ಗೋಹತ್ಯೆ ವಿರೋಧಿ ಕಾನೂನು ಚರ್ಚೆಗೆ ಸಿದ್ಧ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂನ್ 6: ಕಟ್ಟುನಿಟ್ಟಾದ ಗೋಹತ್ಯೆ ವಿರೋಧಿ ಕಾನೂನನ್ನು ಮರುಪರಿಶೀಲಿಸುವುದಾಗಿ ಪಶುಸಂಗೋಪನಾ ಸಚಿವ ಕೆ ಮಹದೇವ್ ಹೇಳಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯವನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರ ತಂದಿರುವ ಕಾನೂನಿನಲ್ಲಿ ಸ್ಪಷ್ಟತೆಯ ಕೊರತೆಯಿದ್ದು, ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಆದರೆ, ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸಚಿವ ಸಂಪುಟದಲ್ಲಿ ಚರ್ಚಿಸುತ್ತೇವೆ, ಇನ್ನೂ ಯಾವುದನ್ನೂ ನಿರ್ಧರಿಸಿಲ್ಲ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ ಅವರು ಎಮ್ಮೆ, ಕೋಣಗಳನ್ನು ಕಡಿಯಬಹುದಾದರೆ, ಹಸುಗಳನ್ನು ಏಕೆ ಕೊಲ್ಲಬಾರದು?" ಎಂದು ಹೇಳಿದ್ದರು. ಇದಕ್ಕೆ ಸಹಜವಾಗಿ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು.
ಹಿಂದಿನ ಬಿಜೆಪಿ ಸರ್ಕಾರ ಗೋಹತ್ಯೆ ನಿಷೇಧ ವಿಧೇಯಕ ತಂದಿತ್ತು. ಅದರಲ್ಲಿ ಎಮ್ಮೆಗಳ ಹತ್ಯೆಗೆ ಅವಕಾಶ ಮಾಡಿಕೊಟ್ಟಿದ್ದರು. ಆದರೆ ಗೋಹತ್ಯೆ ಮಾಡಬಾರದು ಎಂದು ಹೇಳಿದ್ದರು. ಅದನ್ನು ಚರ್ಚಿಸಿ ತೀರ್ಮಾನಿಸುತ್ತೇವೆ. ವಯಸ್ಸಾದ ಹಸುಗಳನ್ನು ವಧೆ ಮಾಡುವುದರಿಂದ ಜಾನುವಾರುಗಳನ್ನು ನಿರ್ವಹಿಸುವಲ್ಲಿ ರೈತರು ಎದುರಿಸುತ್ತಿರುವ ಕಷ್ಟಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ಕೆ ವೆಂಕಟೇಶ್ ಸಲಹೆ ನೀಡಿದರು.
ಸಚಿವರ ಹೇಳಿಕೆ ಖಂಡಿಸಿ ಬಿಜೆಪಿ ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರಣಿ ಟ್ವೀಟ್ ಮಾಡಿ ಕೆ ವೆಂಕಟೇಶ್ ಅವರ ಹೇಳಿಕೆಯನ್ನು ಖಂಡಿಸಿದರು. ಅಲ್ಲದೆ ಸಿದ್ದರಾಮಯ್ಯ ಅವರು ತಮ್ಮ ಸಹೋದ್ಯೋಗಿಗೆ ಸೂಕ್ತ ಸಲಹೆ ನೀಡುವಂತೆ ಕೋರಿದ್ದರು.
ಅವರು ಟ್ವೀಟ್‌ನಲ್ಲಿ ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ ಅವರ ಹೇಳಿಕೆ ಆಘಾತಕಾರಿಯಾಗಿದೆ. ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಭಾರತೀಯರಾದ ನಾವು ಹಸುವಿನ ಜೊತೆ ಭಾವನಾತ್ಮಕ ಸಂಬಂಧ ಹೊಂದಿದ್ದೇವೆ ಮತ್ತು ಅವುಗಳನ್ನು ತಾಯಿ ಎಂದು ಪೂಜುತ್ತೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು.
ಗೋಹತ್ಯೆ ಮಸೂದೆಯನ್ನು ರದ್ದುಗೊಳಿಸಲು ಕಾಂಗ್ರೆಸ್‌ಗೆ ಯಾವುದೇ ಉತ್ತಮ ಕಾರಣವಿಲ್ಲ. ಕಾಂಗ್ರೆಸ್ ಹಿಂದೂಗಳ ಭಾವನೆಗೆ ವಿರುದ್ಧವಾಗಿದೆ. ಅವರು ಕೋಮು ಸೌಹಾರ್ದವನ್ನು ಕದಡಲು ಪ್ರಯತ್ನಿಸುತ್ತಿದ್ದಾರೆ. ಅವರಿಗೆ ಶಾಂತಿ ಬೇಡವಾಗಿದೆ ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಹೇಳಿದ್ದರು.












Click it and Unblock the Notifications