ಅನಿತಾ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಕುಮಾರಸ್ವಾಮಿ ಮೌನ!

Posted By: Gururaj
Subscribe to Oneindia Kannada

ಬೆಂಗಳೂರು, ಜನವರಿ 10 : 'ನಮ್ಮ ಕುಟುಂಬದಿಂದ ಇಬ್ಬರು ಮಾತ್ರ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ದೇವನಹಳ್ಳಿಯಲ್ಲಿ ಬುಧವಾರ ಮಾತನಾಡಿದ ಅವರು, 'ಮಾಧ್ಯಮಗಳಲ್ಲಿ ನಾಲ್ಕು ಜನರು ಸ್ಪರ್ಧೆ ಮಾಡಲಿದ್ದಾರೆ ಎಂದು ಬರುತ್ತಿದೆ. ಅದಕ್ಕೆ ಉತ್ತರ ಕೊಡಲು ಆಗುವುದಿಲ್ಲ' ಎಂದರು.

ಚನ್ನಪಟ್ಟಣ: ಯೋಗೇಶ್ವರ್ ವಿರುದ್ಧ ಅನಿತಾ ಕುಮಾರಸ್ವಾಮಿ ಸ್ಪರ್ಧೆ?

'ನಮ್ಮ ಪಕ್ಷದ ಪರವಾಗಿ ಪ್ರಚಾರ ನಡೆಸಲು ಹಲವರು ಬರಲಿದ್ದಾರೆ. ತೆಲಗು ನಟ ಪವನ್ ಕಲ್ಯಾಣ್ ಅವರನ್ನು ಕರೆಸುವ ಕುರಿತು ಮಾತುಕತೆ ನಡೆಯುತ್ತಿದೆ' ಎಂದು ಹೇಳಿದರು.

Anitha Kumaraswamy to contest form Channapatna : Why Kumaraswamy silent

'ಎಂ.ಸಿ.ನಾಣಯ್ಯ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಳೆಯ ಸ್ನೇಹಿತರು. ಆದ್ದರಿಂದ ಭೇಟಿಯಾಗಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ' ಎಂದು ಕುಮಾರಸ್ವಾಮಿ ತಿಳಿಸಿದರು.

ಅನಿತಾ ಕುಮಾರಸ್ವಾಮಿ ಸ್ಪರ್ಧೆ : ಕುಟುಂಬದಿಂದ ಇಬ್ಬರೇ ಸ್ಪರ್ಧೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಅತ್ತ ಚನ್ನಪಟ್ಟಣ ಕ್ಷೇತ್ರಕ್ಕೆ ಅನಿತಾ ಕುಮಾರಸ್ವಾಮಿ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ.

ಚನ್ನಪಟ್ಟಣ ತಾಲೂಕು ಜೆಡಿಎಸ್ ಮುಖಂಡರು ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಅನಿತಾ ಕುಮಾರಸ್ವಾಮಿ ಅವರು ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ಇದರಿಂದಾಗಿ ಹಲವು ಗೊಂದಲಗಳು ಉಂಟಾಗಿವೆ.

ಬಿಜೆಪಿ ನಾಯಕ, ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ ವಿರುದ್ಧ ಅನಿತಾ ಕುಮಾರಸ್ವಾಮಿ ಅವರು ಸ್ಪರ್ಧಿಸುವ ಕುರಿತು ಎಚ್.ಡಿ.ಕುಮಾರಸ್ವಾಮಿ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Only two people will contest for Karnataka assembly elections 2018 from my family said JDS president H.D.Kumaraswamy. But, he is silent on the issue of Anitha Kumaraswamy to contest form Channapatna.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ