ಚಾಮರಾಜನಗರ ಚಿಕ್ಕಲ್ಲೂರು ಜಾತ್ರೆಯಲ್ಲಿ ಪ್ರಾಣಿಬಲಿ ನಿಷೇಧ

By: ಮೈಸೂರು ಪ್ರತಿನಿಧಿ
Subscribe to Oneindia Kannada

ಚಾಮರಾಜನಗರ, ಜನವರಿ,27: ಪ್ರಾಣಿಬಲಿ ತಡೆಯಲು ಸುಪ್ರೀಂಕೋರ್ಟ್ ಆದೇಶ ನೀಡಿದ ಹಿನ್ನಲೆಯಲ್ಲಿ ಚಾಮರಾಜನಗರ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನಲ್ಲಿ ನಡೆಯುತ್ತಿರುವ ಸಿದ್ದಪ್ಪಾಜಿ ಜಾತ್ರೆಯಲ್ಲಿ ಪ್ರಾಣಿಬಲಿ ನಿಷೇಧಿಸಲಾಗಿದ್ದು, ಜನರ ನಡುವೆ ಮಾತಿನ ಚಕಮಕಿ ನಡೆಯಿತು.

ಸುಪ್ರೀಂ ಕೋರ್ಟ್ ಆದೇಶ ಮತ್ತು ಮಾನವ ಹಕ್ಕುಗಳ ಆಯೋಗದ ಕಟು ನಿರ್ಧಾರ ಹಾಗೂ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್.ಜೈನ್ ನಿರ್ದೇಶನದಂತೆ ಚಿಕ್ಕಲ್ಲೂರಿನ ಸಿದ್ದಾಪ್ಪಾಜಿ ಜಾತ್ರೆಗೆ ಹೋಗುವ ಪ್ರತಿಯೊಂದು ವಾಹನವನ್ನು ಪರಿಶೀಲಿಸಿ ಕುರಿ ಕೋಳಿಯನ್ನು ಜಪ್ತಿಮಾಡಲಾಗಿದೆ.[ಕೋಳಿ ಕಾಳಗಕ್ಕೆ ಬಂದು ಜೈಲು ಸೇರಿದ್ರು]

Chamarajanagar

ಲಕ್ಷಾಂತರ ಮಂದಿ ಸೇರುವ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಗೆ ನೂರಾರು ವರ್ಷಗಳ ಇತಿಹಾಸವಿದೆ. ಇಲ್ಲಿ ಪ್ರಾಣಿಬಲಿ, ಸಹಪಂಕ್ತಿ ಭೋಜನ ಪದ್ದತಿ ಸರ್ವೇಸಾಮಾನ್ಯ. ಪ್ರಾಣಿಬಲಿಗೆ ಕುರಿ ಕೋಳಿ ತೆಗೆದುಕೊಂಡು ಹೋಗುವಂತಿಲ್ಲ ಎಂದು ತಾಕೀತು ಮಾಡಿದ ಪೊಲೀಸರು ಪ್ರಾಣಿಗಳನ್ನು ವಶಪಡಿಸಿಕೊಂಡು ಜನರು ಮಾತ್ರ ಜಾತ್ರೆಗೆ ತೆರಳುವಂತೆ ಮಾಡಿದರು.

ಪ್ರಾಣಿಬಲಿ ನಿಷೇಧ ಸಂಬಂಧ ಕ್ರಮ ಕೈಗೊಳ್ಳುವ ಸಲುವಾಗಿ ಉಪವಿಭಾಗ ಅಧಿಕಾರಿ ಹಾಗೂ ಕೊಳ್ಳೇಗಾಲ ತಹಸೀಲ್ದಾರ್ ಅವರೊಂದಿಗೆ ಕೊಳ್ಳೇಗಾಲದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು, ಹಳೇ ಮಠದ ಸುತ್ತಮುತ್ತಲ ಪ್ರದೇಶಕ್ಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಸಿದ್ದಪ್ಪಾಜಿ ದೇವಸ್ಥಾನದ ಸುತ್ತಮುತ್ತಲ ಪ್ರದೇಶಕ್ಕೆ ನಿಯೋಜಿಸಲಾಗಿದೆ.[ಹುಲಿ, ಮೇಕೆಯ ಹಾಡು..."ಯೇ ದೋಸತಿ ಹಮ್ ನಹಿ ಛೋಡೆಂಗೆ"]

ಜೊತೆಗೆ ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಅಭಿಯಂತರರು, ಕೊತ್ತನೂರು, ಸುಂಡಳ್ಳಿ ಗ್ರಾಮಗಳ ಸುತ್ತಮುತ್ತಲ ಪ್ರದೇಶಕ್ಕೆ ಕೊಳ್ಳೇಗಾಲ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ರಾಚಪ್ಪಾಜಿ ನಗರದ ಸುತ್ತಮುತ್ತಲ ಪ್ರದೇಶಕ್ಕೆ ಕೊಳ್ಳೇಗಾಲ ನಗರ ಸಭೆ ಪೌರಾಯುಕ್ತರು, ಬಂಡಳ್ಳಿ ರಸ್ತೆ ಮಾರ್ಗದ ಸುತ್ತಮುತ್ತಲ ಪ್ರದೇಶಗಳ ವ್ಯಾಪ್ತಿಗೆ ಕೊಳ್ಳೇಗಾಲ ತಾಲೂಕು ಪಶುಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕರನ್ನು ನಿಯೋಜಿಸಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Animal sacrifice banned in siddappaaji jatre, Chikkallur Village, kollegal, Chamarajanagar. So some police investigated some vehicles and take all animals to their custody.
Please Wait while comments are loading...