One Nation One Election: 'ಒಂದು ದೇಶ, ಒಂದು ಚುನಾವಣೆ'ಯ ಮಹತ್ವ ತಿಳಿಸಿದ ಅಣ್ಣಾಮಲೈ
ಬೆಂಗಳೂರು, ಮಾರ್ಚ್ 14: ಒಂದು ದೇಶ ಒಂದೇ ಚುನಾವಣೆಯಿಂದ ಪ್ರಾದೇಶಿಕ ಪಕ್ಷವು ರಾಷ್ಟ್ರಹಿತದೊಂದಿಗೆ ಹಾಗೂ ರಾಷ್ಟ್ರೀಯ ಪಕ್ಷವು ಪ್ರಾದೇಶಿಕ ಹಿತೈಷಿಯಾಗಿ ಚಿಂತಿಸುವಂತೆ ಆಗಲಿದೆ ಎಂದು ತುಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತಿಳಿಸಿದರು. ಪ್ರಜಾಸತ್ತಾತ್ಮಕ ವ್ಯವಸ್ಥೆ ಬಲಪಡಿಸುವ ಮತದಾನದಲ್ಲಿ ಪ್ರತಿಯೊಬ್ಬರೂ ಭಾಗವಹಿಸುವಂತಾಗಬೇಕು ಎಂದು ಆಶಿಸಿದರು.
ಯುವಜನರು ಪ್ರಜಾಸತ್ತಾತ್ಮಕ ವ್ಯವಸ್ಥೆ ಮತ್ತು ಮತದಾನದಲ್ಲಿ ಹೆಚ್ಚು ಹೆಚ್ಚಾಗಿ ಪಾಲ್ಗೊಳ್ಳಬೇಕಿದೆ ಎಂದು ಅವರು, ಎಲ್ಲರೂ ಸಮಾನರು, ಪುರುಷ- ಮಹಿಳೆ ಸೇರಿ ಎಲ್ಲರಿಗೂ ಒಂದು ಮತದಾನದ ಹಕ್ಕಿದೆ ಎಂಬುದನ್ನು ಸ್ವಾತಂತ್ರ್ಯ ಪಡೆದ ಸಂದರ್ಭದಲ್ಲೇ ಜಾರಿಗೊಳಿಸಿದ ದೇಶ ನಮ್ಮದು. 1951-52ರಲ್ಲಿ ಮೊದಲ ಚುನಾವಣೆ ನಡೆದಿತ್ತು. 7 ಹಂತಗಳಲ್ಲಿ ಅದು ನಡೆಯಿತು. 57ರಲ್ಲಿ 2ನೇ ಚುನಾವಣೆ ನಡೆಸಲಾಯಿತು. 1952, 57, 62, 67ರಲ್ಲಿ ರಾಜ್ಯ ವಿಧಾನಸಭೆಗಳು- ಸಂಸತ್ತಿಗೆ ಏಕಕಾಲದಲ್ಲಿ ಚುನಾವಣೆ ನಡೆದಿತ್ತು ಎಂದು ನೆನಪಿಸಿದರು.

1970ರಲ್ಲಿ ಲೋಕಸಭೆಯನ್ನು ಒಂದು ವರ್ಷ ಮೊದಲೇ ವಿಸರ್ಜಿಸಲಾಯಿತು. ಕಮ್ಯುನಿಸ್ಟ್ ಪಕ್ಷದ ಆಡಳಿತ ಇದ್ದ ಕೇರಳ ರಾಜ್ಯದ ಆಡಳಿತದ ಮೇಲೆ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು. ಸಂವಿಧಾನಕ್ಕೆ ವಿರುದ್ಧವಾಗಿ ಆ ರಾಜ್ಯ ಸರಕಾರವನ್ನು ವಜಾ ಮಾಡಲಾಗಿತ್ತು. ತುರ್ತು ಪರಿಸ್ಥಿತಿಯಲ್ಲಿ ಕಾಂಗ್ರೆಸ್ಸೇತರ ರಾಜ್ಯಗಳ ಸರಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಿದ್ದರು. ಹಿಂದೆ ಕೇಂದ್ರದಲ್ಲಿ ಆಡಳಿತದಲ್ಲಿದ್ದ ಜನತಾ ಪಕ್ಷವೂ ಇದೇ ರೀತಿ ಮಾಡಿತ್ತು ಎಂದರು.
28 ರಾಜ್ಯಗಳು ಇರುವ ಭಾರತದಲ್ಲಿ ಚುನಾವಣೆ ಎಂಬುದು ಈಗ ನಿರಂತರ ಪ್ರಕ್ರಿಯೆ ಆಗಿದೆ. 45 ದಿನಗಳ ನೀತಿಸಂಹಿತೆ ಪ್ರಕ್ರಿಯೆ ಅಭಿವೃದ್ಧಿ ಪ್ರಕ್ರಿಯೆಗೆ ಅಡ್ಡಿಯಾಗುತ್ತದೆ. 6 ತಿಂಗಳ ಕಾಲ ಮತದಾರರ ಪಟ್ಟಿ ಸಿದ್ಧಪಡಿಸುವಿಕೆ ನಡೆಯುತ್ತದೆ. ಒಂದು ಚುನಾವಣೆ ಸಂಬಂಧ ಒಂದು ರಾಜ್ಯ ಕನಿಷ್ಠ ಏಳೂವರೆ ತಿಂಗಳನ್ನು ಕಳಕೊಳ್ಳುತ್ತದೆ. ಶಿಕ್ಷಕರು, ಸಿಆರ್‍ಪಿಎಫ್ ಸೇರಿ ಆಡಳಿತಯಂತ್ರವು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕಾಗುತ್ತದೆ. ಒಂದೇ ಮತದಾರರ ಪಟ್ಟಿ ಇದ್ದು, ಸಂಸದ, ಶಾಸಕರ ಆಯ್ಕೆಗೆ ತಲಾ ಒಂದೊಂದು ಬಟನ್ ಒತ್ತುವ ಪ್ರಕ್ರಿಯೆಯೇ ಒಂದು ದೇಶ ಒಂದು ಮತದಾನದ ಹಿಂದಿದೆ ಎಂದು ತಿಳಿಸಿದರು. ನೀತಿ ಆಯೋಗ, ಕಾನೂನು ಆಯೋಗವೂ ಒಂದೇ ಚುನಾವಣೆಯ ಪರವಾಗಿದೆ; ಇದಕ್ಕೆ ಈಗ ಸಕಾಲ ಎಂದೇ ತಿಳಿಸಿದೆ ಎಂದು ಹೇಳಿದರು.
2019ರಲ್ಲಿ 16 ಪಕ್ಷಗಳು ಒಂದೇ ಚುನಾವಣೆಯನ್ನು ಬೆಂಬಲಿಸಿದ್ದವು. ಸಿಪಿಎಂ ಸೇರಿ 3 ಪಕ್ಷಗಳು ಇದನ್ನು ವಿರೋಧಿಸಿದ್ದವು. 1932ರಿಂದಲೇ ಒಂದು ದೇಶ ಒಂದು ಚುನಾವಣೆಯ ವಿಚಾರ ಚರ್ಚೆಗೆ ಒಳಪಟ್ಟಿದೆ ಎಂದು ತಿಳಿಸಿದರು. ಈ ಪದ್ಧತಿಯಿಂದ ಮತದಾರರು ಉದಾಸೀನ ಪ್ರವೃತ್ತಿಯಿಂದ ಮತದಾನ ಮಾಡದೆ ಉಳಿಯುವುದನ್ನು ತಪ್ಪಿಸಲು ಸಾಧ್ಯ ಎಂದು ಆಶಿಸಿದರು. ಇದು ಯುವಜ£ರು ಮತದಾನದಲ್ಲಿ ಉತ್ಸಾಹದಿಂದ ಭಾಗವಹಿಸುವಿಕೆಗೆ ಪೂರಕ ಎಂದರು.
ಒಂದೇ ಚುನಾವಣೆಯಿಂದ ಉಳಿತಾಯದ ಮೂಲಕ ಜಿಡಿಪಿಗೆ 4.5 ಲಕ್ಷ ಕೋಟಿ ಕೊಡುಗೆ ಲಭಿಸಬಲ್ಲದು. ಸಂಸತ್ ಚುನಾವಣೆಗೆ ಅಭ್ಯರ್ಥಿಗಳು 1.74 ಲಕ್ಷ ಕೋಟಿ ಖರ್ಚು ಮಾಡಿದ್ದಾರೆ. ಹಿಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಸಮಿತಿಯು ಒಂದೇ ಚುನಾವಣೆ ಸಂಬಂಧ ವರದಿ ಕೊಟ್ಟಿದೆ. ಅದನ್ನು ಸಂಸತ್ತಿನಲ್ಲಿ ಮಂಡಿಸಲಾಗಿದೆ. ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಇದರ ಸಂಬಂಧ ಮಾಹಿತಿ ಕೊಡುತ್ತಿದೆ ಎಂದು ತಿಳಿಸಿದರು. ಚುನಾವಣೆಗೆ ಕಡಿಮೆ ಖರ್ಚು, ಅಭಿವೃದ್ಧಿಗೆ ಹೆಚ್ಚು ಹಣ ಸಿಗಲಿದೆ ಎಂದು ತಿಳಿಸಿದರು.
ಒಂದೇ ಚುನಾವಣೆ ಎಂಬುದು ಸಾರ್ವಜನಿಕ ಹಿತಾಸಕ್ತಿಯ ಕ್ರಮವೇ ಹೊರತು ಇದನ್ನು ಹೇರುತ್ತಿಲ್ಲ; ಇದೊಂದು ಪ್ರಜಾಸತ್ತಾತ್ಮಕ ಕ್ರಮ ಎಂದು ಅವರು ಸ್ಪಷ್ಟಪಡಿಸಿದರು. ಎಲ್ಲವೂ ನಿರೀಕ್ಷೆಯಂತೆ ನಡೆದರೆ 2034ರಲ್ಲಿ ಒಂದೇ ಚುನಾವಣೆಯು ಜಾರಿ ಆಗಲಿದೆ. ಅತ್ಯಂತ ದೊಡ್ಡ ಪಕ್ಷವಾಗಿದ್ದರೂ, ಬಿಜೆಪಿ ಬಗ್ಗೆ ದೇಶಾದ್ಯಂತ ಜನರ ಒಲವಿದ್ದರೂ ಚುನಾವಣಾ ಕ್ಷೇತ್ರದಲ್ಲಿ ಸುಧಾರಣೆ ತರಲು ನಾವು ಮುಂದಾಗಿದ್ದೇವೆ. ದೇಶ ಮೊದಲು ಎಂಬ ಚಿಂತನೆಯೇ ಇದಕ್ಕೆ ಕಾರಣ ಎಂದು ಅವರು ಹೇಳಿದರು. 4.5 ಲಕ್ಷ ಕೋಟಿ ಹೆಚ್ಚುವರಿ ಜಿಡಿಪಿ, ಹೆಚ್ಚು ಯುವಜನರ ಭಾಗೀದಾರಿಕೆ, ಪ್ರಬುದ್ಧ- ಸುಸ್ಥಿರ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಚಿಂತನೆಯೊಂದಿಗೆ ನಾವು ಒಂದೇ ಚುನಾವಣೆ ಕುರಿತು ಆಸಕ್ತಿ ತೋರಿದ್ದೇವೆ ಎಂದು ವಿಶ್ಲೇಷಿಸಿದರು.
ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ, ಒಂದು ದೇಶ ಒಂದು ಚುನಾವಣೆ ಜಾಗೃತಿ ಸಮಿತಿ ರಾಜ್ಯ ಸಂಚಾಲಕ ನವೀನ್ ಶಿವಪ್ರಕಾಶ್, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ಒಂದು ದೇಶ ಒಂದು ಚುನಾವಣೆ ಜಾಗೃತಿ ಸಮಿತಿ ರಾಜ್ಯ ಸಹ ಸಂಚಾಲಕ ಅಶ್ವತ್ಥನಾರಾಯಣ್, ಜೈನ್ ವಿಶ್ವವಿದ್ಯಾಲಯದ ಉಪಾಧ್ಯಕ್ಷ ರವೀಂದ್ರ ಭಂಡಾರಿ, ಜಂಟಿ ಕಾರ್ಯದರ್ಶಿ ಸಂತೋಷ್, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಮತ್ತು ಜೈನ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ಜಿತೇಂದ್ರ ಮಿಶ್ರ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications