ಜನರಿಗೆ ಕಾದಿದೆ ಮತ್ತೊಂದು ಬರೆ; ಇದರ ಬೆಲೆ ಏರುವುದು "ಗ್ಯಾರಂಟಿ"
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಜನರ ಹಿತವನ್ನು ಮರೆತು ಆಡಳಿತ ನಡೆಸುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಕಾಂಗ್ರೆಸ್ ಸರ್ಕಾರ ಪದೇ ಪದೇ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಿದೆ. ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ವಿರೋಧ ಪಕ್ಷಗಳು ಕಿಡಿ ಕಾರುತ್ತಿವೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಚುನಾವಣೆಗಳ ಸಮಯದಲ್ಲಿ ಗ್ಯಾರಂಟಿಗಳನ್ನು ನೀಡುವುದಾಗಿ ಘೋಷಣೆ ಮಾಡಿತ್ತು. ಈ ವಿಷಯ ದೇಶದಲ್ಲೇ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ತಮ್ಮ ಸರ್ಕಾರ ಬಂದರೆ ಗ್ಯಾರಂಟಿಗಳನ್ನು ಜಾರಿಗೆ ತರುತ್ತದೆ ಎಂದು ಹೇಳಿದ್ದ ಕಾಂಗ್ರೆಸ್, ಈಗಗಾಲೇ ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ಆದರೆ ಈ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸರ್ಕಾರ ಹೆಣಗಾಟ ನಡೆಸುತ್ತಿದೆ.

ಗ್ಯಾರಂಟಿಗೆ ಹಣ ಹೊಂದಿಸಲು ಹರಸಾಹಸ
ಆದಾಯದ ಮೂಲಗಳನ್ನು ಹೆಚ್ಚಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಪ್ಲ್ಯಾನ್ ಮಾಡಿಕೊಂಡಿದೆ. ಇದರ ಭಾಗವಾಗಿಯೇ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಮೇಲಿನ ಸೆಸ್ ಹೆಚ್ಚಿಸಲಾಗಿದೆ. ಇದರ ನೇರ ಹೊರೆ ಜನಸಾಮಾನ್ಯರ ಮೇಲೆ ಬೀಳುತ್ತದೆ. ಅಲ್ಲದೆ ರಾಜ್ಯದಲ್ಲಿ ತರಕಾರಿ ಹಾಗೂ ಕಾಳು ಕಡಿಗಳ ಬೆಲೆಗಳು ಏರಿಕೆ ಆಗಿವೆ. ರಾಜ್ಯದಲ್ಲಿ ಕಾಲಕ್ಕೆ ಮಳೆ ಆಗದೆ ರೈತ ಕಂಗಾಲಾಗಿದ್ದಾನೆ. ಈ ವೇಳೆ ಬೆಲೆ ಏರಿಕೆ ಎಷ್ಟು ಸರಿ ಎನ್ನುವ ಪ್ರಶ್ನೆಗಳು ಜನ ಕೇಳುತ್ತಿದ್ದಾರೆ.
ಈಗ ಹಾಲಿನ ದರವನ್ನು ರಾಜ್ಯ ಸರ್ಕಾರ ಹೆಚ್ಚಿಸಿತ್ತು. ಪ್ರತಿ ಪ್ಯಾಕೇಟ್ ಹಾಲಿಗೆ 2 ರೂಪಾಯಿ ಹೆಚ್ಚಳ ಮಾಡಿದೆ. ಆದರೆ ಇದಕ್ಕೆ ರಾಜ್ಯ ಸರ್ಕಾರ ಹಾಲಿನ ದರವನ್ನು ಏರಿಕೆ ಮಾಡಿಲ್ಲ. ಹಾಲಿನ ಉತ್ಪಾದನೆಯು ಹೆಚ್ಚಾಗಿದೆ. ಹೀಗಾಗಿ ಪ್ರತಿ ಪ್ಯಾಕೇಟ್‌ನಲ್ಲಿ 50 ಎಂಎಲ್ ಹೆಚ್ಚಿನ ಹಾಲನ್ನು ಗ್ರಾಹಕರಿಗೆ ನೀಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು.
ಇಷ್ಟೇಲ್ಲಾ ಬೆಲೆ ಏರಿಕೆ ಆದರೂ ಸಹ ಇನ್ನು ಗ್ಯಾರಂಟಿಗಳಿಗೆ ಹಣ ಹೊಂದಿಸಲು ಆಗುತ್ತಿಲ್ಲ. ಹೀಗಾಗಿ ಮತ್ತೆ ಬೇರೆ ಮಾರ್ಗಗಳತ್ತ ಸರ್ಕಾರ ಗಮನ ಹರಿಸುತ್ತಿದೆ. ಈ ವೇಳೆ ಸರ್ಕಾರ ಮೂಲ ಭೂತ ಸೌಕರ್ಯವನ್ನೇ ಟಾರ್ಗೆಟ್ ಮಡಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ನೀರಿನ ದರವೂ ಏರಿಕೆ ಆಗಲಿದೆ.

ಕಾದಿದೆ ಇನ್ನೊಂದು ಬರೆ
ರಾಜ್ಯದ ಜನತೆಗೆ ಐದು ಗ್ಯಾರಂಟಿಗಳನ್ನು ನೀಡಿ 56 ಸಾವಿರ ಕೋಟಿ ರೂ. ಹೊರೆ ಮಾಡಿಕೊಂಡಿರುವ ರಾಜ್ಯ ಸರ್ಕಾರ, ಇದನ್ನು ಸರಿದೂಗಿಸಲು ಹಲವು ಪ್ಲ್ಯಾನ್ ಮಾಡುತ್ತಿದೆ. ಇದರ ಮುಂದುವರೆದ ಭಾಹಗವಾಗಿ ಇನ್ನು ಕೆಲವೇ ದಿನಗಳಲ್ಲಿ ನೀರಿನ ದರವೂ ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ. ಇದಕ್ಕೆ ಸಮಜಾಯಿಶಿ ನೀಡಲಾಗಿದ್ದು, ಬೆಂಗಳೂರಿನಲ್ಲಿ ಕಳೆದ 14 ವರ್ಷಗಳಿಂದ ದರ ಏರಿಸಲಾಗಿಲ್ಲ. ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಅನಿವಾರ್ಯವಾಗಿದೆ ಎಂದು ಇತ್ತೀಚಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದರು.
ಇದರಿಂದ ಇನ್ನೇನು ಕೆಲವೇ ದಿನಗಳಲ್ಲಿ ಮತ್ತೊಂದು ಬರೆ ಜನ ಸಾಮಾನ್ಯರ ಮೇಲೆ ಬೀಳುವುದು ಗ್ಯಾರಂಟಿ. ಈಗಾಗಲೇ ಬೆಂಗಳೂರಿನ ಜಲಮಂಡಳಿ ದರ ಪರಿಷ್ಕರಣೆಯ ಪ್ರಸ್ತಾವನ್ನು ರಾಜ್ಯ ಸರ್ಕಾರದ ಮುಂದಿಟ್ಟಿದೆ. ಸಚಿವ ಮಾತು ಕೇಳಿದ್ರು ನೀರಿನ ದರ ಏರುವುದು ಗ್ಯಾರಂಟಿ ಎಂದು ತೋರುತ್ತದೆ.












Click it and Unblock the Notifications