GOOD NEWS: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್
ಬೆಂಗಳೂರು, ಜುಲೈ 29: ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಎಲ್ಲಾ ಸಂಘಟನೆಗಳ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.
ಮುಂದಿನ ಅಕ್ಟೋಬರ್‌ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಗೌರ್ವನ್ಮೆಂಟ್ ಮಾಂಟೆಸ್ಸರಿ) ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಬೇಕಿದ್ದು, ಇನ್ನುಂದೆ ಅಂಗನವಾಡಿ ಕಾರ್ಯಕರ್ತೆಯರು, ಚುನಾವಣಾ ಕೆಲಸಗಳಿಂದ ವಿನಾಯಿತಿ ಪಡೆಯಲಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ಆರಂಭವಾಗಲಿದ್ದು, ಕಾರ್ಯಕರ್ತೆಯರ ಒತ್ತಡವನ್ನು ಇಳಿಸುವ ಸಲುವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಸಚಿವರು ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ವೀರಶೈವ ಲಿಂಗಾಯತ ಸಮಾಜದವರು ಅನ್ಯಾಯವನ್ನು ಎಂದೂ ಸಹಿಸುವುದಿಲ್ಲ. ಪ್ರಸ್ತುತ ಜಾತಿ ಗಣತಿ ವಿಷಯದಲ್ಲಿ ಸಹ ನಮ್ಮ ಸಮಾಜಕ್ಕೆ ಅನ್ಯಾಯವಾಗಬಾರದೆನ್ನುವ ಕಾರಣಕ್ಕೆ ನಮ್ಮ ಸಮಾಜದ 7 ಮಂತ್ರಿಗಳು ಸೇರಿ ಲಿಖಿತವಾಗಿಯೇ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ತಿಳಿಸಿದೆವು. 10 ವರ್ಷಗಳ ಹಿಂದೆ ಮಾಡಿದ್ದ ಜಾತಿ ಗಣತಿ ಸೂಕ್ತ ರೀತಿಯಲ್ಲಿ ಇಲ್ಲದಿದ್ದ ಕಾರಣ ಇದೀಗ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ, ಸಮಸ್ಯೆಗಳ ಬಗ್ಗೆ ಸಂಪೂರ್ಣ ಹೊಸದಾಗಿ ಸಮೀಕ್ಷೆ ನಡೆಯುತ್ತಿದೆ. ಹಾಗಾಗಿ ನಮ್ಮ ಸಮಾಜಕ್ಕೆ ನಾವು ಅನ್ಯಾಯವಾಗಲು ಬಿಡುವುದಿಲ್ಲ, ಹಾಗೆಯೇ, ಬೇರೆ ಸಮಾಜಕ್ಕೂ ಅನ್ಯಾಯ ಆಗುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು.
ನಾವೆಲ್ಲರೂ ಒಂದು ಎನ್ನುವ ತತ್ವದಲ್ಲಿ ನಂಬಿಕೆ ಇಟ್ಟುಕೊಂಡವರು ನಾವು ವೀರಶೈವ ಲಿಂಗಾಯತ ಸಮಾಜದವರು. ಒಂದು ರೊಟ್ಟಿ ಯನ್ನು ಎಲ್ಲರಿಗೂ ಹಂಚಿ ತಿನ್ನುವ ಮನೋಭಾವ ಹೊಂದಿರುವ ಸಮಾಜ ನಮ್ಮದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಸಿದ್ದರಾಮಯ್ಯ ನವರ ನೇತೃತ್ವದ ರಾಜ್ಯ ಸರ್ಕಾರ ಬಸವ ತತ್ವಗಳನ್ನು ಅಳವಡಿಸಿಕೊಂಡು ಕಾರ್ಯ ನಿರ್ವಹಿಸುತ್ತಿದೆ. ಬಸವಣ್ಣನವರನ್ನು ರಾಜ್ಯ ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಬಸವ ತತ್ವಗಳನ್ನು ಅಳವಡಿಸಿಕೊಂಡಿದೆ. ಸಾಮಾಜಿಕ ನ್ಯಾಯ ನೀಡುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ ಎಂದರು.
ನಮ್ಮ ಸಮಾಜದ ಮಕ್ಕಳು ಕೇವಲ ಇಂಜಿನಿಯರಿಂಗ್, ವೈದ್ಯಕೀಯ ಪದವಿ ಪಡೆಯಬೇಕು ಎಂಬ ಮನೋಭಾವದಿಂದ ಹೊರಬಂದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಬೇಕು. ಸಮಾಜದ ಹೆಚ್ಚು ಮಕ್ಕಳು ಐಎಎಸ್, ಐಪಿಎಸ್ ಅಧಿಕಾರಿಗಳಾಗಬೇಕು, ಇದೇ ನನ್ನ ಹೆಬ್ಬಯಕೆ ಹಾಗೂ ಹಾರೈಕೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದರು.












Click it and Unblock the Notifications