ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಣಾಳಿಕೆ ಈಡೇರಿಕೆಗೆ ಮುಚ್ಚಳಿಕೆ ನೀಡುವಂತೆ ಹೈಕೋರ್ಟ್‌ಗೆ ಪಿಐಎಲ್

By Nayana
|
Google Oneindia Kannada News

ಬೆಂಗಳೂರು, ಮೇ 4: ಚುನಾವಣೆ ಸಂದರ್ಭಗಳಲ್ಲಿ ರಾಜಕೀಯ ಪಕ್ಷಗಳು ಬಿಡುಗಡೆ ಮಾಡುವ ಪ್ರಣಾಳಿಕೆಗಳು ಸಾರ್ವಜನಿಕರನ್ನು ಮರುಳು ಮಾಡುವಂತಿದ್ದು ಎಂದು ಭ್ರಷ್ಟಾಚಾರ ವಿರೋಧಿ ಭಾರತೀಯ ಮಂಡಳಿಯಿಂದ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಪ್ರತಿಯೊಂದು ಪಕ್ಷಗಳೂ ಪ್ರಣಾಳಿಕೆ ಬಿಡುಗಡೆ ಮಾಡುವ ಮುನ್ನ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಬೇಕು ಮತ್ತು ಗೆದ್ದು ಅಧಿಕಾರಕ್ಕೆ ಬಂದರೆ ತಾವು ನೀಡುವ ಭರವಸೆಗಳನ್ನು ಐದು ವರ್ಷಗಳಲ್ಲಿ ಈಡೇರಿಸುವ ಪ್ರಮಾಣ ಮಾಡಬೇಕು. ಇದಕ್ಕಾಗಿ ಎಲ್ಲ ರಾಜಕೀಯ ಪಕ್ಷಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಭ್ರಷ್ಟಾಚಾರ ವಿರೋಧಿ ಭಾರತೀಯ ಮಂಡಳಿಯಿಂದ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

'ನಮ್ಮ ಕರ್ನಾಟಕಕ್ಕೆ ನಮ್ಮ ವಚನ': ಬಿಜೆಪಿ ಪ್ರಣಾಳಿಕೆ ಮುಖ್ಯಾಂಶ 'ನಮ್ಮ ಕರ್ನಾಟಕಕ್ಕೆ ನಮ್ಮ ವಚನ': ಬಿಜೆಪಿ ಪ್ರಣಾಳಿಕೆ ಮುಖ್ಯಾಂಶ

ಅರ್ಜಿದಾರರ ಮನವಿ ಏನು?: ಪ್ರಣಾಳಿಕೆಗಳಲ್ಲಿ ಸುಳ್ಳು ಭರವಸೆ ನೀಡಿ ಮತದಾರರನ್ನು ಮೋಸ ಮಾಡಲಾಗುತ್ತಿದೆ. ಸಾರ್ವಜನಿಕರು ಹಾಗೂ ಮತದಾರರು ರಾಷ್ಟ್ರೀಯ ಮಾನ್ಯತೆ ಪಡೆದ ಪಕ್ಷಗಳ ಮೇಲೆ ನಂಬಿಕೆ ಕಳೆದುಕೊಂಡಿವೆ.

Anti corruption forum files PIL seeking guarantee on manifesto

ಅಧಿಕಾರಕ್ಕೆ ಬಂದಮೇಲೆ ತಾವು ನೀಡಿದ ಭರವಸೆ ಮರೆತು, ಆಂತರಿಕ ಪಕ್ಷದ ಕಚ್ಚಾಟದಲ್ಲಿ ಮುಳುಗುತ್ತಾರೆ. ಪ್ರತಿ ವರ್ಷದ ಬಜೆಟ್‌ನಲ್ಲಿ ಘೋಷಿಸುವ ಕಾರ್ಯಕ್ರಮಗಳು ಶೇಕಡ 10 ಸಹ ಜಾರಿಗೆ ಬರುವುದಿಲ್ಲ.

ಸಾರ್ವಜನಿಕರ ತೆರಿಗೆ ಹಣವನ್ನು ರಾಜಕಾರಣಿ ಗಳು ಲೂಟಿ ಮಾಡಿ ಕೋಟ್ಯಧಿಪತಿಗಳಾಗುತ್ತಿದ್ದಾರೆ. ಹೀಗಾಗಿ ರಾಜಕೀಯ ಪಕ್ಷಗಳು ಕೋರ್ಟ್ ಮುಂದೆ ಪ್ರಮಾಣ ಪತ್ರ ಸಲ್ಲಿಸಬೇಕು‌. ಪ್ರಣಾಳಿಕೆ ಯಲ್ಲಿ ನೀಡಿದ ಆಶ್ವಾಸನೆ ಈಡೇರಿಸದಿದ್ದರೆ ಅವರ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

English summary
Anti corruption forum has filed public interest litigation in high Court on Friday seeking mandatory for political parties should file affidavit in high court guarantee on implementation of their manifesto if they come to power.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X