆಡಿಎಸ್ ನಾಯಕರ ಲೆಕ್ಕಾಚಾರವೇನು?
ಬೆಂಗಳೂರು, ಜುಲೈ 01: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೀನಾಯವಾಗಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಸೋಲಿಸಲಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಇದೀಗ ತೆರವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಡಿಕೆ ಬ್ರದರ್ಸ್ ಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.
ಚನ್ನಪಟ್ಟಣ ಉಪಚುನಾವಣೆಗೆ ರಾಜಕೀಯ ಮದಗಜಗಳ ಹೋರಾಟದ ಜತೆಗೆ, ವದಂತಿಗಳ ಕೇಂದ್ರಬಿಂದವೂ ಆಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನ ಕಳೆದುಕೊಂಡ ಡಿ ಕೆ ಬ್ರದರ್ಸ್, ಚನ್ನಪಟ್ಟಣ ಕ್ಷೇತ್ರವನ್ನ ವಶಪಡಿಸಿಕೊಳ್ಳಲು ಅಚ್ಚರಿ ಅಭ್ಯರ್ಥಿಯ ಅಸ್ತ್ರ ಪ್ರಯೋಗಿದ್ದಾರೆ. ಇತ್ತ ಒಕ್ಕಲಿಗ ನಾಯಕರಾದ ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ನಡೆಯುತ್ತಿರುವ ಹೋರಾಟದ ನಡುವೆ, ಒಕ್ಕಲಿಗ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಲು ಕಮಲ-ದಳ ನಾಯಕರು ಮಾಸ್ಟರ್ ಪ್ಲಾನ್ ನಡೆಸಿದ್ದಾರೆ. ಹೀಗಾಗಿ ಚನ್ನಪಟ್ಟಣ ಉಪಚುನಾವಣೆ ಒಕ್ಕಲಿಗರ ಪ್ರಬಲ ನಾಯಕರಿಬ್ಬರ ನಡುವಿನ ಪ್ರತಿಷ್ಠೆಯಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ಡಿ ಕೆ ಶಿವಕುಮಾರ್ ಅವರು ನಾನು ಚನ್ನಪಟ್ಟಣ ಅಭ್ಯರ್ಥಿಯಾಗದೇ ವಿಧಿಯಿಲ್ಲ ಎಂಬ ಹೇಳಿಕೆ ನೀಡಿದ್ರು. ಈ ಹೇಳಿಕೆ ನೀಡಿ 48 ಗಂಟೆಯ ನಂತರ ನಮ್ಮ ಕುಟುಂಬದಿಂದ ಯಾರು ಸ್ಪರ್ಧೆ ಮಾಡಲ್ಲ ಎಂದು ಸ್ಪಷ್ಟಪಡಿಸಿದ್ರು. ಇನ್ನೂ ಕಾಂಗ್ರೆಸ್ ನಿಂದ ಯಾರು ಕಣಕ್ಕಿಳಿಯುತ್ತಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ, ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಡಿ.ಕೆ.ಶಿವಕುಮಾರ್ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಡಿ.ಕೆ ಸಹೋದರರನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮಾಸ್ಟರ್ ಪ್ಲಾನ್ ನಡೆಸಿದ್ದಾರೆ ಎನ್ನಲಾಗಿದೆ.
ನಮ್ಮ ಕುಟುಂಬದಿಂದ ಯಾರು ಸ್ಪರ್ಧೆ ಮಾಡುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಡಿ.ಕೆ.ಶಿವಕುಮಾರ್ ಚನ್ನಪಟ್ಟಣದಲ್ಲಿ ಉಪಚುನವಣೆಯಲ್ಲಿ ಸ್ಪರ್ಧಿಸಿದರೆ ಅವರನ್ನು ಕೂಡ ಕಟ್ಟಿಹಾಕುವ ನಿಟ್ಟಿನಲ್ಲಿ ಹಾಗೂ ಕಾಂಗ್ರೆಸ್ ನ ಮಹಿಳಾ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಂಸದ ಡಾ.ಸಿ.ಎನ್.ಮಂಜುನಾಥ್ ಪತ್ನಿಯನ್ನು ಅಭ್ಯರ್ಥಿಯನ್ನಾಗಿ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಈ ಹಿಂದೆ ಡಿ ಕೆ ಬ್ರದರ್ಸ್ ಭದ್ರಕೋಟೆಯಾಗಿತ್ತು. ಆದರೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಅಳಿಯ ಮಂಜುನಾಥ್ ಅವರು ಬಿಜೆಪಿಯಿಂದ ಸ್ಪರ್ಧೆ ನಡೆಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದೀಗ ಚನ್ನಪಟ್ಟಣದಿಂದ ಅನುಸೂಯಾ ಅವರನ್ನು ಮೈತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ನಿಟ್ಟಿನಲ್ಲಿ ಮೈತ್ರಿ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದಾರೆ.ಇತ್ತ ಚನ್ನಪಟ್ಟಣದಿಂದ ಸಿ ಪಿ ಯೋಗೇಶ್ವರ್ ಅವರು ಕಣಕ್ಕಿಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಆದರೆ, ಸಿಪಿ ಯೋಗೇಶ್ವರ್ ಅವರ ಸ್ಪರ್ಧಿಸಲು ಹಿಂದೆಟ್ಟು ಹಾಕಿದ್ದು, ಸೂಕ್ತ ಅಭ್ಯರ್ಥಿಯನ್ನ ಕಣಕ್ಕಿಳಿಸುವ ಚಿಂತನೆಯನ್ನ ಕಮಲ-ದಳ ನಾಯಕರು ನಡೆಸಿದ್ದಾರೆ.
ಇನ್ನೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ನಿಖಿಲ್ ಕುಮಾರಸ್ವಾಮಿ ಅವರನ್ನ ಚನ್ನಪಟ್ಟಣ ಕ್ಷೇತ್ರದಿಂದ ಕಣಕ್ಕಿಳಿಸುವಂತೆ ಕೆಲ ನಾಯಕರು ಒತ್ತಡ ಹಾಕಿತ್ತಿದ್ದು, ಒಂದು ವೇಳೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ನಡೆಸಿದ್ರೆ, ಕಾಂಗ್ರೆಸ್ ನಾಯಕರು ಚನ್ನಪಟ್ಟಣ ಕ್ಷೇತ್ರವನ್ನ ಸುಲಭವಾಗಿ ಗೆಲ್ಲಬಹುದು ಎಂದು ಮಹಿಳಾ ಅಭ್ಯರ್ಥಿಯಾಗಿ ಅನುಸೂಯ ಅವರನ್ನ ಕಣಕ್ಕಿಳಿಸಲು ಮೈತ್ರಿ ಪಡೆ ಸಜ್ಜಾಗಿದೆ.
ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ಅನಸೂಯಾ ಅವರನ್ನು ಕಣಕ್ಕಿಳಿಸಿದರೆ ಯಾವೆಲ್ಲ ಪ್ರಯೋಜನಗಳು ಆಗಬಹುದು ಎಂಬ ಬಗ್ಗೆ ಹಾಗೂ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಉಭಯ ಪಕ್ಷಗಳ ನಾಯಕರು ತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ. ಒಕ್ಕಲಿಗ ಸಮುದಾಯ ಹಾಗೂ ಮಹಿಳಾ ಮತಗಳನ್ನ ಸೆಳೆಯುವ ನಿಟ್ಟಿನಲ್ಲಿ ಕಮಲ-ದಳ ನಾಯಕರು ಪ್ಲಾನ್ ಮಾಡಿದ್ದಾರೆ. ಅಲ್ಲದೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಕಾಣಲೇಬೇಕು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರವನ್ನ ದಳಪತಿಗಳು ಕಳೆದುಕೊಂಡಿದ್ದಾರೆ. ರಾಮನಗರ ವಿಧಾನಸಭಾ ಕ್ಷೇತ್ರವನ್ನ ಮಗನ ರಾಜಕೀಯ ಭವಿಷ್ಯಕ್ಕಾಗಿ ಅನಿತಾ ಕುಮಾರಸ್ವಾಮಿ ಅವರು ತ್ಯಾಗ ಮಾಡಿದ್ರು. ಇದೀಗ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಎನ್‌ಡಿಎ ಮೈತ್ರಿಕೂಟದೊಂದಿಗೆ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ. ಜತೆಗೆ ಚನ್ನಪಟ್ಟಣದಲ್ಲಿ ರಾಜಿನಾಮೆಯಿಂದ ತೆರವಾಗಿರುವ ಶಾಸಕ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಬೇಕು. ಏಕೆಂದರೆ ದಳಪತಿಗಳಿಗೆ ಚನ್ನಪಟ್ಟಣ ಕ್ಷೇತ್ರ ಪ್ರತಿಷ್ಠೆಯ ಪ್ರಶ್ನೆಯಾಗಿದೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications