Gruha Lakshmi Scheme: ಗೃಹ ಲಕ್ಷ್ಮಿ ಯೋಜನೆಯ ಹಣ ಜಮಾ ಮಾಡುವ ದಿನಾಂಕ ಘೋಷಣೆ ಮಾಡಿ: ನಿಖಿಲ್ ಕುಮಾರಸ್ವಾಮಿ
ಬೆಂಗಳೂರು, ಫೆಬ್ರವರಿ 2 ಕಾಂಗ್ರೆಸ್ ಪಂಚ ಗ್ಯಾರಂಟಿಗೆ ದಿನಾಂಕ ಘೋಷಣೆ ಮಾಡಿ. ನಾಲ್ಕೈದು ತಿಂಗಳಾಯ್ತು ಹಣನೇ ಬಂದಿಲ್ಲ, ಯಾವುದಾದರು ಚುನಾವಣೆಗಳು ಸಮೀಪಸಿದಾಗ ಮಾತ್ರ ಮ್ಯಾಜಿಕ್ ಆಗಿ ಹಣ ಜಮವಾಗುತ್ತೆ, ವಿಳಂಬ ಸಾಕು, ಕಾರಣ ಬೇಡ, ಕಟಾ ಕಟ್ ಹಣ ವರ್ಗಾಯಿಸಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಒತ್ತಾಯಿಸಿದರು.
ಈ ಕುರಿತು ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಹಾಗೂ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ನವರು ಬಜೆಟ್ ರೂಪಿಸುವಲ್ಲಿ ನಿರತರಾಗಿದ್ದಾರೆ. ಆದರೆ ವಿಪರ್ಯಾಸವೆಂದರೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಣಕ್ಕಾಗಿ 3-4 ತಿಂಗಳು ಕಾಯಬೇಕಾಗಿದೆ. ಯಾವುದಾದರೂ ಚುನಾವಣೆಗಳು ಸಮೀಪಿಸಿದಾಗ ಮಾತ್ರ "ಮ್ಯಾಜಿಕ್" ಆಗಿ ಹಣ ಜಮವಾಗುತ್ತೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮಿ ಮತ್ತು ಯುವ ನಿಧಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿದೆ. ಪ್ರತೀ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ಬಣ್ಣದ ಮಾತುಗಳನ್ನ ಹೇಳಿತ್ತು. ಆದರೆ, ಪ್ರತಿ ಬಾರಿಯೂ ತಾಂತ್ರಿಕ ಸಮಸ್ಯೆಯ ನೆಪ ಒಡ್ಡುವುದು ನಿಜಕ್ಕೂ ಹಾಸ್ಯಾಸ್ಪದವಾಗಿದೆ. ಬೆಂಗಳೂರು, ಭಾರತದ ಸಿಲಿಕಾನ್ ಕ್ಯಾಪಿಟಲ್, ಜಾಗತಿಕ ತಂತ್ರಜ್ಞಾನ ಕೇಂದ್ರದಲ್ಲಿ DBT ವರ್ಗಾವಣೆ ಸರಿಪಡಿಸಲಾಗುವುದಿಲ್ಲವೇ? ಎಂದು ನಿಖಿಲ್ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.
ಇನ್ನೂ ಮುಂಬರುವ ಬಜೆಟ್ ಅಧಿವೇಶನದಲ್ಲಿ ಗ್ಯಾರಂಟಿ ಕ್ಯಾಲೆಂಡರ್ ಬಿಡುಗಡೆ ಮಾಡಿ, ಹಣ ಜಮಾ ಮಾಡುವ ದಿನಾಂಕವನ್ನು ನಿಗದಿ ಮಾಡಿ, ಸಮಯಕ್ಕೆ ಸರಿಯಾಗಿ DBT ವರ್ಗಾವಣೆ ಮಾಡಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಒತ್ತಾಯಿಸಿದರು.
ರಾಜ್ಯಾಧ್ಯಕ್ಷ ವಿಚಾರಕ್ಕೆ ಮಾತನಾಡಿದ ಅವರು, ನನ್ನ ಸೇರಿ ಅನೇಕ ಪಕ್ಷದ ಹಿರಿಯ ಮುಖಂಡರು ಕುಮಾರಣ್ಣ ಅವರೇ ಮುಂದುವರೆಯ ಬೇಕು ಎಂಬ ಅಭಿಪ್ರಾಯವಿದೆ. ಕುಮಾರಸ್ವಾಮಿ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿ ಅಂತ ಹೇಳಿದ್ದಾರೆ. ನಮ್ಮ ಕಾರ್ಯಕರ್ತರಿಗೆ ನ್ಯಾಯ ಒದಗಿಸಬೇಕು ಆ ನಿಟ್ಟಿನಲ್ಲಿ ನಾನು ಕೆಲಸ ಮಾಡ್ತಿದ್ದೇನೆ ಎಂದರು. ಜೆಡಿಎಸ್ ನಲ್ಲಿ ಕೆಲ ಬದಲಾವಣೆ ಆಗ್ಬೇಕು. ಆ ಬಗ್ಗೆ ಗಮನ ಹರಿಸಿದ್ದೇನೆ. ಯಾರು ಪಕ್ಷದ ಬೆಳೆವಣಿಗೆಗೆ ಹೋರಾಟ ಮಾಡ್ತಾರೋ ಅಂತಹ ಸಕ್ರಿಯ ಕಾರ್ಯಕರ್ತರನ್ನು ಈ ಬಾರಿ ಪಾದಧಿಕಾರಿಗಾಳಾಗಿ ಆಯ್ಕೆ ಮಾಡ್ತೀವಿ ಎಂದು ತಿಳಿಸಿದರು.
ಜಿ ಟಿ ದೇವೇಗೌಡರು ಹಿರಿಯರು. ನಮ್ಮ ಪಕ್ಷದ ಚಿಹ್ನೆ ಅಡಿಯಲ್ಲಿ ಗೆದ್ದಿದ್ದಾರೆ. ಜಿ.ಟಿ ದೇವೇಗೌಡರು ಕೂಡ ಸ್ಪಷ್ಟವಾಗಿ ಹೇಳಿದ್ದಾರೆ, ಚಾಮುಂಡೇಶ್ವರಿ ಕ್ಷೇತ್ರಕ್ಕೆ ಒತ್ತನ್ನು ಕೊಡುತ್ತಿದ್ದೇನೆ ಅಂತ.ವ2025 ರ ಮೊದಲ ಕರೆ ನನ್ನದು ಜಿ ಟಿ ದೇವೇಗೌಡರು ಮಾಡಿದ್ದೆ ಅವರನ್ನೇ ಕೇಳಿ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.
ಚನ್ನಪಟ್ಟಣ ಉಪ ಚುನಾವಣೆಗೆ ಜಿ ಟಿ ದೇವೇಗೌಡ ಅವರಿಗೆ ಕರೆದಿಲ್ಲ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ನಿಖಿಲ್ ಕುಮಾರಸ್ವಾಮಿ ಅವರು, ನನ್ನ ಚುನಾವಣೆ ಅನಿರೀಕ್ಷಿತ ಎಲ್ಲರೂ ಬಂದು ಚುನಾವಣೆಯಲ್ಲಿ ಪ್ರಚಾರ ಮಾಡಿದ್ರು. ಜಿ ಟಿ ದೇವೇಗೌಡ ನನ್ನ ಕರೆದಿಲ್ಲ ಅಂತ ಎಲ್ಲಿ ಹೇಳಿದ್ದಾರೆ ನನಗೆ ಗೊತ್ತಿಲ್ಲ ಎಂದರು.












Click it and Unblock the Notifications