5 ಮತ್ತು 8 ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು,ಡಿಸೆಂಬರ್ 13: ಮಕ್ಕಳ ಕಲಿಕಾ ಕೊರತೆಯನ್ನ ನೀಗಿಸುವ ಸಲುವಾಗಿ 5 ಮತ್ತು 8 ನೇ ತರಗತಿಗಳಿಗೂ ವಿಷೇಶ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದ್ದು, ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷೆಯ ಸಂಪೂರ್ಣ ಜವಾಬ್ದಾರಿ ವಹಿಸಲಿದೆ. ರಾಜ್ಯ ಪಠ್ಯ ಕ್ರಮದ ವಿದ್ಯಾರ್ಥಿಗಳ ಕಲಿಕಾ ಸಾಧನೆ ಯಾವ ರೀತಿ ಇದೆ ಎಂಬುದನ್ನು ಅಳೆಯಲು ಈ ವಾರ್ಷಿಕ ಪರೀಕ್ಷೆ ಮಾಡಲಾಗ್ತಿದೆ.
ಇನ್ನೂ ರೂಪಣಾತ್ಮಕ ಪರೀಕ್ಷೆ ಹಾಗೂ ಸಂಕಲನಾತ್ಮಕ ಪರೀಕ್ಷೆಯ ವಿಧಾನದಲ್ಲಿ ಪರೀಕ್ಷೆ ನಡೆಯಲಿದ್ದು, ಕ್ಲಸ್ಟರ್ ಹಂತದಲ್ಲಿ ಈ ಪರೀಕ್ಷೆಗಳನ್ನ ನಡೆಸಲಾಗುತ್ತದೆ. ಇನ್ನೂ ಪರೀಕ್ಷಾ ಪ್ರಕ್ರಿಯೆಗೆ ವಿದ್ಯಾರ್ಥಿಗಳಿಂದ ಯಾಅವುದೇ ರೀತಿಯ ಶುಲ್ಕ ಪಡೆಯುವಂತಿಲ್ಲ.
ಇನ್ನೂ ಪರೀಕ್ಷೆ ನಡೆಸುವಾಗ 8ನೇ ತರಗತಿಗೆ ಒಂದು ಪರೀಕ್ಷಾ ಕೇಂದ್ರಕ್ಕೆ 50 ಮಕ್ಕಳು ಇರುವಂತೆ, 5ನೇ ತರಗತಿಗೆ 25 ಮಕ್ಕಳು ಒಂದು ಕೇಂದ್ರಕ್ಕೆ ಇರುವಂತೆ ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಬೇಕು. ಮಕ್ಕಳ ಸಂಖ್ಯೆ ಕಡಿಮೆಯಿದ್ದರೆ 2 ಕಿಮೀ ವ್ಯಾಪ್ತಿಯ ಶಾಲೆಗಳನ್ನ ಒಳಪಡಿಸಿಕೊಳ್ಳುವುದು. ಪರೀಕ್ಷಾ ಕೇಂದ್ರ ಸ್ಥಾಪನೆಗೆ ಡಯಟ್ ಪ್ರಾಂಶುಪಾಲರು, ಬಿಇಓಗಳು ಚರ್ಚಿಸಿ ನಿರ್ಧಾರ ಮಾಡಬೇಕು. ಕ್ಲಸ್ಟರ್ ವ್ಯಾಪ್ತಿಯಲ್ಲಿ ಶಿಕ್ಷಕರನ್ನ ಅದಲು ಬದಲು ಮಾಡಬೇಕು. ಶಾಲಾ ಹಂತದಲ್ಲಿ ಪರೀಕ್ಷೆ ಪ್ರವೇಶ ಪತ್ರಗಳನ್ನ ಮುಖ್ಯಶಿಕ್ಷಕರು ವಿತರಿಸಬೇಕು.

ಪರೀಕ್ಷೆ ನಡೆಸಿದರು ಯಾವುದೇ ವಿದ್ಯಾರ್ಥಿಗಳನ್ನ ಈ ಪರೀಕ್ಷೆಯಲ್ಲಿ ಫೇಲ್ ಮಾಡೋದಿಲ್ಲ. ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆಯೋ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ವ್ಯವಸ್ಥೆ ಇಲಾಖೆ ಮಾಡಿಕೊಳ್ಳಲಿದೆ. ಮಕ್ಕಳ ಕಲಿಕೆ ಗುಣಮಟ್ಟ ಏನು? ಕೊರತೆಗಳೇನು? ಯಾವ ವಿಷಯಗಳಲ್ಲಿ ಹಿನ್ನಡೆಯಾಗಿದೆ. ಯಾವ ವಿಷಯಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಎಂಬುದನ್ನು ತಿಳಿಯಲು ಈ ಪರೀಕ್ಷೆಯಿಂದ ಸಹಕಾರಿಯಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
50 ಅಂಕಗಳ ಪರೀಕ್ಷೆ. 2 ಗಂಟೆ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕು. 50 ಅಂಕದಲ್ಲಿ 40 ಅಂಕ ಲಿಖಿತ ಪರೀಕ್ಷೆ, 10 ಅಂಕ ಮೌಖಿಕ ಪರೀಕ್ಷೆ ನಡೆಸುವುದು. ಪ್ರಶ್ನೆ ಪತ್ರಿಕೆ ಮುದ್ರಣವನ್ನ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುದ್ರಿಸುತ್ತದೆ. ಜಿಲ್ಲಾ ಡಯಟ್ ಗಳಿಗೆ ಇದು ಹಂಚಿಕೆಯಾಗಲಿದೆ. ಇದರ ಉಸ್ತುವಾರಿ ಬಿಇಓ ಆಗಿರುತ್ತಾರೆ. ಸಂಕಲನಾತ್ಮಕ ಮತ್ತು ರೂಪಣಾತ್ಮಕ ಸೇರಿ 100 ಅಂಕಗಳಿಗೆ ಪರೀಕ್ಷೆ ಇರಲಿದೆ. 35 ಅಂಕ ಪಡೆದ ವಿದ್ಯಾರ್ಥಿ ಪ್ರಗತಿ ಸಾಧಿಸಿರುವ ವಿದ್ಯಾರ್ಥಿ ಅಂತ ಘೋಷಣೆ ಮಾಡಲಾಗುತ್ತದೆ. ಇಲ್ಲವಾದಲ್ಲಿ ಕಲಿಕೆಯಲ್ಲಿ ಇನ್ನೂ ಪ್ರಗತಿ ಸಾಧಿಸಬೇಕಿರುವ ವಿದ್ಯಾರ್ಥಿ ಎಂದು ತೀರ್ಮಾನಿಸಿ 2023 ರ ಜೂನ್ ಮತ್ತು ಜುಲೈ ತಿಂಗಳ ಅಂತ್ಯದಲ್ಲಿ ಕ್ರಮವಾಗಿ ಪರಿಹಾರ ಬೋಧನೆ ಮಾಡಿ, ಎರಡು ಪೂರಕ ಪರೀಕ್ಷೆ, ಮೌಲ್ಯಾಂಕನಗಳನ್ನು ಶಾಲಾ ಹಂತದಲ್ಲಿಯೇ ನಿರ್ವಹಿಸಿ ಸಂಬಂಧಿಸಿದ ವಿದ್ಯಾರ್ಥಿಗಳ ಕಲಿಕಾ ಬಲವರ್ಧನೆಗೊಳಿಸುವುದು. ಈ ಕಾರಣಕ್ಕಾಗಿ ಯಾವುದೇ ವಿದ್ಯಾರ್ಥಿಯನ್ನು ಅದೇ ತರಗತಿಯಲ್ಲಿ ಕಲಿಕಾ ಪ್ರಗತಿ ಸಾಧಿಸುವ ವಿದ್ಯಾರ್ಥಿ ಎಂದು ಪರಿಗಣಿಸಿ ಅನುತ್ತಿರ್ಣಗೊಳಿಸಬಾರದು ಎಂದು ಸುತ್ತೋಲೆ ಹೊರಡಿಸಲಾಗಿದೆ.
-
Kerala: ಕೇರಳಂ ವಿಧಾನಸಭೆ ಚುನಾವಣೆ 2026: ಎಲ್ಡಿಎಫ್–ಯುಡಿಎಫ್ ನಡುವೆ ಪೈಪೋಟಿ, ಹೇಗಿದೆ ರಾಜಕೀಯ ಕಣ -
Assam Assembly Election 2026: ಅಸ್ಸಾಂ ವಿಧಾನಸಭಾ ಚುನಾವಣೆಯ ಮತದಾನ, ಮತ ಎಣಿಕೆ ದಿನಾಂಕಗಳ ವಿವರ -
Puducherry Election 2026: ವಿಧಾನಸಭಾ ಚುನಾವಣೆಗೆ ಸಜ್ಜಾದ ಪುದುಚೇರಿ ರಾಜಕೀಯ ಅಖಾಡ: ಏಪ್ರಿಲ್ 9ಕ್ಕೆ ಮತದಾನ -
ಒಡಿಶಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ -
ಕರ್ನಾಟಕದ ನೀರಾವರಿ ಯೋಜನೆಗೆ ಆಂಧ್ರ ಅಡ್ಡಗಾಲು: ಸಿಡಿದೆದ್ದ ಡಿಸಿಎಂ ಡಿ.ಕೆ.ಶಿವಕುಮಾರ್ -
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart












Click it and Unblock the Notifications