Ropeway Project: ಅಂಜನಾದ್ರಿ ಬೆಟ್ಟ ಸೇರಿ ರಾಜ್ಯದ 11 ಪ್ರವಾಸಿ ತಾಣಗಳಲ್ಲಿ ರೋಪ್ ವೇ ಬಗ್ಗೆ ಅಪ್ಡೇಟ್
ಸಿಎಂ ಸಿದ್ದರಾಮಯ್ಯ ಅವರು ಪ್ರವಾಸಿಗರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. 2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅಂಜನಾದ್ರಿ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಅನುಮೋದನೆ ನೀಡಿದೆ ಎಂದಿದ್ದಾರೆ. ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ, ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ, ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿ ಕ್ಷೇತ್ರದ ಸುತ್ತ ಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕಿದೆ ಎಂದಿದ್ದಾರೆ.

ಈ ಕ್ಷೇತ್ರಕ್ಕೆ ಹಂತ-1 ಮತ್ತು ಹಂತ-2ರಲ್ಲಿ 200 ಕೋಟಿಗಳ ಕಾಮಗಾರಿಗಳು ಮಂಜೂರಾಗಿವೆ. ಈವರೆಗೆ ಈ ಕಾಮಗಾರಿಗಳಿಗೆ ರೂ.10.00 ಕೋಟಿಗಳನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಬಾಕಿ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಹೆಚ್ಚುವರಿ ಅನುದಾನ ಒದಗಿಸಬೇಕು ಎಂದು ಮಾಹಿತಿ ನೀಡಿದ್ದಾರೆ.
ಈಗಾಗಲೇ ಮಂಜೂರಾಗಿರುವ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರಿ ಜಮೀನಿನ ಕೊರತೆ ಇರುವುದರಿಂದ, ಪ್ರಸ್ತಾಪಿಸಿರುವ 77.28 ಖಾಸಗಿ ಜಮೀನನ್ನು ಅನುದಾನದ ಕೊರತೆಯಿರುವುದರಿಂದ ಈವರೆಗೂ ಭೂ-ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ಹೆಚ್ಚುವರಿ ಜಮೀನು ಒಳಗೊಂಡಂತೆ ಒಟ್ಟು 101 ಎಕರೆ 30 ಗುಂಟೆ ಖಾಸಗಿ ಜಮೀನು ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯವಾಗಿರುವ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಒದಗಿಸಬೇಕಿರುತ್ತದೆ. ಮಂಜೂರಾಗಿರುವ ಬಹುತೇಕ ಕಾಮಗಾರಿಗಳನ್ನು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಜಮೀನುಗಳಲ್ಲಿ ಕೈಗೊಳ್ಳಬೇಕು. ಈ ಎಲ್ಲ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಯ ಎನ್‌ಒಸಿ ನೀಡಬೇಕಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿವರಿಸಿದ್ದಾರೆ.

ಏನಿದು ರೋಪ್‌ವೇ ಯೋಜನೆ?
ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ರೋಪ್‌ವೇ ಕುರಿತು ಹನುಮಾನ್ ಭಕ್ತರು ಕಂಡಿದ್ದ ಕನಸು ಶೀಘ್ರದಲ್ಲೇ ನನಸಾಗಲಿದೆ. ಬೆಟ್ಟದಲ್ಲಿ ಮೂರು ರೋಪ್‌ವೇಗಳನ್ನು ನಿರ್ಮಿಸಲು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ನಿರ್ಧರಿಸಿದ್ದು, ಹಂಪಿ ವಿರೂಪಾಕ್ಷ ದೇವಸ್ಥಾನದಿಂದ ಅಂಜನಾದ್ರಿ ಬೆಟ್ಟಗಳಿಗೆ ಒಂದು ರೋಪ್‌ವೇ ನಿರ್ಮಿಸಲು ಈಗಾಗಲೇ ನಿರ್ಧಾರ ಕೈಗೊಳ್ಳಲಾಗಿದೆ. ಉಳಿದ ಎರಡು ರೋಪ್ ವೇಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.
ಬೆಟ್ಟದ ತುದಿಯಲ್ಲಿರುವ ಸಣ್ಣ ಕೊಳದ ಬಳಿ ಬೇಸ್ ಸ್ಟೇಷನ್ ನಿರ್ಮಿಸಲು ಉದ್ದೇಶಿಸಲಾಗಿದ್ದು, ಒಟ್ಟು 800 ಜನ ರೋಪ್‌ವೇ ಮೂಲಕ ಈ ದೇವಾಲಯಕ್ಕೆ ಭೇಟಿ ನೀಡಬಹುದು. ಬೆಟ್ಟದ ತುದಿಯನ್ನು ತಲುಪಲು 575 ಮೆಟ್ಟಿಲುಗಳನ್ನು ಹತ್ತಬೇಕು. ಇದು ಸಾಧ್ಯವಾಗದ ಹಿರಿಯ ನಾಗರಿಕರು, ವಿಶೇಷ ಚೇತನರು, ಮಹಿಳೆಯರು ಮತ್ತು ಮಕ್ಕಳಿಗೆ ರೋಪ್‌ವೇ ವರದಾನವಾಗಲಿದೆ.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications