Get Updates
Get notified of breaking news, exclusive insights, and must-see stories!

K. Annamalai: ಲೋಕಸಭಾ ಅಖಾಡಕ್ಕೆ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ? ಕರ್ನಾಟಕದಿಂದ ಸ್ಪರ್ಧೆ?

2024ರ ಲೋಕಸಭೆ ಚುನಾವಣೆ ಅಖಾಡ ರಂಗೇರಿದೆ. ಅದರಲ್ಲೂ, ಈ ಬಾರಿ ಲೋಕಸಭೆಗೆ ಬಿಜೆಪಿ & ಕಾಂಗ್ರೆಸ್ ನಡುವೆ ಭಾರಿ ಪೈಪೋಟಿ ನಿರೀಕ್ಷೆ ಮಾಡಲಾಗುತ್ತಿದೆ. ಕೆಲ ತಿಂಗಳಿಂದ, ಎರಡೂ ಪಕ್ಷಗಳ ನಾಯಕರ ನಡುವೆ ಮಾತಿನ ಮಹಾಯುದ್ಧ ಕೂಡ ನಡೆಯುತ್ತಿದೆ. ಹೀಗೆ ಫೈಟಿಂಗ್ ಜೋರಾದ ಸಮಯಕ್ಕೇ, ಬಿಜೆಪಿ ವರಿಷ್ಠರ ಪಡೆ ರಣತಂತ್ರಗಳ ಮೇಲೆ ರಣತಂತ್ರ ಹೆಣೆಯುತ್ತಿದ್ದಾರೆ. ಈಗ ಕೆ. ಅಣ್ಣಾಮಲೈ ಅವರನ್ನು ಬಿಜೆಪಿ ವರಿಷ್ಠರು, ಕರ್ನಾಟಕದಿಂದ ಚುನಾವಣೆ ಅಖಾಡಕ್ಕೆ ಇಳಿಸುತ್ತಾರಾ? ಮುಂದೆ ಓದಿ.

ಅಣ್ಣಾಮಲೈ ಅಂದ್ರೆ ತಮಿಳುನಾಡಿನ ಮೂಲೆ ಮೂಲೆಯಲ್ಲೂ ಹವಾ ಇದೆ. ಇನ್ನು ಕರ್ನಾಟಕ ರಾಜ್ಯದಲ್ಲೂ ಅಣ್ಣಾಮಲೈ ಅವರು ದೊಡ್ಡ ಹೆಸರು ಸಂಪಾದಿಸಿದ್ದಾರೆ. ಯಾಕಂದ್ರೆ ಇದೇ ಅಣ್ಣಾಮಲೈ ಕರ್ನಾಟಕದಲ್ಲಿ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡಿದ್ರು. ಚಿಕ್ಕಮಗಳೂರು ಭಾಗದಲ್ಲಿ ಇವರ ಹೆಸರಿನ ಬದಲು 'ಸಿಂಗಂ ಅಣ್ಣಾಮಲೈ' ಅಂತಾನೆ ಜನರು ಕರೆಯುತ್ತಿದ್ದರು. ಈಗ ಇದೆ ಅಣ್ಣಾಮಲೈ ಅವರು ತಮಿಳುನಾಡು ರಾಜಕೀಯದಲ್ಲಿ ಸಂಚಲನ ಸೃಷ್ಟಿಸುತ್ತಿದ್ದಾರೆ. ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುತ್ತಾರೆ ಎಂಬ ಬಗ್ಗೆಯೂ ದೊಡ್ಡ ಮಟ್ಟದಲ್ಲಿ ಚರ್ಚೆ ಶುರುವಾಗಿದೆ.

Annamalai May Be Contest For Lok Sabha Election 2024 From The Karnataka

ಕರ್ನಾಟಕಕ್ಕೆ ಅಣ್ಣಾಮಲೈ ಎಂಟ್ರಿ?

ಅಣ್ಣಾಮಲೈ ಅವರ ಹೆಸರು ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ದೊಡ್ಡ ಮಟ್ಟಿಗೆ ಸದ್ದು ಮಾಡುತ್ತಿದೆ. ಹೀಗಾಗಿಯೇ ಈ ಬಾರಿ ಕೆ. ಅಣ್ಣಾಮಲೈ ಅವರನ್ನು ಕರ್ನಾಟಕದ ಕರಾವಳಿ ಭಾಗದ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಸಲು ಸಿದ್ಧತೆ ಸಾಗಿವೆ ಎಂಬ ಮಾತು ಹರಿದಾಡಿದೆ. ಇನ್ನೊಂದು ಕಡೆ ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧ ಇದೀಗ ದಕ್ಷಿಣ ಕನ್ನಡದಲ್ಲಿ ಅಸಮಾಧಾನ ಇದೆ ಎಂಬ ಆರೋಪ ಕೇಳಿಬರುತ್ತಿದೆ. ಹೀಗಾಗಿಯೇ ಕಟೀಲ್ ಬದಲು ಈಗ ಅಣ್ಣಾಮಲೈ ಅವರನ್ನ ದಕ್ಷಿಣ ಕನ್ನಡದಿಂದ ಲೋಕಸಭೆಗೆ ಇಳಿಸಲು ಚರ್ಚೆ ನಡೆದಿಯಂತೆ. ಹಾಗಾದರೆ ಇದರ ಹಿಂದಿನ ತಂತ್ರ ಏನು?

ಬಿ.ಎಲ್. ಸಂತೋಷ್ ಅವರ ಆಪ್ತರು

ಕೆ. ಅಣ್ಣಾಮಲೈ ಅವರನ್ನು ಕಂಡರೆ ಪ್ರಧಾನಿ ಮೋದಿ ಅವರಿಂದ ಹಿಡಿದು, ಆರ್‌ಎಸ್‌ಎಸ್ ಮುಖಂಡರ ತನಕ ಪ್ರತಿಯೊಬ್ಬರಿಗೂ ಭಾರಿ ಗೌರವ. ಬಿಜೆಪಿಗೆ ಬಂದು ಕೆಲವೇ ವರ್ಷದಲ್ಲಿ ಅಣ್ಣಾಮಲೈ ಅವರು ದೊಡ್ಡ ಹೆಸರು ಸಂಪಾದಿಸಿದ್ದಾರೆ. ಅದ್ರಲ್ಲೂ ಕೆಲವು ದಿನಗಳ ಹಿಂದೆ ಅಷ್ಟೇ ಪ್ರಧಾನಿ ಮೋದಿ ಅವರು ಅಣ್ಣಾಮಲೈ ಅವರನ್ನು ಹೊಗಳಿದ್ದರು. ಇದರ ಜೊತೆಗೆ ಬಿಜೆಪಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಆಗಿರುವ ಬಿ.ಎಲ್. ಸಂತೋಷ್‌ರ, ಹೊಸ ರಣತಂತ್ರದ ಪ್ರಕಾರ ಅಣ್ಣಾಮಲೈಗೆ ದಕ್ಷಿಣ ಕನ್ನಡ ಲೋಕಸಭೆ ಟಿಕೆಟ್ ಸಿಗುತ್ತದೆ ಎನ್ನಲಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ.

Annamalai May Be Contest For Lok Sabha Election 2024 From The Karnataka

ಒಟ್ನಲ್ಲಿ ಕಣ್ಣು ಮುಚ್ಚಿ ಕಣ್ಣು ಬಿಡುವುದರ ಒಳಗೆ 2024ರ ಲೋಕಸಭೆ ಚುನಾವಣೆಯು ಬಂದೇ ಬಿಡುತ್ತೆ. ಯಾಕಂದ್ರೆ 2024ರ ಲೋಕಸಭೆ ಚುನಾವಣೆಗೆ ಕಡಿಮೆ ಸಮಯ ಇದ್ದು. ಹೀಗಾಗಿಯೇ ದೇಶದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತೀವ್ರ ಪೈಪೋಟಿ ಶುರುಮಾಡಿವೆ. ಬಿಜೆಪಿಗೆ ಈ ಗೆಲುವು ದೊಡ್ಡ ಬಲ ತಂದುಕೊಡುವ ನಿರೀಕ್ಷೆ ಇದ್ದು, ಹೀಗಾಗಿ ಕಮಲ ಪಡೆ ಅಭ್ಯರ್ಥಿ ಆಯ್ಕೆಯಲ್ಲಿ ಭಾರಿ ಮುನ್ನೆಚ್ಚರಿಕೆ ವಹಿಸಿದೆ.

ಕರಾವಳಿ ಭಾಗದಲ್ಲಿ ಬಿಜೆಪಿ ಪ್ರಬಲ!

ಲೋಕಸಭೆ ಚುನಾವಣೆ ಇನ್ನೇನು ಹತ್ತಿರ ಬಂದಿದೆ, ಹೀಗಾಗಿ ಕುತೂಹಲ ಕೂಡ ಕೆರಳಿದ್ದು. ಯಾರಿಗೆ ಗೆಲುವು? ಎಂಬ ಪ್ರಶ್ನೆಯೂ ಕಾಡುತ್ತಿದೆ. ಮತ್ತೊಂದು ಕಡೆ ಕಾಂಗ್ರೆಸ್ ನಾಯಕರು ಕೂಡ ಗೆಲುವಿಗಾಗಿ ತಂತ್ರ ಹೆಣೆಯುತ್ತಿದ್ದಾರೆ. ಹೀಗಾಗಿಯೇ ಬಿಜೆಪಿ ವರಿಷ್ಠರು ಈಗ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಹೊಸ ಹೊಸ ತಂತ್ರ ಎಣೆಯುತ್ತಿದ್ದಾರೆ. ಕ್ರಾಂತಿಕಾರಿ ನಿರ್ಧಾರಗಳನ್ನು ಕೈಗೊಂಡು, ಕರಾವಳಿ ಭಾಗದಲ್ಲಿ ದೊಡ್ಡ ಮಟ್ಟದ ವಿಜಯ ಪತಾಕೆ ಹಾರಿಸಲು ಸಿದ್ಧತೆಯ ನಡೆಸಿದ್ದಾರೆ. ಈ ಪೈಕಿ ಕರ್ನಾಟಕದ ಮಾಜಿ ಪೊಲೀಸ್ ಅಧಿಕಾರಿಯಾದ ಕೆ. ಅಣ್ಣಾಮಲೈ ಅವರನ್ನು ಕರ್ನಾಟಕದ ಕರಾವಳಿ ಭಾಗದಿಂದ ಚುನಾವಣೆಗೆ ನಿಲ್ಲಿಸುವ ಮಾತುಕತೆ ಕೂಡ ನಡೆದಿದೆ ಎನ್ನಲಾಗುತ್ತಿದೆ. ಆದರೆ ಅಧಿಕೃತ ಮಾಹಿತಿ ಇನ್ನೂ ಹೊರಬಿದ್ದಿಲ್ಲ. ಹೀಗಾಗಿಯೇ ಕುತೂಹಲ ದುಪ್ಪಟ್ಟಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+