ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಪಿಎಲ್ ಕಾರ್ಡ್ ದಾರರಿಗೂ ಅನ್ನಭಾಗ್ಯ ವಿಸ್ತರಣೆ

|
Google Oneindia Kannada News

ಬಾಗಲಕೋಟೆ, ಫೆ. 1: ಎಪಿಎಲ್ ಕಾರ್ಡ್ ದಾರರಿಗೂ ಅನ್ನಭಾಗ್ಯ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಮೂಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಾಗಕೋಟೆಯ ಜಮಖಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ರಾಜ್ಯದ ಶೇ. 26 ರಷ್ಟು ಜನ ಇನ್ನು ಹಸಿವಿನಿಂದ ನರಳುತ್ತಿದ್ದಾರೆ. ಯಾರೂ ಹಸಿದ ಹೊಟ್ಟೆಯಲ್ಲಿ ಮಲುಗಬಾರು ಎಂಬ ಉದ್ದೇಶದಿಂದ ಯೋಜನೆ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.[ಸೋಮವಾರದಿಂದ ವಿಧಾನಸಭೆ ಜಂಟಿ ಅಧಿವೇಶನ]

siddaramaiah

ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯನ್ನು ಆರಂಭದಲ್ಲೇ ಜಾರಿಗೆ ತಂದು ಯಶಸ್ವಿಯಾಗಿದೆ. ರಾಜ್ಯದ ಲಕ್ಷಾಂತರ ಕುಟುಂಬಗಳು ಇದರ ಲಾಭ ಪಡೆದುಕೊಳ್ಳುತ್ತಿವೆ. ಈಗ ಎಪಿಎಲ್ ಕಾರ್ಡ್ ದಾರರನ್ನು ಈ ಪಟ್ಟಿಗೆ ಸೇರಿಸಲಾಗುವುದು ಎಂದು ಮಾಹಿತಿ ನೀಡಿದರು.[ದಿಢೀರನೆ ಶಾಲೆಗೆ ಬಂದ ಸಿದ್ದು ಕಂಡು ಮಕ್ಕಳಿಗೆ ಹಿಗ್ಗೋಹಿಗ್ಗು]

ಎಪಿಎಲ್ ಕುಟುಂಬಗಳನ್ನು ಯೋಜನೆ ವ್ಯಾಪ್ತಿಗೆ ಸೇರಿಸಿದಾಗ ರಾಜ್ಯದ ಬೊಕ್ಕಸದ ಮೇಲೆ ಹೊರೆ ಬೀಳುವುದು ಸಹಜ. ಆದರೆ ಕೆಳ ಮಧ್ಯಮ ವರ್ಗದ ಕುಟುಂಬಗಳ ನೆರವಿಗೆ ಧಾವಿಸಬೇಕಾಗಿರುವುದು ನಮ್ಮ ಕರ್ತವ್ಯ ಎಂದು ಹೇಳಿದರು.

English summary
APL card holders also eligible for 'AnnaBagya' scheme. Government decided to give the extent this succesful scheme to all APL card holders, said CM Siddaramaiah at Jamakhandi, Bagalakote
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X