ಹಸುವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ : ಪೇಜಾವರ ಶ್ರೀ
ಹಾಸನ, ಅ.30 : 'ಹುಲಿ ರಾಷ್ಟ್ರೀಯ ಪ್ರಾಣಿಯಾಗಿರುವುದರಿಂದ ದೇಶದಲ್ಲಿ ಅಶಾಂತಿ ಹೆಚ್ಚುತ್ತಿದೆ. ಆದ್ದರಿಂದ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕೆಂದು' ಪೇಜಾವರ ಶ್ರೀಗಳು ಕರೆ ನೀಡಿದ್ದಾರೆ.
ಚನ್ನರಾಯಪಟ್ಟಣದಲ್ಲಿ ಗುರುವಾರ ಮಾತನಾಡಿದ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥಶ್ರೀಪಾದರು, ಗೋವು ರಾಷ್ಟ್ರೀಯ ಪಾಣಿಯಾಗಬೇಕೆಂದು ಹೇಳಿದರು. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದರು. [ಕುರಿಯನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ]

ಪ್ರಸ್ತುತ ಹುಲಿ ರಾಷ್ಟ್ರೀಯ ಪ್ರಾಣಿಯಾಗಿದೆ. ಆದ್ದರಿಂದ ದೇಶದಲ್ಲಿ ಅಶಾಂತಿ, ಕೋಮುಗಲಭೆ, ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚುತ್ತಿವೆ ಎಂದು ಶ್ರೀಗಳು ಆತಂಕ ವ್ಯಕ್ತಪಡಿಸಿದರು. ಆದ್ದರಿಂದ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕೆಂದು ಒತ್ತಾಯಿಸಿದರು. [ಹುಲಿ ದತ್ತುಪಡೆದ ಬಿಎಸ್ ಯಡಿಯೂರಪ್ಪ]
ಕುರಿಯನ್ನು ರಾಷ್ಟ್ರೀಯ ಪ್ರಾಣಿಯಾಗಿಸಿ : 2013ರಲ್ಲಿ ಕುರಿಯನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಕನಕಗುರು ಪೀಠದ ಸ್ವಾಮೀಜಿ ನಿರಂಜನಾನಂದ ಪುರಿಶ್ರೀಗಳು ಆಗ್ರಹಿಸಿದ್ದಾರೆ. ಕುರಿ ಸರ್ವಶ್ರೇಷ್ಠವಾದ ಪ್ರಾಣಿ, ಗೋವಿಗಿಂತಲೂ ಶ್ರೇಷ್ಠವಾಗಿದೆ. ಆದ್ದರಿಂದ ಅದನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕೆಂದು ಸ್ವಾಮೀಜಿ ಹೇಳಿದ್ದರು.












Click it and Unblock the Notifications