ಚಾಮರಾಜನಗರದಲ್ಲಿ 34 ಚಿನ್ನದ ನಾಣ್ಯಗಳು ಪತ್ತೆ
ಚಾಮರಾಜನಗರ, ಡಿ.1 : ಚಾಮರಾಜನಗರ ತಾಲೂಕಿನ ಹರದನಹಳ್ಳಿಯಲ್ಲಿ ಶೌಚಾಲಯದ ಗುಂಡಿ ತೆಗೆಯುವ ವೇಳೆ 34 ಚಿನ್ನದ ನಾಣ್ಯಗಳು ಸಿಕ್ಕಿವೆ. ರಾಮಸಮುದ್ರ ಪೊಲೀಸರು ನಾಣ್ಯಗಳನ್ನು ವಶಕ್ಕೆ ಪಡೆದಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಿದ್ದಾರೆ.
ಸೋಮವಾರ ಬೆಳಗ್ಗೆ ಹರದನಹಳ್ಳಿಯ ಕುಮಾರ್ ಎಂಬುವವರ ಮನೆಯಲ್ಲಿ ಇಬ್ಬರು ಕಾರ್ಮಿಕರು ಶೌಚಾಲಯ ನಿರ್ಮಾಣಕ್ಕಾಗಿ ಗುಂಡಿಯನ್ನು ಅಗೆಯುತ್ತಿದ್ದರು. ಈ ಸಂದರ್ಭದಲ್ಲಿ 32 ಚಿನ್ನದ ನಾಣ್ಯಗಳು ಪತ್ತೆಯಾಗಿವೆ.

ತಕ್ಷಣ ಕುಮಾರ್ ಅವರು ರಾಮಸಮುದ್ರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಜಿಲ್ಲಾಡಳಿತದ ಕೆಲವು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಚಿನ್ನದ ನಾಣ್ಯವನ್ನು ವಶಕ್ಕೆ ಪಡೆದಿದ್ದು, ಇಬ್ಬರು ಕಾರ್ಮಿಕರು ಮತ್ತು ಮನೆಯ ಮಾಲೀಕರನ್ನು ವಿಚಾರಣೆ ನಡೆಸುತ್ತಿದ್ದಾರೆ. [ನಟರಾಜುವಿನ ಕನ್ನಡಾಭಿಮಾನಕ್ಕೆ ಸಾಷ್ಟಾಂಗ ನಮಸ್ಕಾರ]
ಚಿನ್ನದ ನಾಣ್ಯ ಯಾವ ಕಾಲಕ್ಕೆ ಸೇರಿದ್ದು ಮುಂತಾದ ಮಾಹಿತಿಯನ್ನು ಪಡೆಯಲು ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ. [ಕೊಳ್ಳೆಗಾಲದಲ್ಲಿ ಗ್ರಾಮಸ್ಥರ ನಿದ್ದೆಗೆಡಿಸಿದ್ದವ ಸೆರೆ!]
ಹಕ್ಕಿ ಜ್ವರ ಭೀತಿ, ಕೋಳಿ ಸಾಗಣೆ ಬಂದ್ : ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಕೋಳಿ ಜ್ವರ ಕಾಣಿಸಿಕೊಂಡಿರುವುದರಿಂದ ಚಾಮರಾಜನಗರ ಜಿಲ್ಲೆಯ ಗಡಿ ಭಾಗಗಳಲ್ಲಿ ಹೊರ ರಾಜ್ಯಗಳಿಂದ ಕೋಳಿ ಮತ್ತು ಅದರ ಉತ್ಪನ್ನಗಳ ಸಾಗಣೆಯನ್ನು ಬಂದ್ ಮಾಡಲಾಗಿದೆ.
ಜಿಲ್ಲೆಯ ಗಡಿ ಭಾಗದಲ್ಲಿರುವ ಪುಣಜನೂರು, ಹಂಗಳ, ಮೂಲೆಹೊಳೆ, ಒಡೆಯರ ಪಾಳ್ಯ, ಪಾಲಾರ್ ಚೆಕ್ ಪೋಸ್ಟ್‌ಗಳಲ್ಲಿ ಹೊರ ರಾಜ್ಯಗಳಿಂದ ಬರಬಹುದಾದ ಕೋಳಿ ಮತ್ತು ಅದರ ಉತ್ಪನ್ನಗಳ ವಾಹನಗಳನ್ನು ತಡೆಯಬೇಕೆಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.












Click it and Unblock the Notifications