ಹುಬ್ಬಳ್ಳಿ ಬೈಪಾಸ್‌ನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ
ಹುಬ್ಬಳ್ಳಿ ಬೈಪಾಸ್‌ನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ಬೈಪಾಸ್ ಸಾವಿನ ಹೆದ್ದಾರಿ ಎಂದೇ ಕುಖ್ಯಾತಿ ಗಳಿಸಿದೆ. ಈ ಭಾಗದಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು. ಈ ಭಾಗದ ವಾಹನ ಸವಾರರು ಸಂಕಷ್ಟ ಎದುರಿಸುತ್ತಿದ್ದಾರೆ.
ಸಾವಿನ ಹೆದ್ದಾರಿ ಎನ್ನುವ ಕುಖ್ಯಾತಿಗೆ ಪಾತ್ರವಾಗಿರುವ ಈ ರಸ್ತೆಯಲ್ಲಿ ಪ್ರತಿ ತಿಂಗಳೂ ಅಪಘಾತಗಳು ಸಂಭವಿಸುತ್ತಿದ್ದು. ಅಮಾಯಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಈ ಭಾಗದಲ್ಲಿ ಬೈಕ್‌ವೊಂದಕ್ಕೆ ವಾಹನ ಡಿಕ್ಕಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ಹೊರವಲಯದ ಗೋಕುಲ ಗ್ರಾಮದ ಧಾರಾವತಿ ಹನುಮಂತ ದೇವಸ್ಥಾನದ ಸಮೀಪದಲ್ಲಿರುವ ಬೈಪಾಸ್ ಈ ದುರಂತ ಸಂಭವಿಸಿದೆ.

ಭೀಕರ ರಸ್ತೆ ಅಪಘಾತಕ್ಕೆ ಜನ ಬೆಚ್ಚಿಬಿದಿದ್ದಾರೆ. ಭಾರೀ ವೇಗವಾಗಿ ಬಂದಿರುವ ವಾಹನವೊಂದು ಬೈಕ್‌ಗೆ ಡಿಕ್ಕಿಯಾಗಿದೆ. ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ವಾಹನವೊಂದು ಬೈಕ್‌ಗೆ ವೇಗವಾಗಿ ಬಂದು ಡಿಕ್ಕಿ ಹೊಡಿದಿದೆ. ಇದರಿಂದ ಕ್ಷಣಾರ್ಧದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಆದರೆ, ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಹುಬ್ಬಳ್ಳಿಯ ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಕಾಮಗಾರಿಗೆ ಚಾಲನೆ ಸಿಕ್ಕು ಮೂರು ವರ್ಷ: ಇನ್ನು ಈ ಭಾಗದಲ್ಲಿ ರಸ್ತೆ ಅಗಲೀಕರಣ ಮಾಡಿ ಅಪಘಾತಗಳನ್ನು ತಪ್ಪಿಸಬೇಕು ಎನ್ನುವ ಒತ್ತಾಯ ಕೇಳಿ ಬರುತ್ತಲ್ಲೇ ಇದೆ. ಆದರೆ, ಕಳೆದ ಮೂರು ವರ್ಷಗಳ ಹಿಂದೆಯೇ ಹೆದ್ದಾರಿ-1400 ರಸ್ತೆ ಅಗಲೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಆದರೆ,ಇದರಿಂದ ಯಾವುದೇ ಬದಲಾವಣೆ ಆಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಈ ಭಾಗದಲ್ಲಿ ಈಗಲೂ ಜನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸಾವಿನ ಹೆದ್ದಾರಿ ಎನ್ನುವ ಕುಖ್ಯಾತಿ: ಹುಬ್ಬಳ್ಳಿ - ಧಾರವಾಡದ ಮಾರ್ಗದ ನಡುವಿನ ಬೈಪಾಸ್ ರಸ್ತೆಯನ್ನು ಸಾವಿನ ಹೆದ್ದಾರಿ ಎಂದು ಇಲ್ಲಿನ ಜನ ಹೇಳುತ್ತಾರೆ. ನಿರಂತರವಾಗಿ ಅಪಘಾತಗಳು ಇಲ್ಲಿ ಸಂಭವಿಸುತ್ತಿರುವುದೇ ಇದಕ್ಕೆ ಕಾರಣ. ಕಳೆದ ಹಲವು ವರ್ಷಗಳಿಂದ ಈ ಭಾಗದಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿದ್ದರೂ, ಪರಿಹಾರ ಕಾರ್ಯ ಚುರುಕಾಗಿಲ್ಲ.
ಕಳೆದ ಮೂರು ವರ್ಷದ ಹಿಂದೆಯೇ ರಸ್ತೆ ಅಗಲೀಕರಣ ಮಾಡಿ ಈ ಭಾಗದಲ್ಲಿ ನಡೆಯುವ ರಸ್ತೆ ಅಪಘಾತಗಳನ್ನು ತಪ್ಪಿಸಲು ಉದ್ದೇಶಿಸಲಾಗಿತ್ತು. ಆದರೆ, ರಸ್ತೆ ಅಗಲೀಕರಣ ಕಾಮಗಾರಿ ಆಮೆ ವೇಗದಲ್ಲಿ ನಡೆಯುತ್ತಿದ್ದು, ಜನ ಹೈರಾಣಾಗಿದ್ದಾರೆ. ಈ ರಸ್ತೆಯಲ್ಲಿ ಕಳೆದ ಒಂದು ದಶಕದ ಅವಧಿಯಲ್ಲಿ 1,400ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಎನ್ನುತ್ತಾದೆ ಅಂಕಿ - ಅಂಶ.
2023ನೇ ಸಾಲಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಹಾಗೂ ಕೆಲವು ಪರಿಹಾರ ಕಾರ್ಯಗಳಿಂದಾಗಿ ಈ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಇಲ್ಲಿನ ತಾರಿಹಾಳ ಬೈಪಾಸ್ ರಸ್ತೆಯಲ್ಲೂ ಭೀಕರ ರಸ್ತೆ ಅಪಘಾತ ಸಂಭವಿಸುವುದು ವರದಿಯಾಗುತ್ತಲ್ಲೇ ಇದೆ. ರಸ್ತೆ ಅಗಲೀಕರಣದ ನಂತರವಾದರೂ ಅಪಘಾತ ತಗ್ಗಬಹುದು ಎಂದೇ ಜನ ನಿರೀಕ್ಷಿಸಿದ್ದರು. ಆದರೆ, ಕಾಮಗಾರಿಯೇ ಅತ್ಯಂತ ವಿಳಂಬವಾಗಿ ಸಾಗುತ್ತಿದೆ.












Click it and Unblock the Notifications