Anti-conversion Law Revoke: ಬಿಜೆಪಿ ಅವಧಿಯಲ್ಲಿ ಮಾಡಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ರದ್ದು: ಸಂಪುಟ ಮಹತ್ವದ ನಿರ್ಧಾರ
ಬೆಂಗಳೂರು, ಜೂನ್ 15: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ರದ್ದು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರಗಳನ್ನ ತೆಗೆದುಕೊಂಡಿದ್ದು, ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್.ಕೆ.ಪಾಟೀಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಪಿಎಂಸಿ ಕಾಯ್ದೆಗಳನ್ನು ರದ್ದು ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಅಲ್ಲದೆ, ಹಿಂದಿನ ಸರ್ಕಾರದ ಮಾಡಿದ್ದ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ರದ್ದು ಮಾಡಿ, ಈ ಹಿಂದೆ ಪಠ್ಯವನ್ನು ಮುಂದುವರಿಸಲು ಸಂಪುಟ ತೀರ್ಮಾನಿಸಿದೆ ಎಂದು ತಿಳಿಸಿದರು.

ಇನ್ನೂ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಲು ಸಚಿವ ಸಂಪುಟದಲ್ಲಿ ನಿರ್ಧಾರ ಮಾಡಿದೆ. ಇದರಿಂದ ರೈತರಿಗೆ ನಷ್ಟವಾಗಿದೆ ಹಾಗೂ ಅವಲಂಭಿತರಿಗೆ ನಷ್ಟವಾಗಿದೆ. ಈ ಹಿನ್ನಲೆಯಲ್ಲಿ ಹಳೆ ಎಪಿಎಂಸಿ ಕಾಯ್ದೆಯನ್ನು ಕೆಲವೊಂದು ಮಾರ್ಪಾಡುಗಳ ಮಾಡಿ ಮುಂಬರುವ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲು ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು,
ಬಿಜೆಪಿ ಅವಧಿಯಲ್ಲಿ ಮಾಡಿದ್ದ ಪಠ್ಯ ಪರಿಷ್ಕರಣೆಗೆ ಕೊಕ್ ನೀಡಲು ಸಂಪುಟದಲ್ಲಿ ನಿರ್ಧಾರಿಸಿದ್ದು, ಬಿಜೆಪಿ ಶಾಲಾ ಪಠ್ಯದಲ್ಲಿ ಸೇರಿಸಿದ್ದ ಹೆಡಗೆವಾರ್, ಚಕ್ರವರ್ತಿ ಸೂಲೆಬೆಲೆ, ವೀರ್ ಸಾವರ್ಕರ್ ಪಠ್ಯವನ್ನು ತೆಗೆಯಲಾಗಿದೆ. ಇನ್ನು ಜವಾಹರ್ ಲಾಲ್ ನೆಹರೂ, ಡಾ. ಬಿಆರ್ ಅಂಬೇಡ್ಕರ್, ಸಾವಿತ್ರಿ ಭಾಯಿ ಪುಲೆ ಸೇರಿದಂತೆ ಕೆಲ ಪಠ್ಯಗಳನ್ನು ಸೇರ್ಪಡೆಗೆ ಸಂಪುಟ ಅನುಮೋದನೆ ನೀಡಿದೆ ಎಂದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಮಕ್ಕಳಿಗೆ ಈಗಾಗಲೇ ಪಠ್ಯ ವಿತರಿಸಲಾಗಿದೆ. ಹೀಗಾಗಿ ಅವುಗನ್ನು ವಾಪಸ್ ಪಡೆದರೆ ಮತ್ತೆ ಕೋಟ್ಯಾಂಟರು ರೂಪಾಯಿ ಹಣ ವ್ಯಯಿಸಬೇಕು. ಹೀಗಾಗಿ ಸಪ್ಲಿಮೆಂಟರಿ ಪುಸ್ತಕ ನೀಡಲಾಗುತ್ತದೆ. ಶಿಕ್ಷಣ ತಜ್ಞರ ಸಲಹೆ ಪಡೆದು ಸಪ್ಲಿಮೆಂಟರಿ ಪುಸ್ತಕ ನೀಡಲಾಗುತ್ತದೆ. ಇದರ ಜೊತೆಗೆ ಮಕ್ಕಳಿಗೆ ಯಾವ ಪಾಠ ಮಾಡಬೇಕು ಅನ್ನೋ ಮಾರ್ಗಸೂಚಿಯನ್ನು ಶಿಕ್ಷಕರಿಗೆ ನೀಡಲಾಗುತ್ತದೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.
6 ರಿಂದ 10 ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಮಾತ್ರ ಬದಲಾವಣೆ ಮಾಡಲಾಗಿದೆ ಎಂದು ಮಧುಬಂಗಾರಪ್ಪ ಹೇಳಿದ್ದಾರೆ. ನಮ್ಮ ಮಕ್ಕಳಿಗೆ ಯಾವ ಪಠ್ಯ ಅಗತ್ಯವಿದೆ ಅನ್ನೋದನ್ನು ಮಾತ್ರ ಇರಿಸಲಾಗಿದೆ. ಅನಗತ್ಯ ಪಠ್ಯಗಳನ್ನು ತೆಗೆಯಲಾಗಿದೆ.
ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದಬೇಕು. ಇದಕ್ಕಾಗಿ ಸಂಪುಟ ಸಭೆಯಲ್ಲಿ ಶಾಲೆಯಲ್ಲಿ ಸಂವಿಧಾನ ಪೀಠಿಕೆ ಓದು ಕಡ್ಡಾಯಗೊಳಿಸಲು ತೀರ್ಮಾನಿಸಲಾಗಿದೆ. ರಾಷ್ಟ್ರಗೀತಿ, ನಾಡಗೀತೆ ಜೊತೆಗೆ ಸಂವಿಧಾನ ಪೀಠಿಕೆ ಓದಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.












Click it and Unblock the Notifications