ಅನ್ನಭಾಗ್ಯ; ಬ್ಯಾಂಕ್‌ ಖಾತೆಗೆ ಡಿಬಿಟಿ ಮೂಲಕ ಹಣ ಪಾವತಿಗೆ ಆದೇಶ

ಬೆಂಗಳೂರು, ಜುಲೈ 02: ಕರ್ನಾಟಕದ ಕಾಂಗ್ರೆಸ್‌ ನೀಡಿದ 5 ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ವಿತರಣೆ ಮಾಡುವುದು ಸಹ ಒಂದು. ಆದರೆ ಈಗ ಅಕ್ಕಿ ಲಭ್ಯವಿಲ್ಲದ ಕಾರಣ ಅಕ್ಕಿ ಸಿಗುವ ತನಕ ಹಣ ನೀಡಲು ಸರ್ಕಾರ ಮುಂದಾಗಿದೆ. ಅರ್ಹ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ಹಣ ಪಾವತಿ ಮಾಡುವ ಕುರಿತು ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ, ಹನುಮಂತರಾಜು. ಎ ಸರ್ಕಾರದ ಅಧೀನ ಕಾರ್ಯದರ್ಶಿ, ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಅಂತ್ಯೋದಯ ಅನ್ನ ಯೋಜನೆ (AAY) ಮತ್ತು ಆದ್ಯತಾ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ DBT ಮೂಲಕ ಹಣವನ್ನು ಪಾವತಿಸುವ ಬಗ್ಗೆ ಎಂಬ ವಿಷಯವನ್ನು ಆದೇಶ ಒಳಗೊಂಡಿದೆ.

money

ಸರ್ಕಾರದ ಆದೇಶದಲ್ಲಿ ರಾಜ್ಯದಲ್ಲಿರುವ ಆದ್ಯತಾ ಮತ್ತು ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಒಟ್ಟು 10 ಕೆಜಿ ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು ತಾತ್ವಿಕ ಅನುಮೋದನೆಯನ್ನು ನೀಡಲಾಗಿದೆ ಎಂದು ಹೇಳಿದೆ.

ಸರ್ಕಾರದ ಅದೇಶದಲ್ಲಿ ರಾಜ್ಯದಲಿ, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗಿರುವ ಅಂತ್ಯೋದಯ ಅನ್ನ ಯೋಜನೆ (AAY), ಆದ್ಯತಾ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬಗಳು ಹಾಗೂ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ ವಿಧಿಸಿರುವ ಆದ್ಯತಾ ಪಡಿತರ ಚೀಟಿಯ ಕುಟಂಬದ ಪ್ರತಿ ಸದಸ್ಯರಿಗೆ ಒಟ್ಟು 10 ಕೆಜಿ ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು ಆದೇಶಿಸಲಾಗಿದೆ ಎಂದು ತಿಳಿಸಲಾಗಿದೆ.

ಎಷ್ಟು ಅಕ್ಕಿಯ ಅಗತ್ಯವಿದೆ?; ಅದರಂತೆ ರಾಜ್ಯ ಸರ್ಕಾರಕ್ಕೆ ಪ್ರತಿ ತಿಂಗಳು ಹೆಚ್ಚುವರಿಯಾಗಿ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿಯ ಅಗತ್ಯವಿದು, ಸದರಿ ಅಕ್ಕಿಯನ್ನು ಮುಕ್ತ ಮಾರುಕಟ್ಟೆ, ಮಾರಾಟ ಯೋಜನೆಯಡಿ ಒದಗಿಸುವಂತೆ ಕಾರ್ಯದರ್ಶಿ, ಆಹಾರ ಮತ್ತು ಸಾರ್ವಜನಿಕ ವಿತರಣೆ ಇಲಾಖೆ ಕೇಂದ್ರ ಸರ್ಕಾರ ಇವರನ್ನು ಕೋರಲಾಗಿದೆ.

ಪ್ರಧಾನ ವ್ಯವಸ್ಥಾಪಕರು, ಪ್ರಾದೇಶಿಕ ಕಛೇರಿ, ಭಾರತ ಆಹಾರ ನಿಗಮ ಬೆಂಗಳೂರು ಇವರ ಪತ್ರದಲ್ಲಿ, ರಾಜ್ಯ ಸರ್ಕಾರವು ಕೋರಿರುವ 2.22 ಲಕ್ಷ ಮೆಟ್ರಿಕ್ ಟನ್‌ ಅಕ್ಕಿಯನ್ನು ಮುಕ್ತ, ಮಾರುಕಟ್ಟೆ, ಮಾರಾಟ ಯೋಜನೆಯಡಿ (ಇ-ಹರಾಜು ರಹಿತವಾಗಿ) ಒದಗಿಸುವುದಾಗಿ ತಿಳಿಸಲಾಗಿದೆ. ಕೇಂದ್ರ ಸರ್ಕಾರದ ಪತ್ರದಲ್ಲಿ, ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ಸರ್ಕಾರಗಳಿಗೆ ಗೋಧಿ ಮತ್ತು ಅಕ್ಕಿ ಮಾರಾಟವನ್ನು ಸ್ವಗತಗೊಳಿಸಿರುವುದಾಗಿ ತಿಳಿಸಲಾಗಿದೆ ಎಂದು ಹೇಳಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಿರ್ಧಾರದಂತೆ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 5 ಕೆಜಿ ಆಹಾರ ಧಾನ್ಯದೊಂದಿಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧಾನ್ಯವನ್ನು ಸೇರಿಸಿ, ಪ್ರತಿ ತಿಂಗಳು ಪ್ರತಿ ಫಲಾನುಭವಿಗೆ ತಲಾ 10 ಕೆಜಿ ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು ಸರ್ಕಾರವು ನಿರ್ಧರಿಸಿದ್ದು, ಈ ಉದ್ಧಶಕ್ಕಾಗಿ ಅಗತ್ಯವಿರುವ ಆಹಾರ ಧಾನ್ಯವನ್ನು ಮುಕ್ತ ಮಾರುಕಟ್ಟೆಯಿಂದ ಖರೀದಿಸಲು ಮುಕ್ತ, ಟೆಂಬರ್‌ ಅನ್ನು ಕರೆಯಲು ತೀರ್ಮಾನಿಸಲಾಗಿದೆ.

ಈ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಬಿಡ್‌ದಾರರು ಆಹಾರ ಧಾನ್ಯವನ್ನು ಸರಬರಾಜು ಮಾಡುವವರೆಗೆ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 15 ಕೆಜಿ ಆಹಾರ ಧಾನ್ಯದ ಬದಲಾಗಿ ಪ್ರತಿ ಕೆಜಿಗೆ ರೂ. 34ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣವನ್ನು ವರ್ಗಾಯಿಸಲು ತೀರ್ಮಾನಿಸಲಾಗಿದೆ. ಅದರಂತೆ ಈ ಆದೇಶ ಹೊರಡಿಸಲಾಗಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 15 ಕೆಜಿ ಆಹಾರ ಧಾನ್ಯದೊಂದಿಗೆ, ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ 15 ಕೆಜಿ ಆಹಾರ ಧಾನ್ಯವನ್ನು ಸೇರಿಸಿ ಪ್ರತಿ ತಿಂಗಳು ಪ್ರತಿ ಫಲಾನುಭವಿಗೆ ತಲಾ 10 ಕೆಜಿ ಆಹಾರ ಧಾನ್ಯವನ್ನು, ಉಚಿತವಾಗಿ ವಿತರಿಸಲು ಸರ್ಕಾರವು ನಿರ್ಧರಿಸಿದೆ.

ಈ ಉದ್ದೇಶಕ್ಕಾಗಿ ಅಗತ್ಯವಿರುವ ಆಹಾರ ಧಾನ್ಯವನ್ನು ಮುಕ್ತ, ಮಾರುಕಟ್ಟೆಯಿಂದ ಖರೀದಿಸಲು ಮುಕ್ತ, ಟೆಂಡರ್‌ ಅನ್ನು ಕರೆಯಲು ತೀರ್ಮಾನಿಸಲಾಗಿದೆ, ಈ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಬಿಡ್‌ದಾರರು ಆಹಾರ ಧಾನ್ಯವನ್ನು ಸರಬರಾಜು ಮಾಡುವವರೆಗೆ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪರಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 5 ಕೆಜಿ ಆಹಾರ ಧಾನ್ಯದ ಬದಲಾಗಿ ಪ್ರತಿ ಕೆಜಿಗೆ ರೂ.31 ರಂತೆ ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ DBT ಮೂಲಕ ಹಣವನ್ನು ವರ್ಗಾಯಿಸಲು ಆದೇಶಿಸಲಾಗಿದೆ. ಸದರಿ ಆದೇಶವನ್ನು ಸಚಿವ ಸಂಪುಟ ಪ್ರಕರಣ ಸಂಖ್ಯೆ ದಿನಾಂಕ 28/06/2023ರಲ್ಲಿ ನಿರ್ಣಯದಂತೆ ಹೊರಡಿಸಲಾಗಿದೆ ಎಂದು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+