ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಕ್ರೀದ್‌ಗೆ ಗೋವುಗಳ ಬಲಿ ಬೇಡ: ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಮನವಿ!

|
Google Oneindia Kannada News

ಬೆಂಗಳೂರು, ಜು. 19: "ಬಕ್ರೀದ್ ಹಬ್ಬ ಬರುತ್ತಿದೆ. ತ್ಯಾಗ ಮತ್ತು ಬಲಿದಾನದ ಹಬ್ಬ ಎಂದೇ ಕರೆಯುವ ಬಕ್ರೀದ್ ಹಬ್ಬದ ಸಮಯದಲ್ಲಿ ಸಹಜವಾಗಿಯೇ ಪ್ರಾಣಿಗಳ ಬಲಿ ನೀಡಲಾಗುತ್ತದೆ. ಆದರೆ ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ರಾಜ್ಯದಿಂದ ಹೊರಗಡೆ ಅಥವಾ ಹೊರ ರಾಜ್ಯದಿಂದ ನಮ್ಮ ರಾಜ್ಯಕ್ಕೆ ಯಾವುದೇ ಮಾರ್ಗದಿಂದ ಅಕ್ರಮ ಗೋವುಗಳು ಮತ್ತು ಗೋಮಾಂಸ ಸಾಗಿಸುವುದರ ಮೇಲೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.

"ಸಾಮಾನ್ಯವಾಗಿ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಬಲಿಕೊಡುವ ಸಂಪ್ರದಾಯವಿದೆ. ಅದಕ್ಕಾಗಿ ಗೋವುಗಳನ್ನು ಸಹ ಬಳಕೆ ಮಾಡಲಾಗುತ್ತದೆ. ಆದರೆ ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಗೋಹತ್ಯೆ ನಿಷೇಧ ಅನುಷ್ಠಾನ ಆಗಿರುವುದರಿಂದ ಗೋವುಗಳ ಹತ್ಯೆ ಯಾವುದೇ ಕಾರಣಕ್ಕೂ ನಡೆಯದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ತಿಳಿಸಲಾಗಿದೆ." ಎಂದು ಪ್ರಭು ಚೌಹಾಣ್ ಹೇಳಿದ್ದಾರೆ.

ರಾಜ್ಯದ ಎಲ್ಲ ಗಡಿಭಾಗಗಳಲ್ಲಿ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಲು ತಿಳಿಸಲಾಗಿದ್ದು ಗೋಹತ್ಯೆ ನಿಷೇಧ ಕಾಯ್ದೆಯ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದ್ದಾರೆ.

ಗೋರಕ್ಷಕರಿಗೆ ಸಚಿವರ ಸೂಚನೆ

ಗೋರಕ್ಷಕರಿಗೆ ಸಚಿವರ ಸೂಚನೆ

ಇದೇ ಸಂದರ್ಭದಲ್ಲಿ ಗೋರಕ್ಷರು ಅಥವಾ ಜನ ಸಮಾನ್ಯರು ಯಾವುದೇ ಕಾರಣಕ್ಕೂ ಕಾನೂನು ಕೈಗೆ ತೆಗೆದುಕೊಳ್ಳಬಾರದು ಎಂದು ಸೂಚಿಸಿದ್ದಾರೆ. ಈ ಕುರಿತು ಮಾತಣಾಡಿರುವ ಸಚಿವ ಚೌಹಾಣ್ ಅವರು, "ಒಂದು ವೇಳೆ ಎಲ್ಲಾದರೂ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿರುವುದು ಕಂಡುಬಂದಲ್ಲಿ ಗೋಪಾಲಕರು ಗೋರಕ್ಷಕರು ಹಾಗೂ ಸಾರ್ವಜನಿಕರು ಪಶುಸಂಗೋಪನೆ ಇಲಾಖೆಯ ಪ್ರಾಣಿ ಕಲ್ಯಾಣ ಸಹಾಯವಾಣಿಗೆ ತಿಳಿಸಬೇಕು. ಅಥವಾ ಹತ್ತಿರದ ಪೊಲೀಸ್ ಠಾಣೆಗೆ ದೂರು ಕೊಡಬಹುದು. ಆದರೆ ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳುವುದು ಬೇಡ" ಎಂದು ಮನವಿ ಮಾಡಿದ್ದಾರೆ.

ಗಡಿಭಾಗದಲ್ಲಿ ಕಟ್ಟುನಿಟ್ಟಿನ ನಿಗಾ

ಗಡಿಭಾಗದಲ್ಲಿ ಕಟ್ಟುನಿಟ್ಟಿನ ನಿಗಾ

"ಈಗಾಗಲೇ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಈ ಕುರಿತಾಗಿ ಸಭೆಗಳು ನಡೆದಿದ್ದು ಗಡಿಭಾಗದಲ್ಲಿ ಪೊಲೀಸ್ ಇಲಾಖೆಯ ಜೊತೆಗೆ ಸೇರಿ ಕಟ್ಟುನಿಟ್ಟಿನ ನಿಗಾ ಇಡಬೇಕು. ಪ್ರಾಣಿ ಕಲ್ಯಾಣ ಮಂಡಳಿಗೆ ಸದಸ್ಯರಿಗೆ ವಲಯವಾರು ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆಗೆ ಸಮನ್ವಯ ಸಾಧಿಸಿ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಅಕ್ರಮ ಗೋವುಗಳ ಸಾಗಣೆ ಆಗದಂತೆ ನೋಡಿಕೊಳ್ಳಬೇಕು" ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.

ಅಧಿಕಾರಿಗಳ ವಿರುದ್ಧ ಕ್ರಮ

ಅಧಿಕಾರಿಗಳ ವಿರುದ್ಧ ಕ್ರಮ

"ಗೋಹತ್ಯೆ ಮಾಡದಂತೆ ಈಗಾಗಲೇ ಮನವಿ ಮಾಡಿಕೊಂಡಿದ್ದೇವೆ. ಹೀಗಾಗಿ ಯಾರೂ ಕೂಡ ಅಂಥದ್ದನ್ನು ಮಾಡಬಾರದು. ಗೋಹತ್ಯೆ ತಡೆಯಲು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾವಾರು ಜವಾಬ್ದಾರಿ ನೀಡಲಾಗಿದೆ. ಅವರಿಗೆ ಸಂಬಂಧಪಟ್ಟ ಪ್ರದೇಶದಲ್ಲಿ ಗೋಹತ್ಯೆ ನಡೆದಿದ್ದು ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು" ಎಂದು ಸಚಿವ ಪ್ರಭು ಚೌಹಾಣ್ ಎಚ್ಚರಿಕೆ ನೀಡಿದ್ದಾರೆ.

Recommended Video

ಖುಷಿಯಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸುತ್ತಿರುವ ವಿದ್ಯಾರ್ಥಿಗಳು | Oneindia Kannada
ವದಂತಿಗಳಿಗೆ ಕಿವಿ ಕೊಡಬೇಡಿ

ವದಂತಿಗಳಿಗೆ ಕಿವಿ ಕೊಡಬೇಡಿ

"ಸಮಾಜದಲ್ಲಿ ಸಾಮಾಜಿಕ ಸಾಮರಸ್ಯ ಕದಡಲು ಅನೇಕರು ಸಾಮಾಜಿಕ ಜಾಲತಾಣವನ್ನು ಮಾಧ್ಯಮವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಾರೆ ಗೋಹತ್ಯೆ ಕುರಿತಾಗಿ ಯಾವುದೇ ಸುಳ್ಳು ಸುದ್ದಿ ಅಥವಾ ಸಂದೇಶಗಳನ್ನು ಹರಿಬಿಡುವುದು ಸಮಾಜದಲ್ಲಿ ಅಶಾಂತಿ ನಿರ್ಮಿಸಲು ಪ್ರಯತ್ನಿಸುವುದು ಕಂಡುಬಂದಲ್ಲಿ ಪೊಲೀಸ್ ಇಲಾಖೆ ಅಂಥವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಿದೆ" ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.

English summary
Animal Husbandry Minister Prabhu Chauhan has pleaded not slaughter cows for the Bakrid. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X