ಅಂಗನವಾಡಿಗೆ ಕಾರ್ಯಕರ್ತೆಯರಿಗೆ ಸಚಿವೆ ಉಮಾಶ್ರೀ ಸಿಹಿ

Anganwadi honorarium hiked - Women and Child Development minister Umashree
ಬೆಂಗಳೂರು, ಸೆ. 24: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪುರಾತನ ಬೇಡಿಕೆಗೆ ರಾಜ್ಯ ಸರಕಾರ ಕೊನೆಗೂ ಸ್ಪಂದಿಸಿದ್ದು, ಇಡೀ ಅಂಗನವಾಡಿ ವ್ಯವಸ್ಥೆಗೆ ಕಾಯಕಲ್ಪ ನೀಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ನಿರ್ಧರಿಸಿದೆ.

ಮೊದಲ ಕ್ರಮವಾಗಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವಧನ ಹೆಚ್ಚಿಸಲಾಗಿದೆ. ಅದೇ ರೀತಿ ಗ್ರಾಮೀಣ ಪ್ರದೇಶಗಳಲ್ಲಿ ಅಂಗನವಾಡಿ ಕಟ್ಟಡಗಳ ಬಾಡಿಗೆಯನ್ನೂ ಹೆಚ್ಚಿಸಲಾಗಿದೆ. ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಅವರೇ ಈ ವಿಷಯ ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರಿಗೆ 500 ರೂ, ಸಹಾಯಕಿಯರಿಗೆ 250 ರೂ, ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 250 ರೂ ಸಹಾಯಧನ ಹೆಚ್ಚಳ ಮಾಡಲಾಗಿದೆ ಎಂದು ಸಚಿವೆ ಉಮಾಶ್ರೀ ಹೇಳಿದ್ದಾರೆ. ಕರ್ನಾಟಕ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಒಕ್ಕೂಟ ಸರಕಾರದ ಆದೇಶವನ್ನು ಸ್ವಾಗತಿಸಿದೆ.

ಪ್ರಸ್ತುತ, ಕೇಂದ್ರ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ 3 ಸಾವಿರ ರೂ, ಸಹಾಯಕಿಯರಿಗೆ 1,500 ರೂ ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 1,500 ರೂ ಗೌರವಧನ ನೀಡುತ್ತದೆ. ಇದರ ಜತೆಗೆ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ 1,500 ರೂ, ಸಹಾಯಕಿಯರಿಗೆ 750 ರೂ ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 750 ರೂ ನೀಡುತ್ತಿದೆ.

ಇದೀಗ ಸರ್ಕಾರ ಸಹಾಯಧನ ಹೆಚ್ಚಿಸಿರುವುದರಿಂದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ 2 ಸಾವಿರ ರೂ, ಸಹಾಯಕಿಯರಿಗೆ 1 ಸಾವಿರ ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 1 ಸಾವಿರ ರೂ ಗೌರವಧನ ನೀಡಿದಂತಾಗುತ್ತದೆ.

ಅಂಗನವಾಡಿ ಬಾಡಿಗೆ ಹೆಚ್ಚಳ: ಇದೇ ವೇಳೆ, ಗ್ರಾಮೀಣ ಪ್ರದೇಶಗಳಲ್ಲಿ ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿರುವ ಅಂಗನವಾಡಿಗಳಿಗೆ ನೀಡುತ್ತಿದ್ದ ಬಾಡಿಗೆಯನ್ನೂ ಹೆಚ್ಚಿಸಲಾಗಿದೆ. ಈ ಹಿಂದೆ 200 ರೂ ನೀಡುತ್ತಿದ್ದ ಬಾಡಿಗೆ ಮೊತ್ತವನ್ನು 750 ರೂ. ಗೆ ಹೆಚ್ಚಿಸಲಾಗಿದೆ. ನಗರ ಪಾಲಿಕೆ ವ್ಯಾಪ್ತಿಯ ಅಂಗನವಾಡಿ ಕಟ್ಟಡ ಬಾಡಿಗೆಯನ್ನು 500 ರಿಂದ 3 ಸಾವಿರ ರೂಪಾಯಿಗೂ, ಬಿಬಿಎಂಪಿಯಲ್ಲಿ 750 ರಿಂದ 5 ಸಾವಿರ ರೂ.ಗೂ ಹೆಚ್ಚಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+