ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅನ್ನಭಾಗ್ಯ ಯೋಜನೆ : ಮುಖ್ಯಮಂತ್ರಿಗಳಿಗೆ ಜಮೀರ್ ಪತ್ರ

By Gururaj
|
Google Oneindia Kannada News

Recommended Video

ಎಚ್ ಡಿ ಕುಮಾರಸ್ವಾಮಿಗೆ ಪತ್ರ ಬರೆದ ಜಮೀರ್ ಅಹ್ಮದ್ ಖಾನ್ | Oneindia kannada

ಬೆಂಗಳೂರು, ಜುಲೈ 11 : ಅನ್ನಭಾಗ್ಯ ಯೋಜನೆಯಲ್ಲಿ ನೀಡುವ ಅಕ್ಕಿಯನ್ನು ಕಡಿತಗೊಳಿಸಿರುವುದಕ್ಕೆ ವಿರೋಧ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಖಾನ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಈ ಕುರಿತು ಪತ್ರ ಬರೆದಿದ್ದಾರೆ.

ಬುಧವಾರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹಮದ್ ಖಾನ್ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ. ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ನೀಡುವ ಘೋಷಣೆಯನ್ನು ಪುನಃ ಪರಿಶೀಲಿಸಿ ಎಂದು ಮನವಿ ಮಾಡಿದ್ದಾರೆ.

ಕರ್ನಾಟಕ ಬಜೆಟ್ 2018 : ಕುಮಾರಸ್ವಾಮಿ ಆಯವ್ಯಯದ Highlightsಕರ್ನಾಟಕ ಬಜೆಟ್ 2018 : ಕುಮಾರಸ್ವಾಮಿ ಆಯವ್ಯಯದ Highlights

ಜುಲೈ 5ರಂದು ಎಚ್.ಡಿ.ಕುಮಾರಸ್ವಾಮಿ ಅವರು 2018-19ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದರು. ಅನ್ನಭಾಗ್ಯ ಯೋಜನೆಯಡಿ ನೀಡುವ 7 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಸಲಾಗುತ್ತದೆ ಎಂದು ಘೋಷಣೆ ಮಾಡಿದ್ದರು.

ಅನ್ನಭಾಗ್ಯ ಯೋಜನೆಯಲ್ಲಿ ಕೆಲವು ಬದಲಾವಣೆಅನ್ನಭಾಗ್ಯ ಯೋಜನೆಯಲ್ಲಿ ಕೆಲವು ಬದಲಾವಣೆ

Anna Bhagya scheme Zameer Ahmed Khan letter to Chief Minister

ಅನ್ನಭಾಗ್ಯ ಯೋಜನೆಯಡಿ ನೀಡುವ ಅಕ್ಕಿಯನ್ನು ಕಡಿತ ಮಾಡಿದ್ದಕ್ಕೆ ಹಲವು ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಸದನದಲ್ಲಿಯೂ ಈ ಬಗ್ಗೆ ಚರ್ಚೆ ನಡೆದಿತ್ತು. ಈಗ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿಗಳಿಗೆ ಈ ಕುರಿತು ಪತ್ರ ಬರೆದಿದ್ದಾರೆ.

ಅನ್ನಭಾಗ್ಯ ಅಕ್ಕಿ ಕಡಿತಕ್ಕೆ ಸಂಸದ ಡಿ.ಕೆ.ಸುರೇಶ್ ಅಸಮಾಧಾನಅನ್ನಭಾಗ್ಯ ಅಕ್ಕಿ ಕಡಿತಕ್ಕೆ ಸಂಸದ ಡಿ.ಕೆ.ಸುರೇಶ್ ಅಸಮಾಧಾನ

ಬಜೆಟ್‌ನಲ್ಲಿ ಮಾಡಿದ ಘೋಷಣೆ ಏನು? :

* ಅನ್ನಭಾಗ್ಯ ಯೋಜನೆಯ ಮೌಲ್ಯವರ್ಧನೆ ಮಾಡುವುದಾಗಿ ಕುಮಾರಸ್ವಾಮಿ ಘೋಷಣೆ ಮಾಡಿದ್ದರು.

* ಪ್ರತಿ ಫಲಾನುಭವಿಗೆ 5 ಕೆ.ಜಿ ಉಚಿತ ಅಕ್ಕಿ ನೀಡಲಾಗುತ್ತದೆ ಎಂದು ಹೇಳಿದ್ದರು

* ರಿಯಾಯಿತಿ ದರದಲ್ಲಿ ಅರ್ಧ ಕೆ.ಜಿ. ತೊಗರಿಬೇಳೆ ಹಾಗೂ ಪ್ರತಿ ಬಿಪಿಎಲ್ ಪಡಿತರ ಚೀಟಿಗೆ 1 ಕೆ.ಜಿ. ಪಾಮ್ ಎಣ್ಣೆ, 1 ಕೆ.ಜಿ. ಅಯೋಡಿನ್ ಮತ್ತು ಕಬ್ಬಿಣಾಂಶಯುಕ್ತ ಉಪ್ಪು ಹಾಗೂ 1 ಕೆ.ಜಿ. ಸಕ್ಕರೆ ವಿತರಣೆ ಮಾಡುವುದಾಗಿ ಘೋಷಿಸಿದ್ದರು.

English summary
In his letter to Chief Minister H.D.Kumaraswamy Karnataka food and civil supplies department minister Zameer Ahmed Khan requested that consider to provide 7 kg of rice under Anna Bhagya scheme. H.D.Kumaraswamy in his budget announced that quantity of rice distributed in Anna Bhagya scheme has been reduced from 7 kg to 5 kg.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X