Property: ಕರ್ನಾಟಕ ಸರ್ಕಾರದಿಂದ ಗ್ರಾಮೀಣ ಭಾಗದ ಆಸ್ತಿದಾರರಿಗೆ ಮತ್ತೊಂದು ಗುಡ್ನ್ಯೂಸ್
ಕರ್ನಾಟಕ ಸರ್ಕಾರವು ಗ್ರಾಮೀಣ ಭಾಗದ ಆಸ್ತಿದಾರರಿಗೆ ಮತ್ತೊಂದು ಭರ್ಜರಿ ಗುಡ್ನ್ಯೂಸ್ ನೀಡಿದೆ. ಕರ್ನಾಟಕ ಸರ್ಕಾರವು ಈಗಾಗಲೇ ಆಸ್ತಿಗೆ ಸಂಬಂಧಿಸಿದಂತೆ ವಿವಿಧ ಅಪ್ಡೇಟ್ಸ್ ನೀಡಿದೆ. ಬಿ ಖಾತಾದಿಂದ ಎ ಖಾತಾ, ಇ ಖಾತಾ ಹಾಗೂ ಇ - ಸ್ವತ್ತು ವಿಚಾರಗಳಲ್ಲಿ ಭರ್ಜರಿ ಗುಡ್ನ್ಯೂಸ್ ನೀಡಿದೆ. ಇದೀಗ ಮತ್ತೊಂದು ಗುಡ್ನ್ಯೂಸ್ ನೀಡುತ್ತಿದೆ. ಈ ಸೌಲಭ್ಯವು ಮುಖ್ಯವಾಗಿ ಗ್ರಾಮೀಣ ಭಾಗದ ಆಸ್ತಿದಾರರಿಗೆ ಅನುಕೂಲವಾಗಲಿದೆ.
ಕರ್ನಾಟಕ ಸರ್ಕಾರವು ಗ್ರಾಮೀಣ ಭಾಗದ ಆಸ್ತಿದಾರರಿಗೆ ಗುಡ್ನ್ಯೂಸ್ ಕೊಟ್ಟಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳಿಗೆ ಹಾಗೂ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ನಮೂನೆ 11ಎ ಹಾಗೂ ನಮೂನೆ 11ಬಿ ನೀಡಲಾಗುತ್ತಿದೆ. ಇದೀಗ ಸಾರ್ವಜನಿಕರು ಮನೆಯಲ್ಲೇ ಕುಳಿತು ಇ- ಸ್ವತ್ತು ತಂತ್ರಾಂಶ 2.0 ಮೂಲಕ ಡಿಜಿಟಲ್ ಇ - ಖಾತಾ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳಿಗೆ ಮತ್ತು ಕೃಷಿಯೇತರ ಆಸ್ತಿಗಳಿಗೆ ನಮೂನೆ 11ಎ & ನಮೂನೆ 11ಬಿ ನೀಡಲಾಗುತ್ತದೆ. ಸಾರ್ವಜನಿಕರು ಮನೆಯಲ್ಲೇ ಕುಳಿತು https://eswathu.karnataka.gov.in ಇ- ಸ್ವತ್ತು ತಂತ್ರಾಂಶ 2.0 ಮುಖಾಂತರ ಅರ್ಜಿ ಸಲ್ಲಿಸಿ. ಇ-ಸ್ವತ್ತು ಪಡೆಯಲು ಆಡಳಿತಾತ್ಮಕ, ತಾಂತ್ರಿಕ ಸಮಸ್ಯೆಗಳ ಪರಿಹಾರಕ್ಕೆ ಸಹಾಯವಾಣಿ ಸಂಖ್ಯೆ 9483476000ಗೆ ಕರೆಮಾಡಬಹುದು ಎಂದು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ತಿಳಿಸಿದೆ.

ಗ್ರಾಮೀಣ ಸ್ವತ್ತುಗಳಿಗೆ ಡಿಜಿಟಲ್ ಆಸ್ತಿ ಪ್ರಮಾಣ ಪತ್ರ
ಇಷ್ಟು ದಿನಗಳ ಕಾಲ ರಾಜ್ಯದ ನಗರ ಪ್ರದೇಶದ ಆಸ್ತಿಗಳಿಗೆ ಸಿಗುತ್ತಿದ್ದ ಪ್ರಮುಖ ಹಾಗೂ ವಿಶೇಷ ಸೌಲಭ್ಯವನ್ನು ಇದೀಗ ಕರ್ನಾಟಕದ ಗ್ರಾಮೀಣ ಭಾಗದ ಆಸ್ತಿಗಳಿಗೂ ವಿಸ್ತರಿಸಲಾಗುತ್ತಿದೆ. ಗ್ರಾಮೀಣ ಸ್ವತ್ತುಗಳಿಗೆ ಡಿಜಿಟಲ್ ಆಸ್ತಿ ಪ್ರಮಾಣ ಪತ್ರ ನೀಡಲು ಸರ್ಕಾರ ಮುಂದಾಗಿದೆ. ಈ ಹಿಂದೆ ಗ್ರಾಮೀಣ ಭಾಗದ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳು ಕಾಗದ ರೂಪದಲ್ಲಿ ಇರುತ್ತಿದ್ದವು. ಹೀಗಾಗಿ, ಈ ದಾಖಲೆಗಳು ಕಳೆದು ಹೋಗುವ ಸಾಧ್ಯತೆ ಹೆಚ್ಚಾಗಿತ್ತು. ಅಲ್ಲದೇ ಕೆಲವರು ಆಸ್ತಿಗಳನ್ನು ನಕಲು ಮಾಡುವ ಅಥವಾ ವಿವಾದಗಳಿಗೂ ಇದು ಕಾರಣವಾಗುತ್ತಿತ್ತು. ಇದೀಗ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಿ ಹಾಗೂ ಆಸ್ತಿಗಳ ಸುರಕ್ಷತೆಯ ದೃಷ್ಟಿಯಿಂದ ಗ್ರಾಮೀಣ ಸ್ವತ್ತುಗಳಿಗೆ ಡಿಜಿಟಲ್ ಆಸ್ತಿ ಪ್ರಮಾಣ ಪತ್ರ ಪರಿಚಯಿಸಲಾಗಿದೆ.
ಎಲ್ಲಾ ಇ-ಸ್ವತ್ತು ವಿವರಗಳನ್ನು ಡಿಜಿಟಲ್ ಪ್ಲಾಟ್ಫಾರ್ಮ್ನಲ್ಲಿ ಸುರಕ್ಷಿತವಾಗಿ ಸಂಗ್ರಹಿಸುವ ವ್ಯವಸ್ಥೆ ಮಾಡಲಾಗಿದೆ. ಈ ಯೋಜನೆಯ ಮೂಲಕ ಆಸ್ತಿ ಮಾಲೀಕರಿಗೆ ಬ್ಯಾಂಕ್ ಸಾಲ, ಸರ್ಕಾರಿ ಯೋಜನೆಗಳ ಲಾಭ, ಆಸ್ತಿ ತೆರಿಗೆ ಪಾವತಿ ಹಾಗೂ ಸ್ವತ್ತು ಖರೀದಿ ಮಾಡುವುದು ಮತ್ತು ಮಾರಾಟ ಪ್ರಕ್ರಿಯೆಗಳು ಇನ್ನಷ್ಟು ಸುಲಭವಾಗಲಿದೆ ಎಂದು ಸರ್ಕಾರ ತಿಳಿಸಿದೆ.
ಇ - ಸ್ವತ್ತು ಪಡೆದುಕೊಳ್ಳಲು ಬೇಕಾಗುವ ದಾಖಲೆಗಳು
1. ಹಳೆಯ ಸ್ವತ್ತು ದಾಖಲೆ / ಖಾತಾ
2. ತೆರಿಗೆ ಪಾವತಿ ರಸೀದಿ
3. ಸ್ವತ್ತಿನ ಫೋಟೋ
4. ಆಧಾರ್ ಕಾರ್ಡ್
5. ರೇಷನ್ ಕಾರ್ಡ್
6. ಮೊಬೈಲ್ ಸಂಖ್ಯೆ
ಇ- ಸ್ವತ್ತು ಪಡೆಯುವುದಕ್ಕೆ ಯಾರು ಅರ್ಹರು ?
1. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರು ಆಸ್ತಿಗಳಿಗೆ ಈ ಯೋಜನೆ ಅನ್ವಯ ಆಗಲಿದೆ. ಈ ಭಾಗದ ಸ್ವತ್ತು ಮಾಲೀಕರು ಇದಕ್ಕೆ ಅರ್ಹರು.
2. ಮನೆ, ಖಾಲಿ ಜಮೀನು ಹಾಗೂ ವಾಣಿಜ್ಯ ಕಟ್ಟಡ ಇರುವವರು.
3. ಈಗಾಗಲೇ ತೆರಿಗೆ ಪಾವತಿಸುತ್ತಿರುವ ಸ್ವತ್ತುಧಾರಕರು ಅರ್ಜಿ ಸಲ್ಲಿಸಬಹುದಾಗಿದೆ.
ಗ್ರಾಮೀಣ ಭಾಗದ ಆಸ್ತಿದಾರರು ಇದಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ?
ಇ ಸ್ವತ್ತು ಅಥವಾ ಗ್ರಾಮೀಣ ಸ್ವತ್ತುಗಳಿಗೆ ಡಿಜಿಟಲ್ ಆಸ್ತಿ ಪ್ರಮಾಣ ಪತ್ರ ಪಡೆಯುವ ವಿಧಾನವನ್ನು ಅತ್ಯಂತ ಸರಳೀಕರಣಗೊಳಿಸಲಾಗಿದೆ. ನಿಮ್ಮ ಗ್ರಾಮ ಪಂಚಾಯತ್ ಕಚೇರಿಗೆ ನೇರವಾಗಿ ಭೇಟಿ ಮಾಡಿ ಇ-ಸ್ವತ್ತು ಅರ್ಜಿ ಫಾರ್ಮ್ ಪಡೆದುಕೊಳ್ಳಿ. ಅರ್ಜಿ ಭರ್ತಿ ಮಾಡಿ ನಂತರ ಅಗತ್ಯವಿರುವ ದಾಖಲೆಗಳನ್ನು ಸಲ್ಲಿಸಿದ ಮೇಲೆ ಡಿಜಿಟಲ್ ಆಸ್ತಿ ಪ್ರಮಾಣ ಪತ್ರ (ಇ-ಸ್ವತ್ತು) ಪಡೆಯಬಹುದಾಗಿದೆ.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications