Bengaluru Metro: ಮೆಟ್ರೊ ಕಾಮಗಾರಿ ವೇಳೆ ಮತ್ತೊಂದು ಅವಘಡ: ನೆಲಕ್ಕುರುಳಿದ ಕ್ರೇನ್​!

ಬೆಂಗಳೂರು, ಜುಲೈ 08: ಇತ್ತೀಚೆಗೆ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲ್ರ್‌ ಕುಸಿದು ಬಿದ್ದು, ನಾಗವಾರದಲ್ಲಿ ಮಹಿಳೆ ಮತ್ತು ಎರಡು ವರ್ಷದ ಮಗು ಸಾವನ್ನಪ್ಪಿರುವಂತಹ ಘಟನೆ ಮಾಸುವ ಮುನ್ನವೇ ನಮ್ಮ ಮೆಟ್ರೋ ಕಾಮಗಾರಿಯ ವೇಳೆ ಮತ್ತೊಂದು ಅವಘಾಡ ಸಂಭವಿಸಿದೆ.

ಹೌದು, ಶುಕ್ರವಾರ ರಾತ್ರಿ ಮೆಟ್ರೋ ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್​ ನೆಲಕ್ಕುರುಳಿ ಬಿದ್ದಿದೆ. ಆ ಮೂಲಕ ಮೆಟ್ರೊ ಕಾಮಗಾರಿ ವೇಳೆ ಮತ್ತೊಂದು ಅವಘಡ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದೆ. ಸಿಲ್ಕ್ ಬೋರ್ಡ್‌ನಿಂದ ಮಡಿವಾಳಕ್ಕೆ ಸಂಪರ್ಕಿಸುವ ಮಾರ್ಗದಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Another Mishap During Metro Work

ಇನ್ನೂ ಮೆಟ್ರೋ ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್​ ನೆಲಕ್ಕುರುಳಿ ಬಿದ್ದಿರುವುದು ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಮೆಟ್ರೋ ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್​ ಜಾರಿ ಬಿಳ್ಳಲು ಕಾರಣ ಏನು ಎಂಬುವುದನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಮಡಿವಾಳ ಕಡೆಗೆ ಬರುವವರು ಬಿಟಿಎಂ ಲೇಔಟ್​ ಮೂಲಕ ಸಂಚರಿಸಬೇಕು. ಅದೇ ರೀತಿಯಾಗಿ ಬಿಟಿಎಂ ಲೇಔಟ್​ನಿಂದ ಮಡಿವಾಳಕ್ಕೆ ಹೋಗುವವರು ಎಚ್​ಎಸ್​​ಆರ್​ 14ನೇ ಮುಖ್ಯ ರಸ್ತೆ ಮೂಲಕ ಸಾಗಬೇಕಿದೆ.​

ಕೆಲ ತಿಂಗಳ ಹಿಂದೆಯೂ ಮೆಟ್ರೋ ಕಾಮಗಾರಿಯ ವೇಳೆ ಮೆಟ್ರೋ ಪಿಲ್ಲರ್​​ ಕುಸಿದು ಬಿದ್ದು, ಮಹಿಳೆ ಮತ್ತು ಎರಡು ವರ್ಷದ ಮಗು ಸಾವನ್ನಪ್ಪಿರುವಂತಹ ಘಟನೆ ನಡೆದಿತ್ತು. ಕಲ್ಯಾಣ್​ ನಗರದಿಂದ ಹೆಚ್​ಆರ್​ಬಿಆರ್​ ಲೇಔಟ್​ಗೆ ಹೋಗುವ ರಸ್ತೆಯಲ್ಲಿ ನಿರ್ಮಿಸಲಾಗುತ್ತಿದ್ದ ಮೆಟ್ರೊ ರೈಲ್ವೆ ಪಿಲ್ಲರ್​ನ ರಾಡ್​ಗಳು ರಸ್ತೆ ಮೇಲೆ ಕುಸಿದು ಬಿದ್ದ ಪರಿಣಾಮ ತಾಯಿ ಹಾಗೂ ಮಗು ಸಾವನ್ನಾಪಿದ್ದರು. ಮೆಟ್ರೋ ಕಾಮಗಾರಿಯ ವೇಳೆ ಈ ರೀತಿಯ ಅವಘಡಗಳು ಉಂಟಾಗುತ್ತಿದ್ದು, ಸಾರ್ವಜನಿಕರಲ್ಲಿ ಮತ್ತು ವಾಹನ ಸವಾರರಲ್ಲಿ ಆತಂಕ ಶುರುವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+