Get Updates
Get notified of breaking news, exclusive insights, and must-see stories!

Shakti Scheme: 'ಶಕ್ತಿ' ಯೋಜನೆ ಅಧ್ಯಯನಕ್ಕೆ ಆಂಧ್ರ ಪ್ರದೇಶದ ಸಚಿವರ ನಿಯೋಗ

ಬೆಂಗಳೂರು, ಜನವರಿ 01: ಕರ್ನಾಟಕ ಸರ್ಕಾರದ ಮಹತ್ವದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದು 'ಶಕ್ತಿ'. ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್‌ಗಳಲ್ಲಿ ಸಂಚಾರ ನಡೆಸುವ ಯೋಜನೆ ಬಗ್ಗೆ ಹಲವಾರು ಟೀಕೆ-ಟಿಪ್ಪಣಿಗಳಿವೆ. ಯೋಜನೆಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳು ನಷ್ಟದಲ್ಲಿವೆ ಎಂಬ ವಾದವೂ ಇದೆ. ಯೋಜನೆ ಯಶಸ್ವಿಯಾಗಿದೆ ಎಂದು ಕರ್ನಾಟಕ ಸರ್ಕಾರ ಹೇಳುತ್ತಿದೆ.

'ಶಕ್ತಿ' ಯೋಜನೆ ಮೂಲಕ ರಾಜ್ಯ ಸರ್ಕಾರವು ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಿದೆ. 2023ರ ಜೂನ್ 11ರಂದು ಜಾರಿಗೆ ಬಂದ 'ಶಕ್ತಿ' ಯೋಜನೆಯಿಂದ ಹಲವು ಅನುಕೂಲವಾಗಿದೆ. ಯೋಜನೆಗೆ ಅಭೂತಪೂರ್ವವಾದ ಪ್ರತಿಕ್ರಿಯೆ ಮತ್ತು ಸಕಾರಾತ್ಮಕ ಸ್ಪಂದನೆ ದೊರಕಿದೆ.

Andhra Pradesh Ministers Delegation To Study Shakti Scheme Implementation

ಗ್ರಾಮೀಣ ಭಾಗದ ಮಹಿಳೆಯರು ದೂರದ ಪಟ್ಟಣಗಳಿಗೆ ತೆರಳಿ ಹೆಚ್ಚಿನ ಆದಾಯದ ಉದ್ಯೋಗ ಹೊಂದಲು ಸಹಕಾರಿಯಾಗಿದೆ. ವಿದ್ಯಾರ್ಥಿಗಳು ನಗರಗಳಿಗೆ ವ್ಯಾಸಂಗಕ್ಕೆ ಹೋಗಿ ಬರಲು ಯೋಜನೆ ನೆರವು ನೀಡಿದೆ. ಈ ಯೋಜನೆ ಈಗ ಅಕ್ಕದ ಆಂಧ್ರ ಪ್ರದೇಶ ರಾಜ್ಯ ಸರ್ಕಾರದ ಗಮನವನ್ನು ಸೆಳೆದಿದೆ. ಯೋಜನೆಯಡಿಯಲ್ಲಿ ಮಹಿಳೆಯರು ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಸರ್ಕಾರಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಪಕ್ಕದ ರಾಜ್ಯದಲ್ಲಿಯೂ ಈ ಮಾದರಿ ಯೋಜನೆ ಜಾರಿಗೆ ಬರಲಿದೆ.

ಆಂಧ್ರ ಪ್ರದೇಶದ ಸಚಿವರ ನಿಯೋಗ: ಕರ್ನಾಟಕದ ಸರ್ಕಾರದ 'ಶಕ್ತಿ' ಯೋಜನೆ ಕುರಿತು ಅಧ್ಯಯನ ನಡೆಸಲು ಆಂಧ್ರ ಪ್ರದೇಶದ ಸಚಿವರ ನಿಯೋಗ ಜನವರಿ 2, 3ರಂದು ಬೆಂಗಳೂರಿಗೆ ಆಗಮಿಸಲಿದೆ. 2024ರ ವಿಧಾನಸಭೆ ಚುನಾವಣೆ ಬಳಿಕ ಆಂಧ್ರಪ್ರದೇಶದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿಯಾಗಿ ಪವನ್ ಕಲ್ಯಾಣ್ ಸರ್ಕಾರವನ್ನು ನಡೆಸುತ್ತಿದ್ದಾರೆ.

ಆಂಧ್ರ ಪ್ರದೇಶದ ಸಾರಿಗೆ, ಯುವ ಸಬಲೀಕರಣ ಕ್ರೀಡಾ ಸಚಿವ ಮಂಡಿಪಲ್ಲಿ ರಾಮ ಪ್ರಸಾದ್ ಶೆಟ್ಟಿ, ಗೃಹ ಮತ್ತು ವಿಪತ್ತು ನಿರ್ವಹಣಾ ಸಚಿವೆ ವಂಗಲಪುಡಿ ಅನಿತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಗುಮ್ಮಟ್ಟಿ ಸಂಧ್ಯಾರಾಣಿ ನೇತೃತ್ವದ ತಂಡ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದೆ.

ಜನವರಿ 2ರಂದು ರಾಜ್ಯಕ್ಕೆ ಆಗಮಿಸುವ ಸಚಿವರ ನಿಯೋಗ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ನಡೆಯು ಸಭೆಯಲ್ಲಿ ಪಾಲ್ಗೊಳ್ಳಲಿದೆ. ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ ಸಹ ಚರ್ಚಿಸಲಿದೆ. ಆದ್ದರಿಂದ ಆಂಧ್ರ ಪ್ರದೇಶದ ನಿಯೋಗದಲ್ಲಿ ಹಣಕಾಸು ಇಲಾಖೆ ಕಾರ್ಯದರ್ಶಿ ಸಹ ಆಗಮಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯನ್ನು ನಿಯೋಗ ಭೇಟಿ ಮಾಡಲಿದೆ. ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭೇಟಿ ಮಾಡುವ ಕಾರ್ಯಕ್ರಮವೂ ಇತ್ತು. ಆದರೆ ಸದ್ಯ ಅವರು ವಿದೇಶದಲ್ಲಿದ್ದು, ಜನವರಿ 4ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

'ಶಕ್ತಿ' ಯೋಜನೆಯ ಜಾರಿ, ಸಾರಿಗೆ ನಿಗಮಗಳ ಆರ್ಥಿಕ ಶಕ್ತಿ, ನೌಕರರ ಕಲ್ಯಾಣಕ್ಕಾಗಿ ಕೈಗೊಂಡ ಕ್ರಮಗಳು, ಉಚಿತ ಪ್ರಯಾಣದಿಂದ ಆಗುವ ಆರ್ಥಿಕ ಪರಿಣಾಮಗಳ ಕುರಿತು ಆಂಧ್ರ ಪ್ರದೇಶದ ನಿಯೋಗ ಮಾಹಿತಿ ಸಂಗ್ರಹ ಮಾಡಲಿದೆ. ಅಲ್ಲದೇ ಯುಪಿಐ ಪಾವತಿ ವ್ಯವಸ್ಥೆಯನ್ನು ಬಸ್‌ಗಳಲ್ಲಿ ಪರಿಚಯಿಸಿರುವ ಕುರಿತು ಅಧಿಕಾರಿಗಳಿಂದ ವಿವರಣೆಯನ್ನು ಪಡೆಯಲಿದೆ.

ಈ ಯೋಜನೆ ಕುರಿತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಾತನಾಡಿದ್ದು, "ಶಕ್ತಿ ಯೋಜನೆ ಜಾರಿಗೆ ಬಂದ ನಂತರ ರಾಜ್ಯದ ಎಲ್ಲಾ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಮಹಿಳಾ ಸ್ವಾತಂತ್ರ್ಯಕ್ಕೆ ಈ ಯೋಜನೆ ಹೊಸ ಮುನ್ನುಡಿ ಬರೆದಿದೆ. ನನ್ನ ತಾಯಂದಿರು, ಅಕ್ಕ ತಂಗಿಯರು ದೈವ ದರ್ಶನದಿಂದ ಹಿಡಿದು ಉದ್ಯೋಗಕ್ಕಾಗಿ ದೂರದ ಊರಿಗೆ ಉಚಿತವಾಗಿ ಪ್ರಯಾಣಿಸುತ್ತಿರುವುದು ಖುಷಿ ತಂದಿದೆ" ಎಂದು ಹೇಳಿದ್ದಾರೆ.

2024ರ ನವೆಂಬರ್‌ನಲ್ಲಿ ಸಾರಿಗೆ ಸಚಿವರ ಹೇಳಿಕೊಂದು ವೈರಲ್ ಆಗಿತ್ತು. ಆಗ ಸ್ಪಷ್ಟನೆ ನೀಡಿದ್ದ ಸಚಿವ ರಾಮಲಿಂಗಾ ರೆಡ್ಡಿ, "ನಾನು ಯಾವುದೇ ಮಾಧ್ಯಮದವರಿಗೂ ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ. ಈ ರೀತಿಯ ಹೇಳಿಕೆಗಳು ವಿನಾ ಕಾರಣ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವ ಶಕ್ತಿ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರವಾಗಿದೆ" ಎಂದು ತಿಳಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+