ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರವಾಹದಿಂದ ಹೈರಾಣಾಗಿರುವ ನಾಡಿಗೆ ದಂಗು ಬಡಿಯುವ ಕೋಡಿಶ್ರೀಗಳ ಭವಿಷ್ಯ

|
Google Oneindia Kannada News

Recommended Video

ಪ್ರವಾಹದಿಂದ ಸುಸ್ತಾದ ಜನರಿಗೆ ದಂಗುಬಡಿಸಿದ ಕೋಡಿ ಮಠದ ಶ್ರೀಗಳ ಭವಿಷ್ಯ | Oneindia Kannada

ಕರ್ನಾಟಕ ಮತ್ತು ಕೇರಳದಲ್ಲಿನ ಕಂಡುಕೇಳರಿಯದ ಪ್ರವಾಹ ಮತ್ತು ನೈಸರ್ಗಿಕ ವಿಕೋಪದ ನಡುವೆ ಅರಸೀಕೆರೆ ಕೋಡಿಮಠ ಸಂಸ್ಥಾನದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿಗಳು ಮತ್ತೊಂದು ಭವಿಷ್ಯವನ್ನು ನುಡಿದಿದ್ದಾರೆ.

ಹಾಸನದಲ್ಲಿ ಮಾತನಾಡುತ್ತಿದ್ದ ಕೋಡಿಮಠದ ಶ್ರೀಗಳು, ಮಳೆ ಮತ್ತು ಅದಕ್ಕೆ ಸಂಬಂಧಪಟ್ಟ ವಿಕೋಪಗಳು ಇನ್ನೂ ಮೂರು ತಿಂಗಳು ಮುಂದುವರಿಯಲಿದೆ, ಜನರಿಗೆ ಇದರಿಂದ ಇನ್ನಷ್ಟು ತೊಂದರೆಯಾಗಲಿದೆ ಎಂದು ಹೇಳಿದ್ದಾರೆ.

ಚಂದ್ರಗ್ರಹಣ ಹಿನ್ನೆಲೆಯಲ್ಲಿ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳುಚಂದ್ರಗ್ರಹಣ ಹಿನ್ನೆಲೆಯಲ್ಲಿ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

ಗ್ರಹಣದ ಪ್ರಭಾವದಿಂದ ರಾಜ್ಯ ರಾಜಕಾರಣದ ಮೇಲೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗೆ ತೀವ್ರ ನಷ್ಟ ಉಂಟಾಗಲಿದೆ ಎಂದು ಸುಮಾರು ಒಂದು ತಿಂಗಳ ಹಿಂದೆ ಅರಸೀಕೆರೆಯ ಕೋಡಿಮಠದಲ್ಲಿ ಶ್ರೀಗಳು ಭವಿಷ್ಯ ನುಡಿದಿದ್ದನ್ನು ಸ್ಮರಿಸಿಕೊಳ್ಳಬಹುದಾಗಿದೆ.

ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಈ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆಂದು ಕೋಡಿಮಠದ ಶ್ರೀಗಳು ಕಳೆದ ಜುಲೈ ತಿಂಗಳಲ್ಲಿ ಹೇಳಿದ್ದರು. ರಾಜ್ಯ ರಾಜಕಾರಣದಲ್ಲಿ ಮುಂದಿನ ದಿನಗಳಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯಲಿದೆ ಎಂದು ಶ್ರೀಗಳು ಹೇಳಿದ್ದರು.

ನೂರಕ್ಕೆ ನೂರು ಸತ್ಯವಾಯಿತು ಕೋಡಿಶ್ರೀಗಳ ಚುನಾವಣಾ ಭವಿಷ್ಯನೂರಕ್ಕೆ ನೂರು ಸತ್ಯವಾಯಿತು ಕೋಡಿಶ್ರೀಗಳ ಚುನಾವಣಾ ಭವಿಷ್ಯ

ಚಂದ್ರ ಗ್ರಹಣದ ಪ್ರಭಾವ ನಾಡಿನಲ್ಲಿ ಹೆಚ್ಚಾಗಲಿದೆ ಎಂದು ಶ್ರೀಗಳು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಜೆಡಿಎಸ್ ವರಿಷ್ಠ ದೇವೇಗೌಡ್ರು, ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಕೇಂದ್ರಕ್ಕೆ ಮತ್ತು ರೇವಣ್ಣ ರಾಜ್ಯ ರಾಜಕಾರಣದಲ್ಲಿ ಇರಲಿದ್ದಾರೆಂದು ಹೇಳಿದ್ದರು. ಶ್ರೀಗಳು ಹಾಸನದಲ್ಲಿ ಹೇಳಿದ್ದೇನು? ಮುಂದೆ ಓದಿ

ಅರಸನ ಆಯಸ್ಸು ಉಸಿರಲ್ಲಿ ನಿಂತೀತು, ಪರಸಕ್ಕೆ ಭಂಗ, ಪ್ರಸಂಗಕ್ಕೆ ಹಾನಿ, ಭ್ರಾತೃ ಬೆಂಕಿ ಹಿಡಿದಾನು

ಅರಸನ ಆಯಸ್ಸು ಉಸಿರಲ್ಲಿ ನಿಂತೀತು, ಪರಸಕ್ಕೆ ಭಂಗ, ಪ್ರಸಂಗಕ್ಕೆ ಹಾನಿ, ಭ್ರಾತೃ ಬೆಂಕಿ ಹಿಡಿದಾನು

ಚಂದ್ರಗ್ರಹಣ ಹಿನ್ನೆಲೆಯಲ್ಲಿ ಕೋಡಿ ಮಠದ ಸ್ವಾಮೀಜಿಗಳು ಭವಿಷ್ಯ ನುಡಿದು, "ಅರಸನ ಆಯಸ್ಸು ಉಸಿರಲ್ಲಿ ನಿಂತೀತು, ಪರಸಕ್ಕೆ ಭಂಗ, ಪ್ರಸಂಗಕ್ಕೆ ಹಾನಿ, ಭ್ರಾತೃ ಬೆಂಕಿ ಹಿಡಿದಾನು' ಎಂದು ಅರಸೀಕೆರೆ ತಾಲೂಕಿನ ಹಾರನಹಳ್ಳಿಯ ಕೋಡಿಮಠದ ಶ್ರೀಗಳು ಒಗಟಿನ ರೂಪದಲ್ಲಿ ಭವಿಷ್ಯ ನುಡಿದಿದ್ದರು. ಗ್ರಹಣದ ಪರಿಣಾಮದಿಂದಾಗಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಲಿದ್ದು, ಪ್ರಾಕೃತಿಕ ಸಂಪನ್ಮೂಲ ನಾಶ, ಭೂಕಂಪ, ಅತಿವೃಷ್ಟಿಯಾಗಲಿದೆ. ವಿಶೇಷವಾಗಿ ಬರುವ ದಿನಗಳು ಕಷ್ಟ ತರಲಿವೆ ಎಂದು ಈ ಭವಿಷ್ಯವನ್ನು ಅರ್ಥೈಸಲಾಗಿತ್ತು.

ನೋಡೇ ಬಿಡುವಾ.. ಕೋಡಿಶ್ರೀಗಳು ನುಡಿದ ಭವಿಷ್ಯ ನಿಜವಾಗುತ್ತಾ ಎಂದು? ನೋಡೇ ಬಿಡುವಾ.. ಕೋಡಿಶ್ರೀಗಳು ನುಡಿದ ಭವಿಷ್ಯ ನಿಜವಾಗುತ್ತಾ ಎಂದು?

ರೇವಣ್ಣ ಗ್ರಹಣದ ಎಫೆಕ್ಟ್​​ನಿಂದಾಗಿ ಮುಖ್ಯಮಂತ್ರಿಯಾಗಲಿದ್ದಾರೆ

ರೇವಣ್ಣ ಗ್ರಹಣದ ಎಫೆಕ್ಟ್​​ನಿಂದಾಗಿ ಮುಖ್ಯಮಂತ್ರಿಯಾಗಲಿದ್ದಾರೆ

ಸಹೋದರ ಬೆಂಕಿ ಹಿಡಿದಾನು ಎಂದರೆ ಕುಮಾರಸ್ವಾಮಿಯವರ ಸಹೋದರ ರೇವಣ್ಣ ಗ್ರಹಣದ ಎಫೆಕ್ಟ್​​ನಿಂದಾಗಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯವನ್ನು ಅರ್ಥೈಸಿಕೊಳ್ಳಲಾಗಿತ್ತು. ಪ್ರಾಕೃತಿಕ ವಿಕೋಪ ಹೆಚ್ಚಾಗಲಿದ್ದು, ಹೆಚ್ಚು ಮಳೆಯಾಗಲಿದ್ದು, ಬರುವ ದಿನಗಳು ಕಷ್ಟಕರವಾಗಲಿದೆ ಎಂದೂ ಕೋಡಿ ಶ್ರೀಗಳು ಭವಿಷ್ಯ ನುಡಿದಿದ್ದರು. ಚಂದ್ರ ಮತ್ತು ಸೂರ್ಯ ಗ್ರಹಣಗಳು ಒಂದೇ ಬಾರಿ ಬಂದಿರುವುದೇ ಇದಕ್ಕೆ ಕಾರಣ ಎಂದಿದ್ದರು.

ಜಾತಕ ವಿಮರ್ಶೆ: ಎಚ್.ಡಿ.ರೇವಣ್ಣ ರಾಜಕೀಯ ಔನ್ನತ್ಯಕ್ಕೆ ಕಾಲ ಸನ್ನಿಹಿತಜಾತಕ ವಿಮರ್ಶೆ: ಎಚ್.ಡಿ.ರೇವಣ್ಣ ರಾಜಕೀಯ ಔನ್ನತ್ಯಕ್ಕೆ ಕಾಲ ಸನ್ನಿಹಿತ

ಮುಂದಿನ ಕಾರ್ತಿಕ ಮಾಸದವರೆಗೂ ಮಳೆಯ ಆರ್ಭಟ ಜೋರಾಗಲಿದೆ

ಮುಂದಿನ ಕಾರ್ತಿಕ ಮಾಸದವರೆಗೂ ಮಳೆಯ ಆರ್ಭಟ ಜೋರಾಗಲಿದೆ

ಹಾಸನದಲ್ಲಿ ಸೋಮವಾರ (ಆ 20) ಮಾತನಾಡುತ್ತಿದ್ದ ಶ್ರೀಗಳು, ಮುಂದಿನ ಕಾರ್ತಿಕ ಮಾಸದವರೆಗೂ ಮಳೆಯ ಆರ್ಭಟ ಜೋರಾಗಲಿದೆ. ಮಳೆ, ಪ್ರವಾಹ, ಭೂಕುಸಿತ, ನೈಸರ್ಗಿಕ ವಿಕೋಪದಿಂದ ಇನ್ನಷ್ಟು ತೊಂದರೆಯಾಗಲಿದೆ ಎಂದು ಶ್ರೀಗಳು ನುಡಿದಿದ್ದಾರೆ. ರಾಜ್ಯದ ಕೆಲವು ಭಾಗಗಳಲ್ಲಿ ಪ್ರವಾಹದಿಂದ ಆದ ತೊಂದರೆಗಳಿಂದ ಸಾರ್ವಜನಿಕರು ಇನ್ನೂ ಸುಧಾರಿಸಿಕೊಳ್ಳದ ಈ ಹೊತ್ತಿನಲ್ಲಿ ಕೋಡಿಶ್ರೀಗಳ ಭವಿಷ್ಯ ಇನ್ನಷ್ಟು ಚಿಂತೆಗೀಡಾಗುವಂತೆ ಮಾಡಿದೆ.

ಬಿತ್ತಿದ ಬೆಳಸು ಪರರು ಕೊಯ್ದಾರು

ಬಿತ್ತಿದ ಬೆಳಸು ಪರರು ಕೊಯ್ದಾರು

ರಾಜ್ಯ ಚುನಾವಣೆಯ ಸಂದರ್ಭದಲ್ಲಿ ಭವಿಷ್ಯ ನುಡಿದಿದ್ದ ಶ್ರೀಗಳು, "ಬಿತ್ತಿದ ಬೆಳಸು ಪರರು ಕೊಯ್ದಾರು" ಎಂದು ಹೇಳಿದ್ದರು. ಅದರಂತೇ, ಬಿತ್ತಿದ ಬೀಜ, ಬೆಳೆದು ಬಂದ ಪೈರು ಇದು ಮುಂದಿನ ಅಸೆಂಬ್ಲಿ ಚುನಾವಣೆ. ಇದರಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಬೆಳೆದ ಬೆಳೆಯನ್ನು ಪರರು (ಜೆಡಿಎಸ್) ಕೊಯ್ದುಕೊಳ್ಳೂತ್ತಾರೆಂದು ಅರ್ಥೈಸಬಹುದು. ಮಾರ್ಮಿಕವಾಗಿ ಕುಮಾರಸ್ವಾಮಿ ಮುಂದಿನ ಸಿಎಂ ಎನ್ನುವ ಭವಿಷ್ಯವನ್ನು ಶ್ರೀಗಳು ಹೇಳಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.

ಸರಕಾರದ ಮುಖ್ಯ ವ್ಯಕ್ತಿಯೊಬ್ಬರ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ

ಸರಕಾರದ ಮುಖ್ಯ ವ್ಯಕ್ತಿಯೊಬ್ಬರ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ

ಈ ಸಲದ ಚಂದ್ರ ಗ್ರಹಣ (ಜುಲೈ 27) 107 ಅಪಾಯದ ಮುನ್ಸೂಚನೆಯಂತೆ ಕಾಣುತ್ತಿದೆ. ಭಿನ್ನಾಭಿಪ್ರಾಯ ದೊಡ್ಡ ಮಟ್ಟದಲ್ಲಿ ಭುಗಿಲೆದ್ದು, ಸರಕಾರದ ಮುಖ್ಯ ವ್ಯಕ್ತಿಯೊಬ್ಬರ ಆರೋಗ್ಯದ ಮೇಲೂ ದೊಡ್ಡ ಮಟ್ಟದ ಪರಿಣಾಮ ಬೀರುವ ಸಾಧ್ಯತೆ ಇದೆ. ಇನ್ನು ಸರಕಾರಕ್ಕೆ ಅಳಿವು- ಉಳಿವಿನ ಪ್ರಶ್ನೆ ಎದುರಾಗುತ್ತದೆ. ಮನಸ್ಸಿನ ಕಹಿ ನಿವಾರಿಸಿಕೊಳ್ಳಲಿಲ್ಲ ಅಂದರೆ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರಕಾರಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಖ್ಯಾತ ಜ್ಯೋತಿಶಿ ಪ್ರಕಾಶ್ ಅಮ್ಮಣ್ಣಾಯ ಅವರೂ ಹೇಳಿದ್ದರು.

English summary
Another prediction by Shivananada Shivayogi Rajendra seer of Arasikere Kodi Mutt. Seet in his prediction said, heavy rain, natural calamities and flood will continue till Karthika Masa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X