ಎಂಎಲ್‌ಸಿ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ: ನಾಮಪತ್ರ ಸಲ್ಲಿಕೆ, ದಿನಾಂಕಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ
ಬೆಂಗಳೂರು, ಜನವರಿ 16: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆರಾಜೀನಾಮೆ ನೀಡಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ನಿಂದ ಸ್ಪರ್ಧೆ ನಡೆಸಿದ್ದ ಪುಟ್ಟಣ್ಣ ಅವರು ಪ್ರತಿನಿಧಿಸುತ್ತಿದ್ದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಘೋಷಣೆ ಮಾಡಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಿಸಿದ್ದು,ಅಧಿಸೂಚನೆ ದಿನಾಂಕ, ನಾಮಪತ್ರ ಸಲ್ಲಿಕೆ ಹಾಗೂ ಮತದಾನದ ದಿನಾಂಕಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಧಿಸೂಚನೆ ದಿನಾಂಕ- 23 ಜನವರಿ 2024 (ಮಂಗಳವಾರ)
ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ- 30 ಜನವರಿ 2024 (ಮಂಗಳವಾರ)
ನಾಮಪತ್ರಗಳ ಪರಿಶೀಲನೆ ದಿನಾಂಕ- 31 ಜನವರಿ 2024 (ಬುಧವಾರ)
ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನಾಂಕ - 02 ಫೆಬ್ರವರಿ 2024 (ಶುಕ್ರವಾರ)
ಮತದಾನದ ದಿನಾಂಕ -16 ಫೆಬ್ರವರಿ 2024 (ಶುಕ್ರವಾರ)
ಮತದಾನದ ಸಮಯ- ಬೆಳಿಗ್ಗೆ 8:00 ರಿಂದ ಸಂಜೆ 4:00 ಗಂಟೆ
ಮತ ಎಣಿಕೆ ದಿನಾಂಕ- 20 ಫೆಬ್ರವರಿ 2024 (ಮಂಗಳವಾರ)
ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳುವ ದಿನಾಂಕ- 23 ಫೆಬ್ರವರಿ 2024 (ಶುಕ್ರವಾರ)












Click it and Unblock the Notifications