ಬ್ಲಾಕ್ ಫಂಗಸ್‌ನಿಂದ ಸಾವನ್ನಪ್ಪಿದವರಿಗೆ ಪರಿಹಾರ ನೀಡಿ

ಬೆಂಗಳೂರು, ಮೇ 17; "ಬ್ಲಾಕ್ ಫಂಗಸ್ಸಿಗೆ ತುತ್ತಾಗಿ ಜೀವ ಹಾಗೂ ಕಣ್ಣುಗಳನ್ನು ಕಳೆದುಕೊಂಡವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಪತ್ರವನ್ನು ಬರೆದಿದ್ದಾರೆ.

Recommended Video

      Black Fungus ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಿ | Oneindia Kannada

      ಸೋಮವಾರ ಸಿದ್ದರಾಮಯ್ಯ ಈ ಕುರಿತು ಪತ್ರವನ್ನು ಬರೆದಿದ್ದು, "ರಾಜ್ಯದ ಜನ ಕೊರೊನಾ ಸೋಂಕಿನಿಂದ ಸುಧಾರಿಸಿಕೊಳ್ಳುವ ಪ್ರಯತ್ನದಲ್ಲಿರುವಾಗಲೇ ಬ್ಲಾಕ್ ಫಂಗಸ್‌ಗೆ ಇನ್ನಷ್ಟು ಜೀವಗಳು ಬಲಿಯಾಗುತ್ತಿವೆ" ಎಂದು ಪತ್ರದಲ್ಲಿ ವಿಷಾದವನ್ನು ವ್ಯಕ್ತಪಡಿಸಿದ್ದಾರೆ.

      "ಈ ರೋಗಕ್ಕೆ ತುತ್ತಾದವರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಕನಿಷ್ಠ 40-50 ಸಾವಿರ ಶುಲ್ಕ ವಿಧಿಸುವ ಮೂಲಕ ಬಡ ಜನರು ಆಸ್ಪತ್ರೆಯತ್ತ ಸುಳಿಯದಂತೆ ಮಾಡಿವೆ. ಇಂಥ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರ ಜನರ ನೆರವಿಗೆ ಧಾವಿಸಬೇಕಾಗುತ್ತದೆ" ಎಂದು ಸಿದ್ದರಾಮಯ್ಯ ಪತ್ರದಲ್ಲಿ ಆಗ್ರಹಿಸಿದ್ದಾರೆ.

      Announce Compensation Who Died Due To Black Fungus

      "ಬ್ಲಾಕ್ ಫಂಗಸ್ಸಿಗೆ ತುತ್ತಾಗಿ ಜೀವ ಹಾಗೂ ಕಣ್ಣುಗಳನ್ನು ಕಳೆದುಕೊಂಡವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ಈ ರೋಗಕ್ಕೆ ಇನ್ನಷ್ಟು ಅಮೂಲ್ಯ ಜೀವಗಳು ಬಲಿಯಾಗುವ ಮುನ್ನ ಸರ್ಕಾರ ಉಚಿತ ಚಿಕಿತ್ಸೆ ನೀಡಲು ಕ್ರಮ‌ಕೈಗೊಳ್ಳಬೇಕು" ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರನ್ನು ಒತ್ತಾಯಿಸಿದ್ದಾರೆ.

      ಎಸ್‌ಓಪಿ ಹೊರಡಿಸಿ; "ಚಿಕಿತ್ಸೆ ನೀಡುವ ಕುರಿತು ಮಾತ್ರವಲ್ಲ, ರೋಗ ಹರಡುತ್ತಿರುವ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ. ರೋಗ ಯಾರಲ್ಲಿ ಹರಡುತ್ತಿದೆ?, ಏಕೆ ಹರಡುತ್ತಿದೆ?, ರೋಗ ಲಕ್ಷಣಗಳು ಏನು?, ರೋಗ ಬಂದರೆ ಹೇಗೆ ಚಿಕಿತ್ಸೆ ಪಡೆಯಬೇಕು?, ರೋಗ ಬರದಂತೆ ತಡೆಯಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು? ಮುಂತಾದ ವಿಚಾರಗಳ ಬಗ್ಗೆ ಎಸ್‌ಓಪಿ ಹೊರಡಿಸಬೇಕು" ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

      "ಸರ್ಕಾರ ತಡಮಾಡದೆ ಸೂಕ್ತ ಅಧಿಸೂಚನೆಗಳನ್ನು ಹೊರಡಿಸಿ ಉಚಿತ ಚಿಕಿತ್ಸೆ ನೀಡಲು ಪ್ರಾರಂಭಿಸಬೇಕು. ಈಗಾಗಲೇ ಬಹಳಷ್ಟು ಜನರು ಬ್ಲಾಕ್ ಫಂಗಸ್ಸಿಗೆ ತುತ್ತಾಗಿ ಜೀವ ಕಳೆದುಕೊಂಡಿದ್ದಾರೆ. ಕಣ್ಣುಗಳನ್ನು ಕಳೆದುಕೊಂಡಿದ್ದಾರೆ. ಅಂಥವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು" ಎಂದು ಸಿದ್ದರಾಮಯ್ಯ ಪತ್ರದಲ್ಲಿ ಹೇಳಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+