Property: ಕರ್ನಾಟಕಕ್ಕೆ ಮತ್ತೊಂದು ಬಂಪರ್ ಯೋಜನೆ: ಈ ಭಾಗದಲ್ಲಿ ಭೂಮಿಗೆ ಚಿನ್ನದ ಬೆಲೆ!

ಕರ್ನಾಟಕ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಸಹಯೋಗದಲ್ಲಿ ರಾಜ್ಯದಲ್ಲಿ ಸರಣಿ ಯೋಜನೆಗಳನ್ನು ಜಾರಿ ಮಾಡಲಾಗುತ್ತಿದ್ದು. ಇದರಿಂದ ಸಹಜವಾಗಿಯೇ ಕರ್ನಾಟಕದ ವಿವಿಧ ಭಾಗದಲ್ಲಿ ಭೂಮಿಗೆ ಭರ್ಜರಿ ಬೆಲೆ ಬರುತ್ತಿದೆ. ಇನ್ನು ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣದಿಂದ ಬೆಂಗಳೂರಿನ ಸುತ್ತಮುತ್ತಿನ ಪ್ರದೇಶಗಳು ಹಾಗೂ ದಕ್ಷಿಣ ಕರ್ನಾಟಕದಲ್ಲಿ ಭೂಮಿಗೆ ಬಂಪರ್ ಬೆಲೆ ಬಂದಿದ್ದರೆ, ಇದೀಗ ಮತ್ತೊಂದು ಯೋಜನೆಯ ಕಾರಣಕ್ಕೆ ರಾಜ್ಯದಲ್ಲಿ ಈ ಭಾಗದಲ್ಲಿ ಭೂಮಿಗೆ ಬಂಗಾರದ ಬೆಲೆ ಬರ್ತಿದೆ. ಅದೇನು ಎನ್ನುವ ವಿವರ ಇಲ್ಲಿದೆ.

ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಕ್ರಿಯೆಗಳು ಚುರುಕು ಪಡೆದುಕೊಂಡ ಬೆನ್ನಲ್ಲೇ ಕರ್ನಾಟಕ ಸರ್ಕಾರವು ಮತ್ತೊಂದು ಪ್ರಮುಖ ಯೋಜನೆಯ ಬಗ್ಗೆ ಘೋಷಣೆ ಮಾಡಿದೆ. ಈ ಮೂಲಕ ರಿಯಲ್‌ ಎಸ್ಟೇಟ್‌ಗೆ ಬೆಂಗಳೂರು ಮಾತ್ರವಲ್ಲ ಬೆಂಗಳೂರಿನಿಂದ ಹೊರಗೆ ಹಾಗೂ ಎರಡನೇ ಮತ್ತು ಮೂರನೇ ಹಂತದ ನಗರಗಳ ಜಾಗಕ್ಕೂ ಬಂಪರ್ ಅಂತಲೇ ಹೇಳಲಾಗುತ್ತಿದೆ. ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಫೈನಲ್‌ ಆಗುತ್ತಿರುವ ಸಂದರ್ಭದಲ್ಲಿಯೇ ಮತ್ತೊಂದು ಜಾಗಕ್ಕೂ ಗುಡ್‌ನ್ಯೂಸ್‌ ಕೊಟ್ಟಿದ್ದು. ಸಹಜವಾಗಿಯೇ ಭೂಮಿಯ ಬೆಲೆ ಹೆಚ್ಚಳವಾಗುವುದಕ್ಕೆ ಶುರುವಾಗುತ್ತಿದೆ. ಅದರ ವಿವರ ನೋಡೋಣ.

Another Bumper Project For Karnataka Land Boom in This Part

ಈಗಾಗಲೇ ಹೇಳಿದಂತೆ ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮೂರು ಜಾಗಗಳನ್ನು ಶಾರ್ಟ್‌ ಲಿಸ್ಟ್‌ ಮಾಡಿಕೊಳ್ಳಲಾಗಿದ್ದು. ಇದರ ಸ್ಥಳ ಪರಿಶೀಲನೆಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ನಡೆಸಿದೆ. ಇದೀಗ ಈ ಸ್ಥಳ ಪರಿಶೀಲನೆ ಪ್ರಕ್ರಿಯೆಗಳು ಬಹುತೇಕ ಅಂತಿಮವಾಗಿವೆ. ಈ ರೀತಿ ಇರುವಾಗಲೇ ಉತ್ತರ ಕರ್ನಾಟಕದ ಬೆಳಗಾವಿ ಇಲ್ಲವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಿದೆ. ಇದರಿಂದ ಈ ಭಾಗದಲ್ಲಿ ಭೂಮಿಗೆ ಭರ್ಜರಿ ಬೆಲೆ ಬರುತ್ತಿದೆ. ವಿಮಾನ ನಿಲ್ದಾಣದ ಘೋಷಣೆಯ ಬೆನ್ನಲ್ಲೇ ಧಾರವಾಡ ಹಾಗೂ ಬೆಳಗಾವಿಯ ಜಿಲ್ಲಾ ಕೇಂದ್ರಿತ ಹಾಗೂ ಸುತ್ತಮುತ್ತಲಿನ (ಹೆಚ್ಚು ಖಾಲಿ ಇರುವ ಪ್ರದೇಶಗಳಲ್ಲಿ) ಪ್ರದೇಶಗಳ ಮೇಲೆ ರಿಯಲ್‌ ಎಸ್ಟೇಟ್‌ದಾರರು ಕಣ್ಣಿಟ್ಟಿದ್ದಾರೆ.

ಇನ್ನು ಈಗಾಗಲೇ ಎರಡೂ ಜಿಲ್ಲೆಗಳಲ್ಲೂ ಪ್ರಾದೇಶಿಕ ವಿಮಾನ ನಿಲ್ದಾಣಗಳು ಇವೆ. ಕರ್ನಾಟಕಕ್ಕೆ ಎರಡು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಕೇಂದ್ರಕ್ಕೆ ಪತ್ರ ಬರೆದಿರುವ ಸಂದರ್ಭದಲ್ಲಿಯೇ ಕರ್ನಾಟಕದ ಇನ್ನುಳಿದ ವಿಮಾನ ನಿಲ್ದಾಣಗಳ ಅಭಿವೃದ್ಧಿಗೂ ಸರ್ಕಾರ ಮುಂದಾಗಿದೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉತ್ತರ ಕರ್ನಾಟಕಕ್ಕೆ ಹೇಗೆ ಲಾಭ ?

ಇನ್ನು ಸರ್ಕಾರವು ಉತ್ತರ ಕರ್ನಾಟಕದಲ್ಲೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸುವುದಾಗಿ ಹೇಳಿದೆ. ಇದರಿಂದ ಸಹಜವಾಗಿಯೇ ಹುಬ್ಬಳ್ಳಿ - ಬೆಳಗಾವಿಯಲ್ಲಿ ಭೂಮಿಗೆ ಬಂಗಾರದ ಬೆಲೆ ಬರ್ತಿದೆ. ಇಲ್ಲಿ ವಿಮಾನ ನಿಲ್ದಾಣ ಅಭಿವೃದ್ಧಿಯಾದರೆ ಭಾರೀ ದೊಡ್ಡ ಮಟ್ಟದಲ್ಲಿ ಉದ್ಯಮಗಳು ಅಭಿವೃದ್ಧಿಯಾಗುತ್ತವೆ. ಅಲ್ಲದೇ ಇಲ್ಲಿ ಮೂಲಸೌಕರ್ಯವೂ ಅಭಿವೃದ್ಧಿ ಆಗಲಿದೆ. ವಿಮಾನ ನಿಲ್ದಾಣ ನಿರ್ಮಾಣಕ್ಕೆ 4,000 ಸಾವಿರದಿಂದ 5,000 ಸಾವಿರ ಎಕರೆಯಷ್ಟು ಜಾಗದ ಅವಶ್ಯಕತೆ ಇರುವುದರಿಂದ ಸಹಜವಾಗಿಯೇ ವಿಮಾನ ನಿಲ್ದಾಣ ಇರುವ ಜಾಗದಲ್ಲಿ ಭೂಮಿ ಇರುವವರಿಗೆ ಬಂಪರ್ ಬೆಲೆ ಬರಲಿದ್ದು. ಕೋಟ್ಯಾಧಿಪತಿಗಳಾಗುವುದರಲ್ಲಿ ಅನುಮಾನವೇ ಇಲ್ಲ. ಆದರೆ, ಈ ಅದೃಷ್ಟದ ಹಾದಿ ಇನ್ನೂ ತಡವಾಗಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+