ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ವಾಪಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ ಹಾಗೂ ಇನ್ನಿತರ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ಸಿಕ್ಕ ನಂತರ ಪ್ರತಿಭಟನೆ ಹಿಂದಕ್ಕೆ.

ಬೆಂಗಳೂರು, ಮಾರ್ಚ್ 23: ನಗರದ ಫ್ರೀಡಂ ಪಾರ್ಕ್ ನಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಅಂಗನವಾಗಿ ಕಾರ್ಯಕರ್ತೆಯರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಗಿದೆ. ಪ್ರತಿಭಟನೆ ಹಿಂಪಡೆದಿರುವುದಾಗಿ ಫ್ರೀಂಡಂ ಪಾರ್ಕ್ ನಲ್ಲಿ ಕರ್ನಾಟಕ ಅಂಗನವಾಡಿ ಕಾರ್ಯಕರ್ತೆಯರ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಘೋಷಿಸಿದ್ದಾರೆ.

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಅಂಗನವಾಡಿ ಸಂಘಟನೆಯ ಪ್ರತಿನಿಧಿಗಳು ಸುಮಾರು 2 ಗಂಟೆ ಮಾತುಕತೆ ನಡೆಸಿದ್ದು, ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿರುವುದರಿಂದ ಪ್ರತಿಭಟನೆ ಹಿಂಪಡೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ.

Anganawadi teachers agitation ends on govt's assurance to hike their wages

ಏತನ್ಮಧ್ಯೆ, ಏ. 10ರಂದು ಅಂಗನವಾಗಿ ಕಾರ್ಯಕರ್ತೆಯರ ಸಮಸ್ಯೆ ನಿವಾರಣೆಗಾಗಿ ವಿಶೇಷ ಸಭೆ ನಡೆಯಲಿದ್ದು, ಅಲ್ಲಿ ನಮ್ಮ ಸಮಸ್ಯೆಗಳಿಗೆ ಸೂಕ್ತ ಉತ್ತರ ಸಿಗಬಹುದೆಂದು ವರಲಕ್ಷ್ಮಿ ಆಶಿಸಿದರು.

ಏತನ್ಮಧ್ಯೆ, ಮುಷ್ಕರ ಹಿಂಪಡೆದ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಊರು, ಸ್ಥಳಗಳಿಗೆ ತೆರಳಲು ನೆರವಾಗುವಂತೆ ಸರ್ಕಾರ ಮುಷ್ಕರ ನಡೆಯುತ್ತಿದ್ದ ಫ್ರೀಡಂ ಪಾರ್ಕ್ ನಿಂದ ವಿಶೇಷ ಬಿಎಂಟಿಸಿ ಬಸ್ ಸೌಕರ್ಯ ಕಲ್ಪಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+